
ದುಬೈ: ಭಾರತ ಕ್ರಿಕೆಟ್ ತಂಡವು 2025ರ ಏಷ್ಯಾಕಪ್ ಫೈನಲ್‌ನಲ್ಲಿ ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಸೋಲಿಸಿ ಒಂಬತ್ತನೇ ಬಾರಿಗೆ ಚಾಂಪಿಯನ್ ಪಟ್ಟವನ್ನು ಗೆದ್ದುಕೊಂಡಿದೆ. ಆದರೆ, ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿ ಮತ್ತು ಪದಕಗಳನ್ನು ಸ್ವೀಕರಿಸಲು ಭಾರತ ತಂಡ ನಿರಾಕರಿಸಿದ್ದು, ಈ ಘಟನೆ ಕ್ರೀಡಾಲೋಕದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಟೀಂ ಇಂಡಿಯಾ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ್ದೇಕೆ?
ಭಾರತ ತಂಡವು ಎಸಿಸಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ಒಪ್ಪದ ಕಾರಣ, ಪ್ರಶಸ್ತಿ ಪ್ರದಾನ ಸಮಾರಂಭವು ಸುಮಾರು ಒಂದು ಗಂಟೆ ತಡವಾಯಿತು. ಮೊಹ್ಸಿನ್ ನಖ್ವಿ ಅವರು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (ಪಿಸಿಬಿ) ಮುಖ್ಯಸ್ಥರಾಗಿಯೂ ಮತ್ತು ಪಾಕಿಸ್ತಾನದ ಆಂತರಿಕ ಸಚಿವರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಈ ನಿರಾಕರಣೆಯನ್ನು ಪಾಕಿಸ್ತಾನಕ್ಕೆ ಗಂಭೀರ ಅವಮಾನವೆಂದು ಪರಿಗಣಿಸಲಾಗಿದೆ.
ಅಮಿತ್ ಮಾಳವೀಯ ಟ್ವೀಟ್:
ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಸಾಮಾಜಿಕ ಮಾಧ್ಯಮ ವೇದಿಕೆ Xನಲ್ಲಿ ಈ ಘಟನೆಗೆ ಪ್ರತಿಕ್ರಿಯಿಸಿ, 'ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮೊಹ್ಸಿನ್ ನಖ್ವಿ ಪ್ರಶಸ್ತಿ ಪ್ರದಾನ ಮಾಡುವ ಬಗ್ಗೆ ಅಚಲವಾಗಿರುವುದರಿಂದ ಭಾರತ ಏಷ್ಯಾ ಕಪ್ ಟ್ರೋಫಿ ಮತ್ತು ಪದಕಗಳನ್ನು ಸ್ವೀಕರಿಸಲು ನಿರಾಕರಿಸಿದೆ. ನಾವು ಪಾಕಿಸ್ತಾನವನ್ನು ಮೈದಾನದಲ್ಲಿ ಸೋಲಿಸಿದ್ದಲ್ಲದೆ, ಭಯೋತ್ಪಾದಕ ರಾಷ್ಟ್ರ ಪಾಕಿಸ್ತಾನದ ಪ್ರಮುಖ ಪ್ರಚಾರಕರಾಗಿರುವ ನಖ್ವಿಗೆ ಅವರ ಸ್ಥಾನವನ್ನು ತೋರಿಸಿದ್ದೇವೆ. ಇದು ನವ ಭಾರತ ಎಂದು ಬರೆದಿದ್ದಾರೆ.
ನವ ಭಾರತದ ಸಂದೇಶ:
ಭಾರತದ ಈ ಗೆಲುವು ಮತ್ತು ಟ್ರೋಫಿ ನಿರಾಕರಣೆಯು ಕೇವಲ ಕ್ರೀಡಾ ಸಾಧನೆಯನ್ನು ಮೀರಿ ರಾಜಕೀಯ ಮತ್ತು ರಾಷ್ಟ್ರೀಯ ಹೆಮ್ಮೆಯ ಸಂಕೇತವಾಗಿ ಕಾಣಿಸಿದೆ. ಈ ಘಟನೆಯು ಭಾರತ-ಪಾಕಿಸ್ತಾನ ಕ್ರಿಕೆಟ್‌ನ ರಾಜಕೀಯ ಸೂಕ್ಷತೆಯನ್ನ ಮತ್ತೊಮ್ಮೆ ಮುನ್ನೆಲೆಗೆ ತಂದಿದೆ.
ಪಂದ್ಯದ ಸಂಕ್ಷಿಪ್ತ ವಿವರ:
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡವು 19.1 ಓವರ್‌ಗಳಲ್ಲಿ 146 ರನ್‌ಗಳಿಗೆ ಆಲೌಟ್ ಆಯಿತು. 147 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ, ಆರಂಭದಲ್ಲಿ ಅಭಿಷೇಕ್ ಶರ್ಮಾ (5), ಶುಭ್ಮನ್ ಗಿಲ್ (12), ಮತ್ತು ನಾಯಕ ಸೂರ್ಯಕುಮಾರ್ ಯಾದವ್ (1) ಅವರ ವಿಕೆಟ್‌ಗಳನ್ನು ಕಳೆದುಕೊಂಡು 20 ರನ್‌ಗಳಿಗೆ ಸಂಕಷ್ಟಕ್ಕೆ ಸಿಲುಕಿತ್ತು. ಆದರೆ, ಯುವ ಬ್ಯಾಟ್ಸ್‌ಮನ್ ತಿಲಕ್ ವರ್ಮಾ ಅವರ ಅಜೇಯ 69 ರನ್‌ಗಳ (53 ಎಸೆತ) ಭರ್ಜರಿ ಬ್ಯಾಟಿಂಗ್‌ನಿಂದ ಭಾರತ 19.4 ಓವರ್‌ಗಳಲ್ಲಿ 150/5 ರನ್‌ಗಳೊಂದಿಗೆ ಗೆಲುವಿನ ಗೆರೆ ತಲುಪಿತು. ತಿಲಕ್ ವರ್ಮಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರೆ, ಅಭಿಷೇಕ್ ಶರ್ಮಾ ಸರಣಿಶ್ರೇಷ್ಠ ಪ್ರಶಸ್ತಿಯನ್ನು ಪಡೆದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ