
ನವದೆಹಲಿ(ಏ.24): ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತಷ್ಟುಏರಿಕೆ ಕಂಡು ಬಂದಿದ್ದು, ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 2,527 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದೇ ವೇಳೆಯಲ್ಲಿ 33 ಸೋಂಕಿತರು ಸಾವಿಗೀಡಾಗಿದ್ದಾರೆ. ಕೇರಳದಲ್ಲಿ 31 ಹಾಗೂ ದೆಹಲಿಯಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 15,079ಕ್ಕೆ ಏರಿಕೆಯಾಗಿದೆ. ದೈನಂದಿನ ಪಾಸಿಟಿವಿಟಿ ದರವು ಶೇ.0.56ಕ್ಕೆ ಏರಿಕೆಯಾಗಿದ್ದು, ವಾರದ ಪಾಸಿಟಿವಿಟಿ ದರವು ಶೇ.0.50 ರಷ್ಟಿದೆ. ದೇಶದಲ್ಲಿ ಈವರೆಗೆ ಒಟ್ಟು 187.46 ಕೋಟಿ ಡೋಸು ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ.
ದಿಲ್ಲಿಯಲ್ಲಿ 1042 ಕೋವಿಡ್ ಕೇಸು: 2 ಸಾವು
ದೆಹಲಿಯಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಶುಕ್ರವಾರ ಒಂದೇ ದಿನ 1,042 ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಇಬ್ಬರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಪಾಸಿಟಿವಿಟಿ ದರ ಗುರುವಾರಕ್ಕಿಂತ ಕೊಂಚ ಇಳಿಕೆಯಾಗಿದ್ದು ಶೇ.4.64ರಷ್ಟುದಾಖಲಾಗಿದೆ.
Covid cases ದೆಹಲಿ, ಪಂಜಾಬ್ ಬಳಿಕ ಮತ್ತೊಂದು ರಾಜ್ಯದಲ್ಲಿ ಕೊರೋನಾ ನಿರ್ಬಂಧ ಜಾರಿ!
ಗುರುವಾರ ಶೇ.4.71ರಷ್ಟುಪಾಸಿಟಿವಿಟಿ ದರದೊಂದಿಗೆ 965 ಪ್ರಕರಣಗಳು ದಾಖಲಾಗಿತ್ತು. ಕಳೆದ ಕೆಲವು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ ಸೋಂಕು ವೇಗವಾಗಿ ಹೆಚ್ಚಾಗುತ್ತಿದೆ. ಏ.11ರಂದು 601 ಇದ್ದ ಸಕ್ರಿಯ ಪ್ರಕರಣಗಳು 3,253ಕ್ಕೆ ಏರಿಕೆಯಾಗಿವೆ. ಆದರೆ ಆಸ್ಪತ್ರೆಗೆ ದಾಖಲಾಗುತ್ತಿರುವವರ ಪ್ರಮಾಣ ಕೇವಲ ಶೇ.3 ಇದೆ.ಕಳೆದ 24 ಗಂಟೆಗಳಲ್ಲಿ 22,442 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಈ ಮೂಲಕ ದೆಹಲಿಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 18.72 ಲಕ್ಷಕ್ಕೆ, ಒಟ್ಟು ಸಾವು 26 ಸಾವಿರಕ್ಕೆ ಏರಿಕೆಯಾಗಿದೆ.
90 ಜನರಿಗೆ ಸೋಂಕು, ಶೂನ್ಯ ಸಾವು
ರಾಜ್ಯದಲ್ಲಿ 90 ಮಂದಿಯಲ್ಲಿ ಕೋವಿಡ್-19 ಪತ್ತೆಯಾಗಿದೆ. 45 ಮಂದಿ ಚೇತರಿಸಿಕೊಂಡಿದ್ದಾರೆ. ಕೋವಿಡ್‌ನಿಂದ ಯಾರೂ ಮೃತಪಟ್ಟಿದ್ದು ವರದಿಯಾಗಿಲ್ಲ. ತನ್ಮೂಲಕ ಎರಡು ವಾರದಿಂದ ರಾಜ್ಯದಲ್ಲಿ ಕೋವಿಡ್‌ನಿಂದ ಸಾವು ಘಟಿಸಿಲ್ಲ. ಗುರುವಾರವಷ್ಟೆನೂರು ಮಂದಿ ಸೋಂಕಿತರು ಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಸೋಂಕಿತರ ಸಂಖ್ಯೆ ತುಸು ಕಡಿಮೆ ಆಗಿದೆ. ಆದರೂ ಈ ಹಿಂದಿನ ಕೆಲ ದಿನಗಳಿಗೆ ಹೋಲಿಸಿದರೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಪರೀಕ್ಷೆ ಪ್ರಮಾಣ ತುಸು ಏರಿಕೆ ಮಾಡಿದೆ. 10,552 ಮಂದಿ ಪರೀಕ್ಷೆಗೆ ಒಳಗಾಗಿದ್ದಾರೆ. ಪಾಸಿಟಿವಿಟಿ ದರ ಶೇ. 0.85 ದಾಖಲಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಮತ್ತೊಂದು ಕೊರೋನಾ ಕೇಸ್, ಕೋಚ್ ರಿಕಿ ಪಾಂಟಿಂಗ್ ಕ್ವಾರಂಟೈನ್!
ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಸಕ್ರಿಯ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿದೆ. ಸದ್ಯ 1,595 ಸಕ್ರಿಯ ಪ್ರಕರಣಗಳಿವೆ. ಶುಕ್ರವಾರ 45 ಮಂದಿ ಚೇತರಿಸಿಕೊಂಡಿದ್ದಾರೆ. ದೈನಂದಿನ ಸೋಂಕಿತರಲ್ಲಿ ಶೇ.90ರಷ್ಟುಮಂದಿ ಬೆಂಗಳೂರು ನಗರಕ್ಕೆ ಸೇರಿದವರು. ರಾಜ್ಯ ರಾಜಧಾನಿಯಲ್ಲಿ 85 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಳಿದಂತೆ ಬೆಳಗಾವಿ, ಚಿತ್ರದುರ್ಗ, ದಕ್ಷಿಣ ಕನ್ನಡ, ಕೋಲಾರ ಮತ್ತು ಶಿವಮೊಗ್ಗದಲ್ಲಿ ತಲಾ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ.
ರಾಜ್ಯದಲ್ಲಿ ಈವರೆಗೆ ಒಟ್ಟು 39.46 ಲಕ್ಷ ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು 39.05 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. 40,057 ಮಂದಿ ಮರಣವನ್ನಪ್ಪಿದ್ದಾರೆ.
ಲಸಿಕೆ ಅಭಿಯಾನ:
ರಾಜ್ಯದಲ್ಲಿ ಶುಕ್ರವಾರ 55,399 ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. 13,863 ಮಂದಿ ಮೊದಲ ಡೋಸ್, 30,212 ಮಂದಿ ಎರಡನೇ ಡೋಸ್ ಮತ್ತು 13,173 ಮಂದಿ ಮುನ್ನೆಚ್ಚರಿಕೆ ಡೋಸ್ ಪಡೆದಿದ್ದಾರೆ. ಈವರೆಗೆ ಒಟ್ಟು 10.56 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ