ಮತ್ತೆ ಕೊರೋನಾ ಸ್ಫೋಟ, ಭಾರತದಲ್ಲಿ 18 ಸಾವಿರ ಕೇಸ್, 35 ಸಾವು!

Published : Jul 07, 2022, 08:57 PM IST
ಮತ್ತೆ ಕೊರೋನಾ ಸ್ಫೋಟ, ಭಾರತದಲ್ಲಿ 18 ಸಾವಿರ ಕೇಸ್, 35 ಸಾವು!

ಸಾರಾಂಶ

ಮಳೆ ಆರ್ಭಟದ ನಡುವೆ ಕೊರೋನಾ ಆತಂತ ದೇಶದಲ್ಲಿ ಕೋವಿಡ್‌ನಿಂದ 35 ಸಾವು ದೇಶದ ಸಕ್ರೀಯ ಪ್ರಕರಣ ಸಂಖ್ಯೆ 1,19,457ಕ್ಕೆ ಏರಿಕೆ

ನವದೆಹಲಿ(ಜು.07): ಭಾರತದ ಬಹುತೇಕ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಆತಂಕದ ನಡುವೆ ಕೊರೋನಾ ಆರ್ಭಟವೂ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 18,930 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. ಇನ್ನು 35 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.

ಕೇರಳದಲ್ಲಿ 19 ಮಂದಿ, ಮಹಾರಾಷ್ಟ್ರದ 7 ಮಂದಿ ಸೇರಿ ದೇಶದ ವಿವಿಧಡೆ 35 ಸೋಂಕಿತರು  ಕೊರೋನಾಗೆ ಬಲಿಯಾಗಿದ್ದಾರೆ. ಭಾರತದ ಪ್ರತಿ ದಿನದ ಕೋವಿಡ್ ಪಾಸಿಟಿವಿಟಿ ರೇಟ್ ಶೇಕಡಾ 4.32ಕ್ಕೆ ಏರಿಕೆಯಾಗಿದೆ. ಇದರಿಂದ ಸಕ್ರೀಯ ಪ್ರಕರಣಗಳ ಸಂಖ್ಯೆ 1,19,457ಕ್ಕೆ ಏರಿಕೆಯಾಗಿದೆ. 

Corona Crisis: ಮತ್ತೆ 1000 ದಾಟಿದ ಕೇಸ್‌: 4% ಪಾಸಿಟಿವಿಟಿ

ದೇಶದ ಕೆಲ ರಾಜ್ಯಗಳಲ್ಲಿ ಕೊರೋನಾ ಪ್ರಕರಣ ಏರಿಕೆಯಾಗಿದೆ. ಆದರೆ ಮುಂಬೈನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. 700ಕ್ಕಿಂತ ಕಡಿಮೆ ಕೇಸ್ ದಾಖಲಾಗಿದೆ. ಮಹಾರಾಷ್ಟ್ರದಲ್ಲಿ 2,678 ಕೇಸ್ ದಾಖಲಾಗಿದೆ. ಆದರೆ ದೇಶದಲ್ಲಿ ಒಟ್ಟು ಪ್ರಕರಣ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕ ತರಿಸಿದೆ.

ಬೆಂಗಳೂರಿನಲ್ಲಿ ಸಾವಿರ ಗಡಿ ದಾಟಿದ ಕೊರೋನಾ
ಬೆಂಗಳೂರಿನಲ್ಲಿ 1053 ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.4.99ರಷ್ಟಿದೆ. 985 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ ಮೃತಪಟ್ಟವರದಿಯಾಗಿಲ್ಲ. ನಗರದಲ್ಲಿ ಸದ್ಯ 6056 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಈ ಪೈಕಿ 93 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 6111 ಮಂದಿ ಕೋವಿಡ್‌ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ. 848 ಮಂದಿ ಮೊದಲ ಡೋಸ್‌, 1696 ಮಂದಿ ಎರಡನೇ ಡೋಸ್‌ ಮತ್ತು 3567 ಮಂದಿ ಮೂರನೇ ಡೋಸ್‌ ಲಸಿಕೆ ಪಡೆದಿದ್ದಾರೆ.

ನಗರದಲ್ಲಿ 18,623 ಮಂದಿಗೆ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 14202 ಆರ್‌ಟಿಪಿಸಿಆರ್‌ ಹಾಗೂ 4421 ಮಂದಿಗೆ ರಾರ‍ಯಪಿಡ್‌ ಆ್ಯಂಟಿಜನ್‌ ಪರೀಕ್ಷೆ ನಡೆಸಲಾಗಿದೆ. ಮಂಗಳವಾರ ಮಹದೇವಪುರ ವಲಯದಲ್ಲಿ ಹೊಸದಾಗಿ ಒಂದು ಕಂಟೈನ್ಮೆಂಟ್‌ ಪ್ರದೇಶ ಸೃಷ್ಟಿಯಾಗಿದೆ.

ಕೋವಿಡ್‌ ಸೋಂಕು ತಗುಲಿದವರಲ್ಲಿ ದೀರ್ಘಾವಧಿಯ ನರ ಸಮಸ್ಯೆ

ದ.ಕ.: 15 ಕೊರೋನಾ ಕೇಸ್‌ ಪತ್ತೆ
ದ.ಕ.ಜಿಲ್ಲೆಯಲ್ಲಿ ಗುರುವಾರ 15 ಮಂದಿಯಲ್ಲಿ ಕೊರೋನಾ ಪಾಸಿಟಿವ್‌ ಪತ್ತೆಯಾಗಿದೆ. 17 ಮಂದಿ ಗುಣಮುಖರಾಗಿದ್ದು 78 ಸಕ್ರಿಯ ಪ್ರಕರಣ ಇದೆ. ಜಿಲ್ಲೆಯ ಪಾಸಿಟಿವಿಟಿ ರೇಟ್‌ ಶೇ.1.90 ಆಗಿದೆ. ಜಿಲ್ಲೆಯ ಒಟ್ಟು ಕೊರೋನಾ ಪಾಸಿಟಿವ್‌ ಕೇಸ್‌ 1,35,914ಕ್ಕೆ ಏರಿಕೆಯಾಗಿದ್ದು, 1,33,984 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿವರೆಗೆ 1,852 ಮಂದಿ ಕೋವಿಡ್‌ನಲ್ಲಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಹೆಲ್ತ್‌ ಬುಲೆಟಿನ್‌ ತಿಳಿಸಿದೆ.

ಕೋವಿಡ್‌ ಲಸಿಕಾಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್‌ ಡೋಸ್‌ ಪಡೆಯಲು ಇದ್ದ ಅವಧಿಯನ್ನು ಕೇಂದ್ರ ಸರ್ಕಾರ 9 ತಿಂಗಳಿನಿಂದ 6 ತಿಂಗಳಿಗೆ ಇಳಿಸಿ ಆದೇಶ ಹೊರಡಿಸಿದೆ. ಲಸಿಕೆ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿಯ ಉಪ ಸಮಿತಿಯ ಶಿಫಾರಸಿನ ಅನ್ವಯ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ಅವರು ಎಲ್ಲಾ ರಾಜ್ಯಗಳಿಗೂ ಮಾಹಿತಿ ರವಾನಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಟ್ರಂಪ್‌ಗೆ ಮುಯ್ಯಿಗೆ ಮುಯ್ಯಿ, ಪುಟಿನ್‌ ಜೊತೆ ಭಾಯಿ ಭಾಯಿ!
ಇನ್ನೂ 10 ದಿನಗಳ ಕಾಲ ಇಂಡಿಗೋಳು