ನೈತಿಕತೆ ಪಾಲಿಸಿ : ಒಟಿಟಿ, ಸೋಷಿಯಲ್ ಮೀಡಿಯಾಗೆ ಸರ್ಕಾರದ ಹೊಸ ನೀತಿ ಸಂಹಿತೆ!

Published : Feb 21, 2025, 06:36 AM ISTUpdated : Feb 21, 2025, 07:07 AM IST
ನೈತಿಕತೆ ಪಾಲಿಸಿ : ಒಟಿಟಿ, ಸೋಷಿಯಲ್ ಮೀಡಿಯಾಗೆ ಸರ್ಕಾರದ ಹೊಸ ನೀತಿ ಸಂಹಿತೆ!

ಸಾರಾಂಶ

ಕೇಂದ್ರ ಸರ್ಕಾರವು ಒಟಿಟಿ ವೇದಿಕೆಗಳು ಹಾಗೂ ಸೋಷಿಯಲ್ ಮೀಡಿಯಾಗಳಿಗೆ ಕಟ್ಟುನಿಟ್ಟಿನ ಸಲಹಾವಳಿ ಜಾರಿ ಮಾಡಿದೆ. ಅಶ್ಲೀಲ ಹಾಗೂ ಅಸಭ್ಯ ವಿಷಯಗಳನ್ನು ಪ್ರಸಾರ ಮಾಡದಂತೆ ಸೂಚನೆ ನೀಡಿದೆ. ಐಟಿ ನಿಯಮಗಳ ನೀತಿ ಸಂಹಿತೆ ಪಾಲಿಸಲು ಸೂಚಿಸಲಾಗಿದೆ.

ನೈತಿಕತೆ ಪಾಲಿಸಿ : ಒಟಿಟಿ ವೇದಿಕೆಗಳು ಹಾಗೂ ಸೋಷಿಯಲ್‌ ಮೀಡಿಯಾಗಳಿಗೆ ಕಟ್ಟುನಿಟ್ಟಿನ ನೀತಿ ಸಂಹಿತೆ

ನವದೆಹಲಿ: ಇತ್ತೀಚೆಗೆ ಯೂಟ್ಯೂಬರ್‌ ರಣವೀರ್‌ ಅಲಹಾಬಾದಿಯಾ ಕಾರ್ಯಕ್ರಮವೊಂದರಲ್ಲಿ ಅಶ್ಲೀಲವಾಗಿ ಮಾತಾಡಿದ ಬೆನ್ನಲ್ಲೇ ಅಂತಹ ಘಟನೆಗಳನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್‌ ನೀಡಿದ ಸೂಚನೆಯನ್ನು ಕೇಂದ್ರ ಸರ್ಕಾರ ಕಾರ್ಯರೂಪಕ್ಕೆ ತಂದಿದೆ. ಈ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಒಟಿಟಿ ವೇದಿಕೆಗಳು ಹಾಗೂ ಸೋಷಿಯಲ್‌ ಮೀಡಿಯಾಗಳಿಗೆ ಕಟ್ಟುನಿಟ್ಟಿನ ಸಲಹಾವಳಿ ಜಾರಿ ಮಾಡಿದೆ.

ಅದರಲ್ಲಿ, ‘ಎಲ್ಲಾ ಸಾಮಾಜಿಕ ಮಾಧ್ಯಮಗಳು ಹಾಗೂ ಒಟಿಟಿ (ಆನ್‌ಲೈನ್‌ ಕ್ಯುರೇಟೆಡ್‌ ಕಂಟೆಂಟ್) ವೇದಿಕೆಗಳು ಐಟಿ ನಿಯಮಗಳಲ್ಲಿ ಸೂಚಿಸಲಾದ ನೀತಿ ಸಂಹಿತೆ (2021)ಯನ್ನು ಪಾಲಿಸಬೇಕು. ಸ್ವಯಂ ನಿಯಂತ್ರಣವನ್ನು ಖಾತ್ರಿಪಡಿಸಿಕೊಳ್ಳಬೇಕು. ಮಕ್ಕಳು ಅನುಚಿತ ವಿಷಯಗಳನ್ನು ನೋಡದಂತೆ ತಡೆಯಲು ‘ಎ’ ಕಂಟೆಂಟ್‌ಗಳ ಲಭ್ಯತೆಯನ್ನು ನಿಯಂತ್ರಿಸಬೇಕು’ ಎಂದು ಸೂಚಿಸಲಾಗಿದೆ.
ಕೆಲ ಒಟಿಟಿಗಳು ಹಾಗೂ ಸಾಮಾಜಿಕ ಮಾಧ್ಯಮಗಳು ಅಶ್ಲೀಲ ಹಾಗೂ ಅಸಭ್ಯ ವಿಷಯಗಳನ್ನು ಪ್ರಸಾರ ಮಾಡುತ್ತಿವೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ, ಕಾನೂನಿನಿಂದ ನಿಷೇಧಿಸಲ್ಪಟ್ಟ ಯಾವುದೇ ವಿಷಯವನ್ನು ಪ್ರಕಟಿಸದಂತೆ ಎಚ್ಚರಿಸಲಾಗಿದೆ.

ರಣವೀರ್‌ ಅಲಹಾಬಾದಿಯಾ ವಿರುದ್ಧ ದಾಖಲಾಗಿದ್ದ ಪ್ರಕರಣಗಳ ವಿಚಾರಣೆ ನಡೆಸಿದ್ದ ಕೋರ್ಟ್‌, ಅವರಾಡಿದ್ದ ನುಡಿಗಳ ಬಗ್ಗೆ ಅಸಹ್ಯ ವ್ಯಕ್ತಪಡಿಸಿ, ‘ಇದು ಅಶ್ಲೀಲತೆ ಅಲ್ಲದಿದ್ದರೆ ಇನ್ನೇನು?’ ಎಂದು ಪ್ರಶ್ನಿಸಿತ್ತು. ಜೊತೆಗೆ, ಇದರ ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಸೂಚಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..