ಕೆಲವು ಕಾಂಗ್ರೆಸಿಗರಿಂದ ಬಿಜೆಪಿ ಪರ ಕೆಲಸ, ಪಕ್ಷದ್ರೋಹಿಗಳಿಗೆ ರಾಹುಲ್ ಗಾಂಧಿ ಎಚ್ಚರಿಕೆ!

Published : Mar 09, 2025, 09:42 AM ISTUpdated : Mar 09, 2025, 10:09 AM IST
ಕೆಲವು ಕಾಂಗ್ರೆಸಿಗರಿಂದ ಬಿಜೆಪಿ ಪರ ಕೆಲಸ, ಪಕ್ಷದ್ರೋಹಿಗಳಿಗೆ ರಾಹುಲ್ ಗಾಂಧಿ ಎಚ್ಚರಿಕೆ!

ಸಾರಾಂಶ

ಕಾಂಗ್ರೆಸ್‌ನಲ್ಲಿ ಬಿಜೆಪಿ ಪರ ಕೆಲಸ ಮಾಡುವವರನ್ನು ಗುರುತಿಸಿ ಉಚ್ಚಾಟಿಸಲು ಸಿದ್ಧ ಎಂದು ರಾಹುಲ್ ಗಾಂಧಿ ಎಚ್ಚರಿಸಿದ್ದಾರೆ. ಗುಜರಾತ್‌ನಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಪಕ್ಷದ ಸಿದ್ಧಾಂತಕ್ಕೆ ಬದ್ಧವಾಗಿರದವರನ್ನು ಹೊರಹಾಕಲು ಸೂಚಿಸಿದ್ದಾರೆ.

ಅಹಮದಾಬಾದ್‌ (ಮಾ.9): ಕಾಂಗ್ರೆಸ್‌ನಲ್ಲೇ ಇದ್ದು ಬಿಜೆಪಿ ಪರ ಕೆಲಸ ಮಾಡುವ ನಾಯಕರು, ಕಾರ್ಯಕರ್ತರನ್ನು ಗುರುತಿಸಿ ಪ್ರತ್ಯೇಕಿಸುವ ಅಗತ್ಯವಿದೆ ಎಂದು ಹೇಳಿರುವ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು, ಅಂಥವರ ವಿರುದ್ಧ ಪಕ್ಷದಿಂದಲೇ ಉಚ್ಚಾಟಿಸುವಂಥ ಕಠಿಣ ಕ್ರಮಕ್ಕೂ ಹೇಸಲ್ಲ ಎಂದು ಎಚ್ಚರಿಸಿದ್ದಾರೆ. ‘ಅಗತ್ಯಬಿದ್ದರೆ ಹತ್ತು ಮಂದಿಯಾದರೂ ಸರಿ, 40 ಮಂದಿಯಾದರೂ ಸರಿ ನಾವು ಅವರನ್ನು ಪಕ್ಷದಿಂದ ಹೊರಹಾಕಲು ಸಿದ್ಧ’ ಎಂದು ಹೇಳಿದ್ದಾರೆ.

ಎರಡು ದಿನಗಳ ಗುಜರಾತ್‌ ಭೇಟಿಯಲ್ಲಿರುವ ಅವರು ಶನಿವಾರ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ, ‘ನಾವು ಪಕ್ಷದ ಹಿತದೃಷ್ಟಿಯಿಂದ ಮೊದಲು ಮಾಡಬೇಕಿರುವ ಕೆಲಸವೆಂದರೆ ಅದು ಕಾಂಗ್ರೆಸ್‌ನಲ್ಲಿರುವ ಎರಡು ಗುಂಪಿನ ನಾಯಕರು ಮತ್ತು ಕಾರ್ಯಕರ್ತರನ್ನು ಪ್ರತ್ಯೇಕಿಸುವುದು. ಮೊದಲನೆಯ ಗುಂಪು ಪಕ್ಷದ ಸಿದ್ಧಾಂತ ಹೃದಯದಲ್ಲಿಟ್ಟುಕೊಂಡು ಜನರ ಜನತೆ ನಿಲ್ಲುವವರದ್ದಾದರೆ, ಇನ್ನೊಂದು ಗುಂಪು ಜನರಿಂದ ಅಂತರ ಕಾಯ್ದುಕೊಂಡವರದ್ದು. ಈ ಎರಡನೇ ಗುಂಪಲ್ಲಿ ಅರ್ಧದಷ್ಟು ಮಂದಿ ಬಿಜೆಪಿ ಜತೆ ಗುರುತಿಸಿಕೊಂಡವರೇ ಇದ್ದಾರೆ. ಕಾಂಗ್ರೆಸ್‌ನಲ್ಲಿ ಈ ಎರಡು ಗುಂಪುಗಳನ್ನು ಪ್ರತ್ಯೇಕಿಸುವ ಕೆಲಸವಾಗದೆ ಹೋದರೆ ಗುಜರಾತಿನ ಜನರಿಗೆ ಯಾವತ್ತಿಗೂ ಪಕ್ಷದ ಮೇಲೆ ನಂಬಿಕೆ ಬರುವುದಿಲ್ಲ ಎಂದರು.

ಇದನ್ನೂ ಓದಿ: ಸನಾತನ ಧರ್ಮ ನಿಂದಿಸಿದ್ದ ತಮಿಳನಾಡು ಡಿಸಿಎಂ ತಾಯಿಯಿಂದ ಕೊಲ್ಲೂರಲ್ಲಿ ಪೂಜೆ!

ಇದೇ ವೇಳೆ, ‘ಈ ಬೇರ್ಪಡಿಸುವ ಪ್ರಕ್ರಿಯೆಯಲ್ಲಿ 10, 15, 30, 40... ಮಂದಿಯನ್ನು ಪಕ್ಷದಿಂದ ಹೊರಹಾಕುವ ಅಗತ್ಯಬಿದ್ದರೂ ನಾವು ಆ ಕೆಲಸ ಮಾಡಲು ಸಿದ್ಧ. ಈ ಮೂಲಕ ನಾವು ಮೇಲ್ಪಂಕ್ತಿ ಹಾಕಬೇಕಿದೆ’ ಎಂದರು.

ಕಾಂಗ್ರೆಸ್‌ನಲ್ಲಿದ್ದುಕೊಂಡೇ ರಹಸ್ಯವಾಗಿ ಬಿಜೆಪಿ ಪರ ಕೆಲಸ ಮಾಡುತ್ತಿರುವವರು ಹೊರಹೋಗಬೇಕು, ಅವರು ಬಿಜೆಪಿ ಪರ ಬಹಿರಂಗವಾಗಿ ಕೆಲಸ ಮಾಡಲಿ. ಇಂಥವರಿಗೆ ಬಿಜೆಪಿಯಲ್ಲೂ ಜಾಗ ಇರುವುದಿಲ್ಲ. ಅವರೂ ಇವರನ್ನು ಪಕ್ಷದಿಂದ ಹೊರಗೆಸೆಯಲಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಉತ್ತರ ಪ್ರದೇಶದ ಸೀತಾಪುರದಲ್ಲಿ ಗುಂಡಿಕ್ಕಿ ಪತ್ರಕರ್ತನ ಹತ್ಯೆ, ಬೆಚ್ಚಿಬೀಳಿಸುತ್ತೆ ದುಷ್ಮರ್ಮಿಗಳ ಸಂಚು!

ಬಿಜೆಪಿ ಕಿಡಿ: ರಾಹುಲ್‌ ಗಾಂಧಿ ಹೇಳಿಕೆಗೆ ಬಿಜೆಪಿ ವಕ್ತಾರ ಶೆಹಜಾದ್‌ ಪೂನಾವಾಲ ಅವರು ವ್ಯಂಗ್ಯವಾಡಿದ್ದಾರೆ. ಅವರು ತಮ್ಮನ್ನು ತಾವು ಹಾಗೂ ಪಕ್ಷವನ್ನು ಟ್ರೋಲ್‌ ಮಾಡಿಕೊಂಡಿದ್ದಾರೆ. ಅವರು ತಮ್ಮ ಮುಖಕ್ಕೆ ತಾವೇ ಕನ್ನಡಿ ಇಟ್ಟುಕೊಂಡಿದ್ದಾರೆ. ಗುಜರಾತ್‌ನಲ್ಲಿ ಕಾಂಗ್ರೆಸ್‌ ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ರಾಹುಲ್‌ ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.
ಗುಜರಾತ್‌ನಲ್ಲಿ ಕಾಂಗ್ರೆಸ್‌ ದಶಕಗಳಿಂದ ಅಧಿಕಾರದಿಂದ ವಂಚಿತವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live: ಭಾರತ-ಆಫ್ರಿಕಾ ಫೈನಲ್ ಫೈಟ್ - ಟೆಸ್ಟ್ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌