ದೇಶದಲ್ಲಿ ಸೋಂಕು ತೀವ್ರವಾಗಿ ಇಳಿಕೆ!

By Kannadaprabha NewsFirst Published May 18, 2021, 8:00 AM IST
Highlights

* ದೇಶದಲ್ಲಿ ಸೋಂಕು ತೀವ್ರವಾಗಿ ಇಳಿಕೆ

* 2.8 ಲಕ್ಷ ಹೊಸ ಕೇಸು ಮಾತ್ರ

* ಸೋಂಕು 27 ದಿನಗಳ ಕನಿಷ್ಠ

ನವದೆಹಲಿ(ಮೇ.18): ದೇಶದಲ್ಲಿ ಹೊಸ ಕೊರೋನಾ ಪ್ರಕರಣಗಳಲ್ಲಿ ಭಾರೀ ಇಳಿಕೆಯಾಗಿದೆ. ಸೋಮವಾರ ಬೆಳಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 2,81,386 ಜನರಲ್ಲಿ ಸೋಂಕು ದೃಢಪಟ್ಟಿದೆ. ಇದು ಕಳೆದ 27 ದಿನಗಳಲ್ಲೇ ಕನಿಷ್ಠ ಪ್ರಮಾಣವಾಗಿದೆ. ಹಲವು ದಿನಗಳಿಂದ 4 ಲಕ್ಷದ ಆಸುಪಾಸಿನಲ್ಲಿ ದಾಖಲಾಗುತ್ತಿದ್ದ ಹೊಸ ಸೋಂಕಿತರ ಸಂಖ್ಯೆ ಇದೀಗ 3 ಲಕ್ಷಕ್ಕಿಂತ ಕೆಳಗೆ ಇಳಿದಿರುವುದು, 2ನೇ ಅಲೆಯ ಇಳಿಕೆಯ ಸುಳಿವಾಗಿರಬಹುದು ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

ಆದರೆ ಹೊಸ ಸೋಂಕಿನ ಪ್ರಮಾಣ ಇಳಿದರೂ ಸಾವಿನ ಪ್ರಮಾಣ ಮಾತ್ರ ಇನ್ನೂ ದೊಡ್ಡ ಮಟ್ಟದಲ್ಲೇ ದಾಖಲಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 4106 ಜನರು ವೈರಸ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಈವರೆಗೆ ದೇಶದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 274,390ಕ್ಕೆ ತಲುಪಿದೆ. ಇದೇ ವೇಳೆ ದೇಶದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಶೇ.76ರಷ್ಟುಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿದೆ.

"

ಶೇ.20ಕ್ಕಿಂತ ಹೆಚ್ಚು ಪಾಸಿಟಿವಿಟಿ ಕರ್ನಾಟಕ ನಂ.1: ರಾಜ್ಯದ 27 ಜಿಲ್ಲೆಗಳಲ್ಲಿ ಅತಿ ಹೆಚ್ಚು ಪಾಸಿಟಿವಿಟಿ

ಕರ್ನಾಟಕದಲ್ಲಿ 27 ಜಿಲ್ಲೆಗಳು ಶೇ.20ಕ್ಕಿಂತ ಹೆಚ್ಚು ಪಾಸಿಟಿವಿಟಿ ಹೊಂದಿವೆ. ಈ ಮೂಲಕ ಹೆಚ್ಚು ಪಾಸಿಟಿವಿಟಿ ಪ್ರಮಾಣದ ಜಿಲ್ಲೆಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನದಲ್ಲಿ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

2.49 ಕೋಟಿ ಒಟ್ಟು ಸೋಂಕಿತರು

2.74 ಲಕ್ಷ ಒಟ್ಟು ಸಾವಿನ ಸಂಖ್ಯೆ

2.11 ಲಕ್ಷ ನಿನ್ನೆ ಚೇತರಿಸಿಕೊಂಡವರು

35 ಲಕ್ಷ ಸಕ್ರಿಯ ಸೋಂಕಿತರು

ಶೇ.84.81 ಚೇತರಿಕೆ ಪ್ರಮಾಣ

ಶೇ.1.10 ಶೇಕಡವಾರು ಸಾವಿನ ಪ್ರಮಾಣ

31 ಕೋಟಿ ಈವರೆಗೆ ನಡೆದ ಕೋವಿಡ್‌ ಪರೀಕ್ಷೆ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!