India-US trade deal: ಇದು ವ್ಯಾಪಾರವಲ್ಲ, ದೇಶದ ರೈತರ ಮರಣ ಶಾಸನ! ಮುಖ್ಯಮಂತ್ರಿ ಚಂದ್ರು ಕಿಡಿ

Kannadaprabha News, Ravi Janekal |   | Kannada Prabha
Published : Feb 17, 2026, 07:16 AM IST
India US Trade Pact is a Death Warrant Mukhyamantri Chandru Slams Deal

ಸಾರಾಂಶ

ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಭಾರತ-ಅಮೆರಿಕ ವಾಣಿಜ್ಯ ಒಪ್ಪಂದ ವಿರೋಧಿಸಿ ಪ್ರತಿಭಟನೆ ನಡೆಯಿತು. ಅಮೆರಿಕದ ಕೃಷಿ ಉತ್ಪನ್ನಗಳಿಗೆ ಕಡಿಮೆ ಸುಂಕದಲ್ಲಿ ಭಾರತೀಯ ಮಾರುಕಟ್ಟೆ ನೀಡುವುದರಿಂದ ದೇಶದ ರೈತರಿಗೆ ಮರಣ ಶಾಸನವಾಗಲಿದೆ ಎಂದು ಆರೋಪಿಸಿದರು.

ಬೆಂಗಳೂರು (ಫೆ.17): ಭಾರತ ಮತ್ತು ಅಮೆರಿಕ ವಾಣಿಜ್ಯ ಒಪ್ಪಂದವನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದಲ್ಲಿ ಸೋಮವಾರ ನಗರದ ಫ್ರೀಡಂ ಪಾರ್ಕ್‌ನಲ್ಲಿ ವಿಡಂಬನಾತ್ಮಕ ಅಣುಕು ಪ್ರದರ್ಶನ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಭಾರತ ದೇಶವು ಪರಂಪರಾನುಗತವಾಗಿ ಕೃಷಿ ಕ್ಷೇತ್ರವನ್ನು ತನ್ನ ಆರ್ಥಿಕತೆಯ ಬೆನ್ನೆಲುಬಾಗಿ ಕಾಪಾಡಿಕೊಂಡು ಬಂದಿದೆ. ಕೋಟ್ಯಂತರ ಸಂಖ್ಯೆಯ ಸಣ್ಣ ಸಣ್ಣ ರೈತರುಗಳು ಇಂದಿಗೂ ಸಹ ಭಾರತದ ಆರ್ಥಿಕತೆಗೆ ಬೆನ್ನೆಲುಬಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಅಮೆರಿಕ ದೇಶದ ಒತ್ತಡ ಹಾಗೂ ಹಿತಾಸಕ್ತಿಗೆ ಬಲಿಯಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಎರಡು ದೇಶಗಳ ನಡುವಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕವೆಂದು ಹೇಳುತ್ತಲೇ ಭಾರತೀಯ ರೈತರುಗಳಿಗೆ ಮರಣ ಶಾಸನವನ್ನೇ ಬರೆದುಬಿಟ್ಟಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿ: RSS ghost controversy: ನೋಂದಣಿ ಆಗದ ಸಂಸ್ಥೆಯನ್ನು ‘ಘೋಷ್ಟ್‌’ ಅಂತಾರೆ: ಖರ್ಗೆ ಹೇಳಿಕೆಗೆ ಹರಿಪ್ರಸಾದ್‌ ಸಮರ್ಥನೆ

ಭಾರತದ 145 ಕೋಟಿ ಜನಸಂಖ್ಯೆಯಲ್ಲಿ 85 ರಿಂದ 90 ಕೋಟಿ ಜನತೆ ಕೃಷಿ ಚಟುವಟಿಕೆಗಳು ಹಾಗೂ ಕೃಷಿ ಸಂಬಂಧಿತ ಉದ್ಯೋಗಗಳಲ್ಲಿ ತೊಡಗಿಕೊಂಡಿದ್ದಾರೆ. ನಮ್ಮ ರೈತರು ಯಾವುದೇ ಯಾಂತ್ರಿಕೃತ ವ್ಯವಸ್ಥೆಗಳಿಲ್ಲದೆ ಕೃಷಿ ಬದುಕಿನಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ತದ್ವಿರುದ್ಧವಾಗಿ ಅಮೆರಿಕಾ ದೇಶವು ಸಂಪೂರ್ಣ ಯಾಂತ್ರಿಕೃತ ವ್ಯವಸ್ಥೆಗಳಿಂದ ಲಕ್ಷಾಂತರ ಎಕರೆ ಭೂಪ್ರದೇಶಗಳಲ್ಲಿ ಲಕ್ಷಾಂತರ ಬೆಳೆಗಳನ್ನು ಬೆಳೆಯುತ್ತಾರೆ. ಮೋದಿ ಹಾಗೂ ಟ್ರಂಪ್ ನಡುವಿನ ಈ ವ್ಯಾಪಾರ ಒಪ್ಪಂದದಲ್ಲಿ ಯಾಂತ್ರಿಕೃತ ವ್ಯವಸ್ಥೆಯಿಂದ ಬೆಳೆದಿರುವ ಅಮೆರಿಕಾ ದೇಶದ ಲಕ್ಷಾಂತರ ಕೃಷಿ ಬೆಳೆಗಳನ್ನು ಭಾರತವು ಶೂನ್ಯ ಅಥವಾ ಕಡಿಮೆ ಸುಂಕದ ರೂಪದಲ್ಲಿ ಮಾರುಕಟ್ಟೆ ಸೃಷ್ಟಿಸಲು ಹೊರಟಿರುವುದು ನಿಜಕ್ಕೂ ರೈತರು ಕಂಗಾಲಾಗಿರುವ ಸಂಗತಿಯಾಗಿದೆ ಎಂದರು.

ಅಂದಾಜು 45 ಲಕ್ಷ ಕೋಟಿಗು ಹೆಚ್ಚಿನ ಮೊತ್ತದ ಅಮೆರಿಕಾದ ಕೃಷಿ ಬೆಳೆಗಳನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಬೇಕಿದೆ. ಭಾರತದ ಬಡ ರೈತರು ಬೆಳೆಯುತ್ತಿರುವ ಕೃಷಿ ಬೆಳೆಗಳನ್ನು ಅಮೆರಿಕ ದೇಶಕ್ಕೆ ರಫ್ತು ಮಾಡಬೇಕಿದ್ದಲ್ಲಿ ಶೇ.18 ಸುಂಕ ವೆಚ್ಚವನ್ನು ತೆರಬೇಕಿದೆ. ಇದುವೇ ಭಾರತೀಯ ರೈತರುಗಳಿಗೆ ಮೋದಿಯವರು ನೀಡುತ್ತಿರುವ ಗಲ್ಲು ಶಿಕ್ಷೆ . ಪ್ರಧಾನಿ ನರೇಂದ್ರ ಮೋದಿಯವರು ಯಾವುದೋ ಒತ್ತಡಕ್ಕೆ, ಬಾಹ್ಯ ಹಿತಾಸಕ್ತಿಗೆ ಮಣಿದು ದೇಶದ ರೈತರಿಗೆ ದ್ರೋಹ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: ಪನ್ನೂನ್ ಹತ್ಯೆ ಸಂಚು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಮೆರಿಕ ಕೋರ್ಟ್‌ನಲ್ಲಿ ನಿಖಿಲ್ ಗುಪ್ತಾ ದಿಢೀರ್ ತಪ್ಪೊಪ್ಪಿಗೆ!

ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ ಗುಂಡಪ್ಪ, ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ.ಸತೀಶ್ ಕುಮಾರ್, ಪಕ್ಷದ ಮುಖಂಡರುಗಳಾದ ಉಷಾ ಮೋಹನ್, ಅಶೋಕ್ ಮೃತ್ಯುಂಜಯ, ಶಶಿಧರ ಆರಾಧ್ಯ, ಡಾ.ದಿನೇಶ್, ಪುಟ್ಟಣ್ಣ ಗೌಡ,ಪುಷ್ಪ ಕೇಶವ್ ಸೇರಿಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾಂಗ್ರೆಸ್‌ಗೆ ದೊಡ್ಡ ಆಘಾತ : 36 ವರ್ಷಗಳಿಂದ ಪಕ್ಷಕ್ಕಾಗಿ ಶ್ರಮಿಸಿದ ನಾಯಕ ರಾಜೀನಾಮೆ
India Latest News Live: ಭಾರತಕ್ಕೆ ಅಮೆರಿಕದ ಬಿಸಿ, ಚೀನಾಕ್ಕೆ ರಷ್ಯಾ ತೈಲದ ಖುಷಿ: ಡ್ರ್ಯಾಗನ್ ರಾಷ್ಟ್ರದ ಹೊಸ ದಾಖಲೆ