
ನವದೆಹಲಿ(ಮೇ.22): ಶುಕ್ರವಾರ ಬೆಳಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 2,59,551 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಜೊತೆಗೆ 4209 ಜನರು ವೈರಸ್‌ಗೆ ಬಲಿಯಾಗಿದ್ದಾರೆ.
ಇದರೊಂದಿಗೆ ಸತತ 5ನೇ ದಿನವೂ ದೇಶದಲ್ಲಿ 3 ಲಕ್ಷಕ್ಕಿಂತ ಕಡಿಮೆ ಪ್ರಕರಣಗಳು ದಾಖಲಾದಂತೆ ಆಗಿದ್ದು, ಇದು 2ನೇ ಅಲೆ ಇಳಿಕೆಯ ಸುಳಿವು ಎಂದು ವಿಶ್ಲೇಷಿಸಲಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2.27 ಲಕ್ಷ ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ಶುಕ್ರವಾರದ ಸೋಂಕಿತರ ಸೇರ್ಪಡೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿರ ಪ್ರಮಾಣ 2.60 ಕೋಟಿಗೆ ಏರಿಕೆಯಾಗಿದ್ದರೆ, ಸಾವಿನ ಪ್ರಮಾಣ 2.91 ಲಕ್ಷಕ್ಕೆ ತಲುಪಿದೆ. ಇದೇ ವೇಳೆ ದೇಶದಲ್ಲಿ 30.27 ಲಕ್ಷ ಸಕ್ರಿಯ ಸೋಂಕಿತರಿದ್ದಾರೆ. ಇದು ಒಟ್ಟು ಸೋಂಕಿತರ ಪ್ರಮಾಣದಲ್ಲಿ ಶೇ.11.63ರಷ್ಟು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಮತ್ತೊಂದೆಡೆ ಚೇತರಿಕೆ ಪ್ರಮಾಣ ಶೇ.87.25ಕ್ಕೆ ಏರಿಕೆಯಾಗಿದೆ. ಆದರೆ ಸಾವಿನ ಪ್ರಮಾಣ ಏರುಗತಿಯಲ್ಲಿರುವ ಕಾರಣ, ಪ್ರತಿ 100 ಜನರಲ್ಲಿ ಸಾವಿಗೀಡಾಗುತ್ತಿರುವವರ ಪ್ರಮಾಣ ಶೇ.1.12ಕ್ಕೆ ಹೆಚ್ಚಳವಾಗಿದೆ.
ರಾಜ್ಯ ಶುಕ್ರವಾರ ಒಟ್ಟು
ಮಹಾರಾಷ್ಟ್ರ 548 85355
ಕರ್ನಾಟಕ 397 22579
ತಮಿಳುನಾಡು 236 18588
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ