Massive jump in COVID 19 case: 16764 ಕೋವಿಡ್‌ ಕೇಸ್‌, 64 ದಿನಗಳ ಗರಿಷ್ಠ

By Kannadaprabha NewsFirst Published Jan 1, 2022, 4:33 AM IST
Highlights
  • ಸಕ್ರಿಯ ಕೇಸು ಸಂಖ್ಯೆ 91 ಸಾವಿರಕ್ಕೆರಿಕೆ
  • 16764 ಕೋವಿಡ್‌ ಕೇಸ್‌, 64 ದಿನಗಳ ಗರಿಷ್ಠ
  • 309 ಜನಕ್ಕೆ ಒಮಿಕ್ರೋನ್‌, ಪೀಡಿತರ ಸಂಖ್ಯೆ 1270ಕ್ಕೇರಿಕೆ

ನವದೆಹಲಿ(ಜ.01): ಶುಕ್ರವಾರ ಬೆಳಗ್ಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 16,764 ಹೊಸ ಕೊರೋನಾ ಕೇಸ್‌ಗಳು ಪತ್ತೆಯಾಗಿವೆ. ಕಳೆದ 64 ದಿನಗಳಲ್ಲಿ ದಾಖಲಾದ ದೈನಂದಿನ ಗರಿಷ್ಠ ಸೋಂಕಿನ ಸಂಖ್ಯೆ ಇದಾಗಿದೆ. ಇದೇ ವೇಳೆ 220 ಮಂದಿ ಈ ವ್ಯಾಧಿಗೆ ಬಲಿಯಾಗಿದ್ದಾರೆ. ಅಲ್ಲದೆ, ಒಟ್ಟಾರೆ ಸಕ್ರಿಯ ಸೋಂಕಿತರ ಸಂಖ್ಯೆ 91,361ಕ್ಕೆ ಜಿಗಿದಿದೆ.

ಈ ನಡುವೆ ಹೊಸ ಸೋಂಕಿನ ಸಂಖ್ಯೆಯಲ್ಲಿ 309 ಹೊಸ ಒಮಿಕ್ರೋನ್‌ ಕೇಸ್‌ಗಳು ಸೇರಿಕೊಂಡಿದ್ದು, ಇದು ಒಂದು ದಿನದಲ್ಲಿ ದಾಖಲಾದ ಅತೀ ಗರಿಷ್ಠ. ಇದರೊಂದಿಗೆ ದೇಶದಲ್ಲಿ ಒಮಿಕ್ರೋನ್‌ಗೆ ತುತ್ತಾದವರ ಸಂಖ್ಯೆ 1270ಕ್ಕೆ ಜಿಗಿದಿದೆ. ದೇಶದ 23 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಮಿಕ್ರೋನ್‌ ವ್ಯಾಪಿಸಿಕೊಂಡಿದ್ದು, ಮಹಾರಾಷ್ಟ್ರದಲ್ಲಿ ಅತಿಹೆಚ್ಚು(450), ದೆಹಲಿ (320), ಕೇರಳ (109), ಗುಜರಾತ್‌ನಲ್ಲಿ 97 ಒಮಿಕ್ರೋನ್‌ ಕೇಸ್‌ಗಳು ದಾಖಲಾಗಿವೆ. ಈವರೆಗೆ 144.54 ಕೋಟಿ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ.

ಡಬಲ್ ಶಾಕ್, ಕರ್ನಾಟಕದಲ್ಲಿ ಕೊರೋನಾ ಮಧ್ಯೆ ಒಮಿಕ್ರಾನ್ ಸ್ಫೋಟ

ಕರ್ನಾಟಕದಲ್ಲಿ ಮಹಾಮಾರಿ ಕೊರೋನಾ ಸೋಂಕಿತರ (Coroanvrius) ಸಂಖ್ಯೆ ಮತ್ತೆ ಏರಿಕೆಯಾಗಿದೆ. ಕಳೆದ ಒಂದುವಾರದಿಂದ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ರಾಜ್ಯ ಸರ್ಕಾರವೂ ಸಹ ಅಲರ್ಟ್ ಆಗಿದೆ. ರಾಜ್ಯದಲ್ಲಿಇಂದು(ಶುಕ್ರವಾರ) ಒಂದೇ ದಿನ 832 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ.  335 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕರ್ನಾಟಕದಲ್ಲಿ ಕೊವಿಡ್ ಪಾಸಿಟಿವಿಟಿ ಪ್ರಮಾಣ ಶೇ 0.70 ರಷ್ಟಿದ್ರೆ, ಸಾವಿನ  ಪ್ರಮಾಣ ಶೇ 0.96% ಇದೆ. 

ರಾಜ್ಯದಲ್ಲಿ ಈವರೆಗೆ 30,07,337 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಈವರೆಗೆ 38,335 ಮಂದಿ ಕೊವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.   29,60,261 ಮಂದಿ ಚೇತರಿಸಿಕೊಂಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಪ್ರಸ್ತುತ 8712 ಸಕ್ರಿಯ ಪ್ರಕರಣಗಳಿದ್ದು ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇನ್ನು ಬೆಂಗಳೂರು ನಗರದಲ್ಲಿ ಶುಕ್ರವಾರ 656 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಐವರು ಮೃತಪಟ್ಟಿದ್ದಾರೆ. 211 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಈವರೆಗೆ ಒಟ್ಟು 12,63,618 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಈವರೆಗೆ 16,400 ಮಂದಿ ಮೃತಪಟ್ಟಿದ್ದಾರೆ. ಹಾಗೇ12,39,931 ಜನರು ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಪ್ರಸ್ತುತ 7286 ಸಕ್ರಿಯ ಪ್ರಕರಣಗಳಿವೆ.

ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್?

ಬೆಂಗಳೂರು ನಗರ 656, ಬಳ್ಳಾರಿ 6, ಬೆಳಗಾವಿ 12, ಬೆಂಗಳೂರು ಗ್ರಾಮಾಂತರ 5, ಚಾಮರಾನಗರ, ಚಿಕ್ಕಬಳ್ಳಾಪುರ, ರಾಮನಗರ, ಗದಗ, ಉತ್ತರ ಕನ್ನಡ, ವಿಜಯಪುರ 1, ಚಿಕ್ಕಮಗಳೂರು 3, ದಕ್ಷಿಣ ಕನ್ನಡ 30, ಧಾರವಾಡ, ಮೈಸೂರು 9, ಹಾಸನ 11, ಕಲಬುರಗಿ 9, ಕೊಡಗು 21, ಕೋಲಾರ 8, ಮಂಡ್ಯ 7, ಶಿವಮೊಗ್ಗ 2, ತುಮಕೂರು 3, ಉಡುಪಿ 35.

ರಾಜ್ಯಕ್ಕೆ ಶಾಕ್ ಕೊಟ್ಟ ಒಮಿಕ್ರಾನ್

ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವಾಗಲೇ ಕೊರೋನಾ ರೂಪಾಂತರಿ ವೈರಸ್ ಒಮಿಕ್ರಾನ್(Omicron) ರಾಜ್ಯಕ್ಕೆ ಶಾಕ್ ನೀಡಿದ್ದು, ಇಂದು ಒಂದೇ ದಿನ ಕರ್ನಾಟಕದಲ್ಲಿ 23 ಜನರಲ್ಲಿ ಒಮಿಕ್ರಾನ್ ದೃಢಪಟ್ಟಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದು, ಇಂದು ರಾಜ್ಯದಲ್ಲಿ 23 ಜನರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ.

ಅವರಲ್ಲಿ 19 ಜನರು ವಿದೇಶಗಳಿಂದ ಆಗಮಿಸಿದವರಾಗಿದ್ದಾರೆ. ಅಮೆರಿಕಾ, ಯುರೋಪ್, ಆಫ್ರಿಕಾ ದೇಶಗಳಿಂದ ಬಂದ ಹೆಚ್ಚಿನವರಲ್ಲಿ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 66ಕ್ಕೆ ಏರಿಕೆಯಾಗಿದೆ.

click me!