
ನವದೆಹಲಿ(ಜೂ.19): ಕೊರೋನಾ ಎಂಬುದು ಮಹಾ ವಿಪತ್ತು ಎಂದು ಪರಿಗಣಿಸಿ ಭಾರತ ಅಳುತ್ತಾ ಕೂರುವುದಿಲ್ಲ. ಅದು ಎಷ್ಟೇ ದೊಡ್ಡ ವಿಪತ್ತು ಆಗಿರಲಿ. ಅದನ್ನು ಭಾರತ ಒಂದು ಅವಕಾಶವಾಗಿ ಪರಿವರ್ತಿಸಲಿದೆ. ಕೊರೋನಾ ವೈರಸ್ ವಿರುದ್ಧ ಭಾರತ ಹೋರಾಡುವುದಷ್ಟೇ ಅಲ್ಲ, ಗೆಲುವು ಸಾಧಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.
ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಖಾಸಗಿ ಕಂಪನಿಗಳಿಗೂ ಅವಕಾಶ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ವಾವಲಂಬಿಯಾಗಲು ಕೊರೋನಾ ಮಹಾಮಾರಿ ಭಾರತಕ್ಕೆ ಅವಕಾಶ ಒದಗಿಸಿದೆ. ಸ್ವಾವಲಂಬಿ ಎಂದರೆ ಆಮದು ಕಡಿತಗೊಳಿಸಿ, ವಿದೇಶಿ ವಿನಿಮಯವನ್ನು ಬಡವರ ಕಲ್ಯಾಣಕ್ಕೆ ಬಳಸುವುದಾಗಿದೆ. ಜತೆಗೆ ದೇಶೀಯ ಸಂಪನ್ಮೂಲವನ್ನು ಬಳಸಿ, ಆಮದನ್ನು ಮೇಕ್ ಇನ್ ಇಂಡಿಯಾ ಮೂಲಕ ಬದಲಿಸುವುದಾಗಿದೆ ಎಂದು ತಿಳಿಸಿದರು.
ಚೀನಾ ಸಂಘರ್ಷದಲ್ಲಿ ಕಳಚಿ ಬೀಳುತ್ತಿರುವ ಭಾರತದ ಮುಖವಾಡಗಳು
ವಲಸಿಗರ ಉದ್ಯೋಗ ನೀಡಲು 50 ಸಾವಿರ ಕೋಟಿ ರು. ಯೋಜನೆ
ನವದೆಹಲಿ: ಲಾಕ್‌ಡೌನ್ ಸಂದರ್ಭದಲ್ಲಿ ತಮ್ಮ ತವರು ರಾಜ್ಯಗಳಿಗೆ ಮರಳಿರುವ ವಲಸೆ ಕಾರ್ಮಿಕರಿಗೆ ಆರ್ಥಿಕವಾಗಿ ನೆರವಾಗುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಶನಿವಾರ 50 ಸಾವಿರ ಕೋಟಿ ರುಪಾಯಿ ಮೊತ್ತದ ಉದ್ಯೋಗ ಯೋಜನೆಯೊಂದಕ್ಕೆ ಚಾಲನೆ ನೀಡಲಿದ್ದಾರೆ.
ಗರೀಬ್ ಕಲ್ಯಾಣ ರೋಜಗಾರ್ ಅಭಿಯಾನ ಇದಾಗಿದ್ದು, ಹೆಚ್ಚಿನ ವಲಸೆ ಕಾರ್ಮಿಕರು ಇರುವ ಬಿಹಾರ, ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ಥಾನ, ಜಾರ್ಖಂಡ್ ಮತ್ತು ಒಡಿಶಾ- ಈ 6 ರಾಜ್ಯಗಳನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾಗಿದೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಈ ಯೋಜನೆಯಡಿ ತವರಿಗೆ ಮರಳಿದ ವಲಸೆ ಕಾರ್ಮಿಕರ ಜೀವನಾಧಾರಕ್ಕಾಗಿ 125 ದಿನಗಳ ಉದ್ಯೋಗವನ್ನು ಒದಗಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಶನಿವಾರ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ