ಕೊರೋನಾ ಅಬ್ಬರ: 10 ರಾಜ್ಯಗಳಲ್ಲಿ 78% ಹೊಸ ಸೋಂಕು!

By Kannadaprabha NewsFirst Published Apr 29, 2021, 7:45 AM IST
Highlights

ನಿಲ್ಲದ ಕೊರೋನಾ ಕೇಕೆ: ಮತ್ತೆ 5 ದಾಖಲೆ!| ದೇಶದಲ್ಲಿ 3.6 ಲಕ್ಷ ಕೇಸ್‌| 3293 ಬಲಿ: ಎರಡೂ ದಾಖಲೆ| 2 ಲಕ್ಷ ದಾಟಿದ ಒಟ್ಟು ಸಾವಿನ ಸಂಖ್ಯೆ

ನವದೆಹಲಿ(ಏ.29): ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಮತ್ತೆ ಸೋಂಕು ಮತ್ತು ಸಾವು ಎರಡರಲ್ಲೂ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಬುಧವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 3293 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 2,01,187ಕ್ಕೆ ತಲುಪಿದೆ. ಇದೇ ವೇಳೆ ದೇಶದಲ್ಲಿ 3,60,960 ಕೋವಿಡ್‌ ಕೇಸುಗಳು ದೃಢವಾಗಿದ್ದು, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1.79 ಕೋಟಿಗೆ ಏರಿಕೆಯಾಗಿದೆ.

ಕೊರೋನಾ ಸೋಂಕಿನ 2ನೇ ಅಲೆಯ ಅಬ್ಬರದಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 29.78 ಲಕ್ಷ ತಲುಪಿದೆ. ಚೇತರಿಕೆ ಪ್ರಮಾಣ ಶೇ.82.33ಕ್ಕೆ ಕುಸಿದಿದೆ. ಒಟ್ಟು ಸೋಂಕಿತರ ಪೈಕಿ 1.48 ಕೋಟಿ ಸೋಂಕಿತರು ಗುಣಮುಖರಾಗಿದ್ದಾರೆ.

"

10 ರಾಜ್ಯಗಳಲ್ಲಿ 78% ಹೊಸ ಸೋಂಕು:

ಬುಧವಾರ ಪತ್ತೆಯಾದ ಹೊಸ ಸೋಂಕಿತರ ಪೈಕಿ ಶೇ.78.53ರಷ್ಟುಕೇಸುಗಳು ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಕೇವಲ 10 ರಾಜ್ಯಗಳಲ್ಲಿ ಪತ್ತೆಯಾಗಿವೆ. ದೆಹಲಿ, ಉತ್ತರ ಪ್ರದೇಶ, ಛತ್ತೀಸ್‌ಗಢ, ಗುಜರಾತ್‌, ಜಾರ್ಖಂಡ್‌, ರಾಜಸ್ಥಾನ, ಪಂಜಾಬ್‌, ಮಧ್ಯಪ್ರದೇಶ ಉಳಿದ ರಾಜ್ಯಗಳು. ಇನ್ನು ಭಾರತದ ಒಟ್ಟು ಸಕ್ರಿಯ ಪ್ರಕರಣಗಳ ಪೈಕಿ ಶೇ.71.91ರಷ್ಟುಮಹಾರಾಷ್ಟ್ರ, ಉತ್ತರ ಪ್ರದೇಶ, ಕೇರಳ, ರಾಜಸ್ಥಾನ, ಗುಜರಾತ್‌, ಛತ್ತೀಸ್‌ಗಢ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!