'ದೇಶದಲ್ಲಿ ಸೋಂಕಿತರ ಸಂಖ್ಯೆ ಒಂದು ಕೋಟಿಗೆ ನಿಂತರೆ ನಮ್ಮ ಪುಣ್ಯ..!'

Suvarna News   | Asianet News
Published : Jul 17, 2020, 08:37 AM IST
'ದೇಶದಲ್ಲಿ ಸೋಂಕಿತರ ಸಂಖ್ಯೆ ಒಂದು ಕೋಟಿಗೆ ನಿಂತರೆ ನಮ್ಮ ಪುಣ್ಯ..!'

ಸಾರಾಂಶ

ದೇಶದಲ್ಲಿ ಕೊರೋನಾ ವೈರಸ್‌ ಪ್ರಕರಣಗಳು ಏರಿಕೆ ಆಗಿ ಇಳಿಕೆಯಾಗಬೇಕಿತ್ತು. ಆದರೆ, ಸೋಂಕು ಹೆಚ್ಚು ಮಂದಿಗೆ ವ್ಯಾಪಿಸುತ್ತಿದೆ. ನನ್ನ ಪ್ರಕಾರ 1 ಕೋಟಿಯಲ್ಲಿ ಕೊರೋನಾ ಪ್ರಕರಣಗಳು ಮುಕ್ತಾಯವಾದರೂ ನಾವು ಅದೃಷ್ಟಶಾಲಿಗಳು ಎಂದು ಅಪೋಲೋ ಆಸ್ಪತ್ರೆಗಳ ಸಮೂಹದ ಕಾರ್ಯನಿರ್ವಾಹಕ ಉಪಾಧ್ಯಕ್ಷೆ ಶೋಬನಾ ಕಮಿನೇನಿ ಆತಂಕ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

ನವದೆಹಲಿ(ಜು.17): ಒಂದು ವೇಳೆ ಭಾರತದಲ್ಲಿ ಕೊರೊನಾ ವೈರಸ್‌ ಪ್ರಕರಣಗಳು 1 ಕೋಟಿಗೆ ಮುಕ್ತಾಯಗೊಂಡರೆ ಅದು ನಮ್ಮ ಅದೃಷ್ಟ. ಆದರೆ, ಕೊರೋನಾ ಸೋಂಕಿತರ ಸಂಖ್ಯೆ ಇಷ್ಟಕ್ಕೇ ಸೀಮಿತಗೊಳ್ಳುವ ಲಕ್ಷಣಗಳು ಗೋಚರಿಸುತ್ತಿಲ್ಲ ಎಂದು ಅಪೋಲೋ ಆಸ್ಪತ್ರೆಗಳ ಸಮೂಹದ ಕಾರ್ಯನಿರ್ವಾಹಕ ಉಪಾಧ್ಯಕ್ಷೆ ಶೋಬನಾ ಕಮಿನೇನಿ ಆತಂಕ ವ್ಯಕ್ತಪಡಿಸಿದ್ದಾರೆ.

ಇಂಗ್ಲಿಷ್‌ ವೆಬ್‌ಸೈಟ್‌ವೊಂದಕ್ಕೆ ಸಂದರ್ಶನ ನೀಡಿದ ಅವರು, ‘ದೇಶದಲ್ಲಿ ಕೊರೋನಾ ವೈರಸ್‌ ಪ್ರಕರಣಗಳು ಏರಿಕೆ ಆಗಿ ಇಳಿಕೆಯಾಗಬೇಕಿತ್ತು. ಆದರೆ, ಸೋಂಕು ಹೆಚ್ಚು ಮಂದಿಗೆ ವ್ಯಾಪಿಸುತ್ತಿದೆ. ಸೋಂಕು ಇದೇ ರೀತಿ ಏರಿಕೆಯಾದರೆ ಅದರ ನಿಯಂತ್ರಣ ದೊಡ್ಡ ಸವಾಲಾಗಿದೆ. ತಜ್ಞರ ಪ್ರಕಾರ ದೇಶದಲ್ಲಿ ಕೊರೋನಾ ವೈರಸ್‌ ಪ್ರಕರಣ 80 ಲಕ್ಷ ತಲುಪಬಹುದು ಎಂದು ಹೇಳಲಾಗುತ್ತಿದೆ. ಆದರೆ, ನನ್ನ ಪ್ರಕಾರ 1 ಕೋಟಿಯಲ್ಲಿ ಕೊರೋನಾ ಪ್ರಕರಣಗಳು ಮುಕ್ತಾಯವಾದರೂ ನಾವು ಅದೃಷ್ಟಶಾಲಿಗಳು’ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ನಿನ್ನೆ 4169 ಕೇಸ್‌: 1 ವಾರದಲ್ಲಿ 549 ಬಲಿ!

ಇದೇ ವೇಳೆ ಕೊರೋನಾ ಪರಿಸ್ಥಿತಿಯ ಲಾಭಕ್ಕೆ ಯತ್ನಿಸುತ್ತಿರುವ ಕೆಲ ನರ್ಸಿಂಗ್‌ಹೋಮ್‌ ಮತ್ತು ಆಸ್ಪತ್ರೆಗಳು, ಚಿಕಿತ್ಸೆಗೆ ಹೆಚ್ಚಿನ ದರ ವಿಧಿಸುತ್ತಿವೆ. ಹೀಗಾಗಿ, ಸರ್ಕಾರ ಮತ್ತು ಖಾಸಗಿ ಆಸ್ಪತ್ರೆಗಳು ಸಮಾಲೋಚಿಸಿ ಚಿಕಿತ್ಸಾ ವೆಚ್ಚಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ನಿಧನ
India Latest News Live: ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ನಿಧನ