*ಇಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ
*ಭಾರತ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ವಿರೋಧ ವ್ಯಕ್ತಪಡಿಸಿದ ಯೋಗ ಗುರು
*ಈ ಪಂದ್ಯ ರಾಷ್ಟ್ರಧರ್ಮಕ್ಕೆ ವಿರುದ್ಧ ಎಂದ ಬಾಬಾ ರಾಮದೇವ್
ನಾಗ್ಪುರ (ಅ. 24 ) : ಟಿ20 ವಿಶ್ವಕಪ್ (ICC T20 World Cup) ಟೂರ್ನಿಯ ಹೈವೋಲ್ಟೇಜ್ ಪಂದ್ಯ ಎನಿಸಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಕಾದಾಟವನ್ನು ಕಣ್ತುಂಬಿಕೊಳ್ಳಲು ಇಡೀ ಕ್ರಿಕೆಟ್ ಜಗತ್ತೇ ತುದಿಗಾಲಿನಲ್ಲಿ ನಿಂತಿದೆ. ಈ ನಡುವೆ ಭಾರತ ಮತ್ತು ಪಾಕ್ ನಡುವಿನ ಪಂದ್ಯ ರಾಷ್ಟ್ರಧರ್ಮಕ್ಕೆ ವಿರುದ್ಧವಾಗಿದೆ ಎಂದು ಯೋಗ ಗುರು ಬಾಬಾ ರಾಮ್‌ದೇವ್ ಹೇಳಿದ್ದಾರೆ.
T20 World Cup: ಭಾರತ vs ಪಾಕಿಸ್ತಾನ ನಡುವಿನ ಪಂದ್ಯ ಗೆಲ್ಲೋರು ಯಾರು..?
undefined
ನಾಗ್ಪುರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯೋಗ ಗುರು ರಾಮದೇವ್ (Baba Ramdev), ಭಾನುವಾರ ನಡೆಯಲಿರುವ ಭಾರತ-ಪಾಕಿಸ್ತಾನ ಟಿ 20 ವಿಶ್ವಕಪ್ ಪಂದ್ಯವು ರಾಷ್ಟ್ರೀಯ ಹಿತಾಸಕ್ತಿಗೆ ಮತ್ತು ರಾಷ್ಟ್ರಧರ್ಮಕ್ಕೆ ವಿರುದ್ಧವಾಗಿದೆ ಹಾಗೂ ಭಯೋತ್ಪಾದನೆಯ ಆಟ ಮತ್ತು ಕ್ರಿಕೆಟ್ ಆಟವನ್ನು ಒಟ್ಟಿಗೆ ಆಡಲು ಸಾಧ್ಯವಿಲ್ಲ' ಎಂದು ಹೇಳುವುದರ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಈ ಸಂದರ್ಭದಲ್ಲಿ ಬಾಲಿವುಡ್‌ನಲ್ಲಿ ನಡೆಯುತ್ತಿರುವ ಡ್ರಗ್ ಕೇಸ್ ಕುರಿತಾಗಿ ಕೂಡ ಬಾಬಾ ರಾಮ್‌ದೇವ್ ಮಾತನಾಡಿದ್ದಾರೆ. ಸಮಾಜದಲ್ಲಿ ಡ್ರಗ್ಸ್ ಸೇವನೆಯನ್ನು ವೈಭವೀಕರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
T20 World Cup Ind vs Pak ಟೀಂ ಇಂಡಿಯಾವನ್ನು ಗೆಲ್ಲಿಸ್ತಾರಾ ಮೆಂಟರ್ ಧೋನಿ..?
ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಇಂದು (ಅ. 24) ಸಂಜೆ ಏಳು ಗಂಟೆಗೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡೂ ತಂಡಗಳಿಗೆ ಟೂರ್ನಿಯಲ್ಲಿ ಇದು ಮೊದಲ ಪಂದ್ಯ. ಗೆಲುವಿನೊಂದಿಗೆ ಟೂರ್ನಿಯಲ್ಲಿ ಶುಭಾರಂಭ ಮಾಡುವ ಮೂಲಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ವಿರಾಟ್ ಕೊಹ್ಲಿ (Virat Kohli) ಹಾಗೂ ಬಾಬರ್ ಆಜಂ (Babar Azam)ರ ನೇತೃತ್ವದ ತಂಡಗಳು ಎದುರು ನೋಡುತ್ತಿವೆ. ವಿಶ್ವಕಪ್‌ಗಳಲ್ಲಿ ಭಾರತ ತಂಡವು ಪಾಕಿಸ್ತಾನ ಕ್ರಿಕೆಟ್ ತಂಡದ (Pakistan Cricket Team) ವಿರುದ್ಧ ಸೋತೇ ಇಲ್ಲ. ಟಿ20 ವಿಶ್ವಕಪ್‌ಗಳಲ್ಲಿ ಆಡಿರುವ ಐದೂ ಪಂದ್ಯಗಳಲ್ಲಿ ಜಯಭೇರಿ ಬಾರಿಸಿರುವ ಟೀಂ ಇಂಡಿಯಾ (Team India), ಸತತ 6ನೇ ಗೆಲುವಿನ ಮೇಲೆ ಕಣ್ಣಿಟ್ಟಿದೆ.
ಪಂದ್ಯಕ್ಕೂ ಮುನ್ನ ನಾಯಕರ ಮಾತು!
ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಪಾಕಿಸ್ತಾನ ತಂಡದ ನಾಯಕ ಬಾಬರ್ ಆಜಂ ಇಬ್ಬರೂ ಇದೊಂದು ಸಹಜ ಕ್ರಿಕೆಟ್ ಪಂದ್ಯ ಎಂದು ಹೇಳಿದ್ದರೂ ಈ ಹೈವೋಲ್ಟೇಜ್ ಪಂದ್ಯವನ್ನು ವೀಕ್ಷಿಸಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ.
'ಮೈದಾನದಿಂದ ಹೊರಗೆ ನಡೆಯುತ್ತಿರುವ ವಿಚಾರಗಳಿಗೆ ನಾವು ಗಮನ ನೀಡುವುದಿಲ್ಲ. ನಮ್ಮ ಗಮನ ಆಟದ ಮೇಲೆ ಸಂಪೂರ್ಣವಾಗಿ ಕೇಂದ್ರೀಕೃತವಾಗಿದೆ. ಬೇರೆ ಯಾವುದೇ ಪಂದ್ಯವನ್ನು ಹೇಗೆ ಆಡುತ್ತೇವೋ ಅದೇ ರೀತಿಯಲ್ಲೇ ಈ ಪಂದ್ಯವನ್ನು ಆಡಲಿದ್ದೇವೆ. ನಮ್ಮ ಮನಸ್ಥಿತಿ, ನಮ್ಮ ಅಭ್ಯಾಸದಲ್ಲಿ ಯಾವುದೇ ಬದಲಾವಣೆ ಆಗಿಲ್ಲ' - ವಿರಾಟ್ ಕೊಹ್ಲಿ, ಭಾರತ ತಂಡದ ನಾಯಕ.
ICC T20 World Cup Ind vs Pak ಬೆಟ್ಟಿಂಗ್ ದಂಧೆಯ ಮೇಲೆ ಹದ್ದಿನ ಕಣ್ಣಿಟ್ಟಿದೆ CCB..!
'ಹಿಂದಿನ ಫಲಿತಾಂಶಗಳ ಬಗ್ಗೆ ನಾವು ಹೆಚ್ಚು ಗಮನ ನೀಡುತ್ತಿಲ್ಲ. ಈ ವಿಶ್ವಕಪ್‌ನಲ್ಲಿ ಗೆಲ್ಲಬೇಕು ಎನ್ನುವುದಷ್ಟೇ ನಮ್ಮ ಗುರಿ. ನಮ್ಮ ಸಾಮರ್ಥ್ಯದ ಮೇಲೆ ಶೇ.100ರಷ್ಟು ವಿಶ್ವಾಸವಿಟ್ಟು, ಪ್ರತಿ ಪಂದ್ಯದಲ್ಲೂ ನಮ್ಮ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಂಡು ಗೆಲುವಿನತ್ತ ಹೆಜ್ಜೆ ಹಾಕಲು ಎದುರು ನೋಡುತ್ತಿದ್ದೇವೆ' - ಬಾಬರ್ ಆಜಂ, ಪಾಕಿಸ್ತಾನ ತಂಡದ ನಾಯಕ.