Covid 19 cases ಭಾರತದಲ್ಲಿ ಕೊರೋನಾ 4ನೇ ಅಲೆ ಭೀತಿ, 2,828 ಹೊಸ ಪ್ರಕರಣ ಪತ್ತೆ!

Published : May 29, 2022, 05:18 PM IST
Covid 19 cases ಭಾರತದಲ್ಲಿ ಕೊರೋನಾ 4ನೇ ಅಲೆ ಭೀತಿ, 2,828 ಹೊಸ ಪ್ರಕರಣ ಪತ್ತೆ!

ಸಾರಾಂಶ

ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಕೊರೋನಾ ವೈರಸ್ ಭಾರತದಲ್ಲಿ ಮತ್ತೆ 4ನೇ ಅಲೆ ಭೀತಿ ಆರಂಭ, ಆತಂಕ ಶುರು ಕಳೆದ 24 ಗಂಟೆಯಲ್ಲಿ ಭಾರತದಲ್ಲಿ ಕೋವಿಡ್‌ಗೆ 14 ಬಲಿ  

ನವದೆಹಲಿ(ಮೇ.29): ಮುನ್ನಚ್ಚೆರಿಕೆ, ಲಸಿಕೆ ಸೇರಿದಂತೆ ಹಲವು ಕ್ರಮಗಳಿಂದ ಭಾರತದಲ್ಲಿ 2ನೇ ಅಲೆ ಬಳಿಕ ಕೋವಿಡ್ ಹೆಚ್ಚಾಗಿ ಅಬ್ಬರಿಸಿಲ್ಲ. ಮೂರನೇ ಅಲೇ ನಿಯಂತ್ರಿಸುವಲ್ಲಿ ಭಾರತ ಯಶಸ್ವಿಯಾಗಿದೆ. ಇದೀಗ ಕೊರೋನಾ ವೈರಸ್ ಮತ್ತೆ ಅಬ್ಬರಿಸಲು ಆರಂಭಿಸಿದೆ. ದೇಶದಲ್ಲಿ 4ನೇ ಅಲೆ ಭೀತಿ ಎದುರಾಗಿದೆ. ಕಳೆದ 24 ಗಂಟೆಯಲ್ಲಿ  2,828 ಹೊಸ ಪ್ರಕರಣಗಳು ಪತ್ತೆಯಾಗಿದೆ.

ಭಾನುವಾರ(ಮೇ.29)ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ 2,828 ಹೊಸ ಪ್ರಕರಣ ಪತ್ತೆಯಾಗಿದೆ. ಇದು ಶನಿವಾರ ಬಿಡುಗಡೆ ಮಾಡಿದ ವರದಿಯಲ್ಲಿ ದಾಖಲಾಗಿರುವ ಪ್ರಕರಣಗಳಿಗಿಂತ ಹೆಚ್ಚಾಗಿದೆ. ಕಳೆದ 24 ಗಂಟೆಯಲ್ಲಿ ಕೊರೋನಾಗೆ 14 ಮಂದಿ ಬಲಿಯಾಗಿದ್ದಾರೆ. 

Covid Crisis: ಬೆಂಗ್ಳೂರಲ್ಲಿ ಕೊರೋನಾ ಸಂಖ್ಯೆಯಲ್ಲಿ ಭಾರೀ ಏರಿಕೆ: ಹೆಚ್ಚಿದ ಆತಂಕ

ಶನಿವಾರ ಕೋವಿಡ್ ಸಾವಿನ ಸಂಖ್ಯೆ 33ಕ್ಕೆ ಏರಿಕೆಯಾಗಿತ್ತು. ಇದು ಆತಂಕ ತಂದಿತ್ತು. ಆದರೆ ಭಾನುವಾರ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 14ಕ್ಕೆ ಇಳಿಕೆಯಾಗಿದೆ.

ಶನಿವಾರ  2685 ಹೊಸ ಕೇಸು, 33 ಸಾವು: 
ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದು, ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಒಟ್ಟು 2,685 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆಯಲ್ಲಿ 33 ಸೋಂಕಿತರು ಸಾವಿಗೀಡಾಗಿದ್ದಾರೆ. ಆದರೆ ಕೇವಲ 2100 ಸೋಂಕಿತರು ಗುಣವಾದ ಕಾರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯು 16,308ಕ್ಕೆ ಏರಿಕೆಯಾಗಿದೆ. ದೈನಂದಿನ ಪಾಸಿಟಿವಿಟಿ ದರವು ಶೇ. 0.60ರಷ್ಟಿದ್ದು, ವಾರದ ಪಾಸಿಟಿವಿಟಿ ದರವು ಶೇ. 0.54ರಷ್ಟಿದೆ. ಕೋವಿಡ್‌ ಚೇತರಿಕೆ ದರವು ಶೇ. 98.75ರಷ್ಟಿದೆ. ದೇಶದಲ್ಲಿ ಈವರೆಗೆ ಒಟ್ಟು 193.13 ಕೋಟಿ ಡೋಸು ಕೋವಿಡ್‌ ಲಸಿಕೆಯನ್ನು ವಿತರಿಸಲಾಗಿದೆ.

ನಗರದಲ್ಲಿ ನಿಧಾನವಾಗಿ ಮತ್ತೆ ಹೆಚ್ಚಾಗುತ್ತಿದೆ ಕೊರೋನಾ
ಬೆಂಗಳೂರಿನಲ್ಲಿ ಕ್ರಮೇಣ ಕೊರೋನಾ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದ್ದು, ಶುಕ್ರವಾರ 161 ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿವೆ. ಪಾಸಿಟಿವಿಟಿ ದರ ಶೇ.1.14ಕ್ಕೆ ಹೆಚ್ಚಾಗಿದೆ. 113 ಮಂದಿ ಚೇತರಿಸಿಕೊಂಡಿದ್ದಾರೆ. ಕೋವಿಡ್‌ ಸಾವು ದಾಖಲಾಗಿಲ್ಲ. ಸದ್ಯ ನಗರದಲ್ಲಿ ಒಟ್ಟು 1,754 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ ಇಬ್ಬರು ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆ ಆರೈಕೆಯಲ್ಲಿದ್ದಾರೆ.

61ನೇ ವರ್ಷದ ಹುಟ್ಟುಹಬ್ಬ ಆಚರಿಸಿದ ರಾಷ್ಟ್ರಾಧ್ಯಕ್ಷರಿಗೆ 16.80 ಲಕ್ಷ ರೂ ದಂಡ!

ಶುಕ್ರವಾರ ಬೊಮ್ಮನಹಳ್ಳಿ ವಲಯದಲ್ಲಿ ಹೊಸದಾಗಿ ಎರಡು ಕಂಟೈನ್ಮೆಂಟ್‌ ವಲಯ ಸೃಷ್ಟಿಯಾಗಿದ್ದು, ಕಂಟೈನ್ಮೆಂಟ್‌ ವಲಯಗಳ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

10,986 ಮಂದಿ ಕೋವಿಡ್‌ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ. 1361 ಮಂದಿ ಮೊದಲ ಡೋಸ್‌, 6006 ಮಂದಿ ಎರಡನೇ ಡೋಸ್‌ ಮತ್ತು 3,619 ಮಂದಿ ಮೂರನೇ ಡೋಸ್‌ ಲಸಿಕೆ ಪಡೆದಿದ್ದಾರೆ.​​​ ಒಟ್ಟು 13,549 ಮಂದಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 10,540 ಆರ್‌ಟಿಪಿಸಿಆರ್‌ ಹಾಗೂ 3009 ರಾರ‍ಯಪಿಡ್‌ ಆ್ಯಂಟಿಜನ್‌ ಪರೀಕ್ಷೆ ನಡೆಸಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

ದ.ಕ.: 3 ಕೊರೋನಾ ಕೇಸ್‌ 
ದ.ಕ.ಜಿಲ್ಲೆಯಲ್ಲಿ ಶುಕ್ರವಾರ ಮೂರು ಕೊರೋನಾ ಕೇಸ್‌ ಪತ್ತೆಯಾಗಿದ್ದು, ಯಾವುದೇ ಕೋವಿಡ್‌ ಸಾವು ಸಂಭವಿಸಿಲ್ಲ. ನಾಲ್ಕು ಮಂದಿ ಡಿಸ್ಚಾಜ್‌ರ್‍ ಆಗಿದ್ದು, ಪ್ರಸಕ್ತ 20 ಸಕ್ರಿಯ ಪ್ರಕರಣ ಇದೆ. ಜಿಲ್ಲೆಯ ಕೋವಿಡ್‌ ಪಾಸಿಟಿವಿಟಿ ರೇಟ್‌ 0.74ಕ್ಕೆ ಏರಿಕೆಯಾಗಿದೆ. ಇಲ್ಲಿವರೆಗೆ ಒಟ್ಟು ಪಾಸಿಟಿವ್‌ ಕೇಸ್‌ಗಳ ಸಂಖ್ಯೆ 1,35,592ಕ್ಕೆ ಏರಿಕೆಯಾಗಿದ್ದು, ಒಟ್ಟು 1,33,722 ಮಂದಿ ಡಿಸ್ಚಾಜ್‌ರ್‍ ಆಗಿದ್ದಾರೆ. ಸಾವಿನ ಸಂಖ್ಯೆ 1,850 ಆಗಿದೆ ಎಂದು ಜಿಲ್ಲಾ ಹೆಲ್ತ್‌ ಬುಲೆಟಿನ್‌ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?