ಹಿಂದೂಗಳ ಆರಾಧ್ಯ ದೈವ ಹಾಗೂ ಪವಿತ್ರ ಕ್ಷೇತ್ರವಾಗಿರುವ ಅಯೋಧ್ಯೆ ರಾಮಮಂದಿರದ ದೇಣಿಗೆಯನ್ನು 105 ಬಾರಿ ಕಳ್ಳತನ ಮಾಡಿದ ದೃಶ್ಯಗಳು ಸಿಸಿಟೀವಿಯಲ್ಲಿ ಸೆರೆಯಾಗಿವೆ ಎಂಬ ಆಘಾತಕಾರಿ ಸಂಗತಿಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ತನ್ನ ವರದಿಯಲ್ಲಿ ಉಲ್ಲೇಖಿಸಿದೆ.
ರಾಮಮಂದಿರದ ದೇಣಿಗೆ ಕಳವು ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಿತು. ಈ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಎಸ್‌ಐಟಿ ವರದಿಯನ್ನು ಉಲ್ಲೇಖಿಸಿ ಕೋರ್ಟ್‌ಗೆ ಮಾಹಿತಿ ನೀಡಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟೀವಿ ದೃಶ್ಯಾವಳಿಗಳು, ಸಾಕ್ಷಿಗಳ ಹೇಳಿಕೆಗಳು ಹಾಗೂ ಲಭ್ಯವಿರುವ ಎಲ್ಲಾ ತಾಂತ್ರಿಕ ಆಧಾರಗಳನ್ನು ಕೋರ್ಟ್‌ಗೆ ಸಲ್ಲಿಸಲಾಯಿತು. ಈವರೆಗೆ ಕೈಗೊಂಡಿರುವ ತನಿಖೆಯ ಸಂಪೂರ್ಣ ವಿವರವನ್ನು ಮುಖ್ಯ ನ್ಯಾ. ಸೂರ್ಯಕಾಂತ್, ನ್ಯಾ. ಜಯಮಾಲ್ಯ ಬಾಗ್ಚಿ ಹಾಗೂ ನ್ಯಾ. ವಿ. ಮೋಹನ ಅವರ ಪೀಠ ದಾಖಲಿಸಿಕೊಂಡಿತು.
09:00 AM (IST) Sep 22
ಕಾರ್ಯಾಚರಣೆಯ ಸಮಸ್ಯೆಗಳನ್ನು ಬಗೆಹರಿಸಲು ಮಂಗಳೂರು ರೈಲ್ವೆ ಪ್ರದೇಶವನ್ನು ಸಂಪೂರ್ಣವಾಗಿ ನೈಋತ್ಯ ರೈಲ್ವೆ ವ್ಯಾಪ್ತಿಗೆ ತರಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ಪಷ್ಟಪಡಿಸಿದ್ದಾರೆ. ಕೇರಳ ಸಂಸದರ ವಿರೋಧದ ನಡುವೆಯೂ, ಅನಗತ್ಯ ವಿಳಂಬ ತಪ್ಪಿಸಲು ಈ ನಿರ್ಧಾರ ಎಂದು ಅವರು ತಿಳಿಸಿದ್ದಾರೆ.
08:34 AM (IST) Sep 22
ಪಾಪ ಐದು ತಿಂಗಳ ಹಿಂದಷ್ಟೇ ಮದುವೆ ಆಗಿತ್ತು. ಕ್ರಿಕೆಟ್ ಆಡುತ್ತಿದ್ದ ಯುವಕನೊಬ್ಬ ಹಠಾತ್ ಕುಸಿದು ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ಕುರಿತ ಕಂಪ್ಲೀಟ್ ಮಾಹಿತಿ ಇಲ್ಲಿದೆ.. ಸ್ಟೋರಿ ಓದಿ.
08:00 AM (IST) Sep 22
ಅಯೋಧ್ಯೆ ರಾಮಮಂದಿರದ ದೇಣಿಗೆಯನ್ನು 105 ಬಾರಿ ಕಳ್ಳತನ ಮಾಡಿರುವ ಆಘಾತಕಾರಿ ದೃಶ್ಯಗಳು ಸಿಸಿಟೀವಿಯಲ್ಲಿ ಸೆರೆಯಾಗಿವೆ ಎಂದು ಎಸ್‌ಐಟಿ ವರದಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದ್ದು, ಆರೋಪಿಗಳಿಗೆ ಜಾಮೀನು ಸಿಗದಂತೆ ತಡೆಯಲು ಸೆಪ್ಟೆಂಬರ್ 25ರೊಳಗೆ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು.
ರಾಮಮಂದಿರದ ದೇಣಿಕೆ ಕಳವು ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಿತು. ಈ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಎಸ್‌ಐಟಿ ವರದಿಯನ್ನು ಉಲ್ಲೇಖಿಸಿ ಕೋರ್ಟ್‌ಗೆ ಮಾಹಿತಿ ನೀಡಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟೀವಿ ದೃಶ್ಯಾವಳಿಗಳು, ಸಾಕ್ಷಿಗಳ ಹೇಳಿಕೆಗಳು ಹಾಗೂ ಲಭ್ಯವಿರುವ ಎಲ್ಲಾ ತಾಂತ್ರಿಕ ಆಧಾರಗಳನ್ನು ಕೋರ್ಟ್‌ಗೆ ಸಲ್ಲಿಸಲಾಯಿತು. ಈವರೆಗೆ ಕೈಗೊಂಡಿರುವ ತನಿಖೆಯ ಸಂಪೂರ್ಣ ವಿವರವನ್ನು ಮುಖ್ಯ ನ್ಯಾ. ಸೂರ್ಯಕಾಂತ್, ನ್ಯಾ. ಜಯಮಾಲ್ಯ ಬಾಗ್ಚಿ ಹಾಗೂ ನ್ಯಾ. ವಿ. ಮೋಹನ ಅವರ ಪೀಠ ದಾಖಲಿಸಿಕೊಂಡಿತು.