ನವದೆಹಲಿ (ನ.19): 9 ಸಾವಿರಕ್ಕಿಂತ ಕಡಿಮೆಯಾಗಿದ್ದ ಕೋವಿಡ್ (Covid) ಪ್ರಕರಣಗಳು ಗುರುವಾರ ಕೊಂಚ ಏರಿಕೆ ಕಂಡಿವೆ. ಗುರುವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳಲ್ಲಿ ಹೊಸದಾಗಿ 11,919 ಪ್ರಕರಣಗಳು ದಾಖಲಾಗಿದೆ.
ಅದೇ ರೀತಿ ಕಳೆದ 24 ಗಂಟೆಗಳಲ್ಲಿ ಸಕ್ರಿಯ ಪ್ರಕರಣಗಳಲ್ಲೂ 207 ಪ್ರಕರಣಗಳು ಹೆಚ್ಚಾಗಿದೆ. ಇದೇ ಅವಧಿಯಲ್ಲಿ 470 ಸೋಂಕಿತರು ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 4.64 ಲಕ್ಷಕ್ಕೆ ಏರಿಕೆಯಾಗಿದೆ.
undefined
ಸತತ 41 ದಿನಗಳಿಂದ ದೈನಂದಿನ ಪ್ರಕರಣಗಳ ಸಂಖ್ಯೆ 20 ಸಾವಿರಕ್ಕಿಂತ ಕಡಿಮೆ ದಾಖಲಾಗುತ್ತಿದೆ. ದೈನಂದಿನ ಪಾಸಿಟಿವಿಟಿ (Positivity) ದರ ಶೇ. 0.97 ಹಾಗೂ ವಾರದ ಪಾಸಿಟಿವಿಟಿ ದರ 0.94ರಷ್ಟಿದೆ. ಈವರೆಗೆ ದೇಶದಲ್ಲಿ 114.46 ಕೋಟಿ ಡೋಸ್ (Vaccine) ಲಸಿಕೆ ವಿತರಿಸಲಾಗಿದೆ.
ಕರ್ನಾಟಕದಲ್ಲಿ ಕೊಂಚ ಏರಿಕೆ :
ಬೆಂಗಳೂರು, (ನ.18): ರಾಜ್ಯದಲ್ಲಿ ಬುಧವಾರ ಕೊರೋನಾ ಸೋಂಕಿತರ ಸಂಖ್ಯೆ ಕೊಂಚ ಹೆಚ್ಚಾಗಿದ್ದು, 308 ಮಂದಿಯಲ್ಲಿ ಕೋವಿಡ್ ದೃಢಪಟ್ಟಿದೆ. 8 ಮಂದಿ ಮೃತರಾಗಿದ್ದಾರೆ. 384 ಮಂದಿ ಗುಣಮುಖರಾಗಿದ್ದಾರೆ.
ನವೆಂಬರ್ 10ರಂದು 328 ಪ್ರಕರಣ ದಾಖಲಾದ ವಾರದ ಬಳಿಕ ಮತ್ತೆ 300ಕ್ಕಿಂತ ಹೆಚ್ಚು ದೈನಂದಿನ ಪ್ರಕರಣ ಪತ್ತೆಯಾಗಿದೆ. 1.04 ಲಕ್ಷ ಕೋವಿಡ್ ಪರೀಕ್ಷೆ ಬರೆದಿದ್ದು ಶೇ.0.29ರ ಪಾಸಿಟಿವಿಟಿ ದರ ದಾಖಲಾಗಿದೆ.
ಡಬಲ್ ಡೋಸ್‌ನಿಂದ 1 ವರ್ಷಕ್ಕಿಂತ ಹೆಚ್ಚಿನ ಸುರಕ್ಷೆ : ಸೌಮ್ಯಾ ಸ್ವಾಮಿನಾಥನ್!
ಬೆಂಗಳೂರು ನಗರದಲ್ಲಿ 207 ಪ್ರಕರಣ ಪತ್ತೆಯಾಗಿದ್ದು, ಅನೇಕ ದಿನಗಳ ಬಳಿಕ ಇನ್ನೂರಕ್ಕಿಂತ ಹೆಚ್ಚು ಪ್ರಕರಣ ನಗರದಲ್ಲಿ ಒಂದೇ ದಿನ ಪತ್ತೆಯಾಗಿದೆ. ಉಳಿದಂತೆ ಮೈಸೂರು 21, ತುಮಕೂರು 18, ಕೊಡಗು 11 ಪ್ರಕರಣ ವರದಿಯಾಗಿದೆ. ಬಾಗಲಕೋಟೆ, ಬಳ್ಳಾರಿ, ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಹೊಸ ಪ್ರಕರಣ ಪತ್ತೆಯಾಗಿಲ್ಲ.
ಬೆಂಗಳೂರು ನಗರದಲ್ಲಿ ಇಬ್ಬರು, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಕೋಲಾರ, ಕೊಪ್ಪಳ, ಮೈಸೂರು ಜಿಲ್ಲೆಯಲ್ಲಿ ತಲಾ ಒಬ್ಬರು ಸೋಂಕಿನಿಂದ ಮರಣವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಈವರೆಗೆ ಒಟ್ಟು 29.92 ಲಕ್ಷ ಮಂದಿ ಕೋವಿಡ್ ಪೀಡಿತರಾಗಿದ್ದು 29.46 ಮಂದಿ ಚೇತರಿಸಿಕೊಂಡಿದ್ದಾರೆ. 38,161 ಮಂದಿ ಮರಣವನ್ನಪ್ಪಿದ್ದಾರೆ.
ಲಸಿಕೆ ಅಭಿಯಾನ:
ರಾಜ್ಯದಲ್ಲಿ ಬುಧವಾರ 5.39 ಲಕ್ಷ ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. 4.40 ಲಕ್ಷ ಮಂದಿ ಎರಡನೇ ಮತ್ತು 98,748 ಮಂದಿ ಮೊದಲ ಡೋಸ್ ಲಸಿಕೆ ಸ್ವೀಕರಿಸಿದ್ದಾರೆ. ಈವರೆಗೆ ಒಟ್ಟು 6.91 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. 4.34 ಕೋಟಿ ಮೊದಲ ಮತ್ತು 2.57 ಕೋಟಿ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.
2ನೇ ಡೋಸ್ ಲಸಿಕೆ ಕಡ್ಡಾಯ ಮಾಡುವಂತೆ ಸಲಹೆ
ರಾಜ್ಯದಲ್ಲಿ(Karnataka) ಕೋವಿಡ್-19(Covid19) ಲಸಿಕೆಯ ಎರಡನೇ ಡೋಸ್ ಪಡೆಯಲು ಜನರು ನಿರುತ್ಸಾಹ ತೋರುತ್ತಿರುವುದು ಮತ್ತು ಕೆಲ ದೇಶಗಳಲ್ಲಿ ಕೋವಿಡ್ ಮತ್ತೆ ರಣಕೇಕೆ ಹಾಕುತ್ತಿರುವುದನ್ನು ಗಮನಿಸಿ ಎರಡನೇ ಡೋಸ್ ಪಡೆಯುವುದನ್ನು ಕಡ್ಡಾಯ ಮಾಡಬೇಕು ಎಂದು ಆರೋಗ್ಯ ತಜ್ಞರು(Health Experts) ರಾಜ್ಯ ಸರ್ಕಾರಕ್ಕೆ(Government of Karnataka) ಒತ್ತಾಯ ಮಾಡಿದ್ದಾರೆ.
ಕೋವಿಡ್ ಲಸಿಕೆ(Vaccine) ಪಡೆಯಲು ಅರ್ಹರಾಗಿರುವ ವಯಸ್ಕರಲ್ಲಿ ಶೇ.88ರಷ್ಟು ಮಂದಿ ಈಗಾಗಲೇ ಮೊದಲ ಡೋಸ್ ಪಡೆದಿದ್ದಾರೆ. ಆದರೆ ಎರಡನೇ ಡೋಸ್ ಪಡೆದವರ ಸಂಖ್ಯೆ ಶೇ.50 ಮುಟ್ಟಿಲ್ಲ. ಈ ಮಧ್ಯೆ ಲಸಿಕೆಯ ಎರಡನೇ ಡೋಸ್ ಪಡೆಯುವ ಅವಧಿ ಮುಕ್ತಾಯಗೊಂಡಿದ್ದರೂ ಎಷ್ಟೋ ಮಂದಿ ಇನ್ನೂ ಲಸಿಕೆ ಹಾಕಿಸಿಕೊಂಡಿಲ್ಲ. ಕೆಲ ರಾಷ್ಟ್ರಗಳಲ್ಲಿ ಲಸಿಕಾಕರಣದ ಬಗ್ಗೆ ತೋರಿದ್ದ ಅಸಡ್ಡೆಗೆ ಬೆಲೆ ತೆರುವ ಸ್ಥಿತಿ ಬಂದಿದೆ. ಹೀಗಾಗಿ ಕೊರೋನಾ(Coronavirus) ಲಸಿಕೆಯ ಎರಡೂ ಡೋಸ್ ಪಡೆದವರಿಗೆ ಮಾತ್ರ ಸಾಮಾಜಿಕ- ಆರ್ಥಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ಅವಕಾಶ ನೀಡಬೇಕು. ತನ್ಮೂಲಕ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ.
ಡಬಲ್ ಡೋಸ್‌ನಿಂದ 1 ವರ್ಷಕ್ಕಿಂತ ಹೆಚ್ಚಿನ ಸುರಕ್ಷೆ
ಕೋವಿಡ್ ಲಸಿಕೆಗಳು (Corona Vaccine) ನಿರೀಕ್ಷೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಜನರಿಗೆ ಸೋಂಕಿನಿಂದ (Virus) ರಕ್ಷಣೆ ನೀಡಲಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ (WHO) ಹಿರಿಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ (Soumya Swaminathan) ಹೇಳಿದ್ದಾರೆ. ಇದೇ ವೇಳೆ ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಸೋಂಕಿನ ಪ್ರಮಾಣ ಉಲ್ಬಣಗೊಳ್ಳುವುದು ನಿರೀಕ್ಷಿತವಾಗಿದೆ ಎಂದಿದ್ದಾರೆ. ಪಶ್ಚಿಮ ಯುರೋಪ್‌ನ (Europe) ಹಲವು ದೇಶಗಳಲ್ಲಿ ಸೋಂಕಿನ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡುಬರುತ್ತಿದೆ. ಜೊತೆಗೆ ನಾನಾ ಕಾರಣಗಳಿಂದಾಗಿ ಆಸ್ಪತ್ರೆಗೆ ದಾಖಲಾಗುವ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತಿದೆ. ಆದರೆ ಸಾವಿನ ಪ್ರಮಾಣದಲ್ಲಿ ಗಮನಾರ್ಹ ಏರಿಕೆ ದಾಖಲಾಗಿಲ್ಲ. ಇದಕ್ಕೆ ಮುಖ್ಯ ಕಾರಣ, ಸೋಂಕಿಗೆ ತುತ್ತಾಗುವ ಸಾಧ್ಯತೆ ಇದ್ದ ಬಹುತೇಕ ಜನರಿಗೆ ಎರಡೂ ಡೋಸ್ ಲಸಿಕೆ (2nd Dose) ನೀಡಿರುವುದು ಎಂದು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.