
ನವದೆಹಲಿ(ಜ.10): ಭಾರತ ಹಾಗೂ ಚೀನಾ ನಡುವೆ ತ್ವೇಷಮಯ ಪರಿಸ್ಥಿತಿ ಮುಂದುವರಿದಿರುವ ಪೂರ್ವ ಲಡಾಖ್ ಗಡಿಯಲ್ಲಿ ಚೀನಾ ಯೋಧನೊಬ್ಬ ಭಾರತದೊಳಕ್ಕೆ ಪ್ರವೇಶಿಸಿದ ಘಟನೆ ನಡೆದಿದೆ. ಆ ಸೈನಿಕನನ್ನು ಭಾರತೀಯ ಯೋಧರು ಸೆರೆ ಹಿಡಿದಿದ್ದಾರೆ. ಚೀನಾ ಸೈನಿಕನೊಬ್ಬ ಭಾರತದೊಳಕ್ಕೆ ನುಗ್ಗಿರುವುದು ಮೂರು ತಿಂಗಳಲ್ಲಿ ಇದು ಎರಡನೇ ಬಾರಿ.
ಪ್ಯಾಂಗೋಂಗ್ ದಕ್ಷಿಣ ದಂಡೆಯಲ್ಲಿ ಶುಕ್ರವಾರ ಬೆಳಗ್ಗೆ ಈ ಚೀನಾ ಸೈನಿಕ ಪತ್ತೆಯಾಗಿದ್ದಾನೆ. ಆತನನ್ನು ಸ್ಥಳದಲ್ಲಿದ್ದ ಯೋಧರು ವಶಕ್ಕೆ ಪಡೆದುಕೊಂಡಿದ್ದಾರೆ. ಅವನು ಹೇಗೆ, ಏಕೆ ಒಳಗೆ ಬಂದ ಎಂದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಅ.19ರಂದು ಚೀನಾದ ಯೋಧ ವಾಂಗ್ ಯಾ ಲಾಂಗ್ ಎಂಬಾತ ಗಡಿಯೊಳಕ್ಕೆ ಬಂದಿದ್ದ. ಆತನನ್ನು ಲಡಾಖ್‌ನ ಡೆಮ್ಚೋಕ್ ವಲಯದಲ್ಲಿ ಸೆರೆ ಹಿಡಿಯಲಾಗಿತ್ತು. ಬಳಿಕ ಚೀನಾಕ್ಕೆ ಹಸ್ತಾಂತರಿಸಲಾಗಿತ್ತು.
ಭಾರತ- ಚೀನಾ ಗಡಿಯಲ್ಲಿ ಕಳೆದ ಮೇನಿಂದ ತ್ವೇಷಮಯ ಪರಿಸ್ಥಿತಿ ನಿರ್ಮಾಣವಾಗಿದ್ದು, ಭಾರತ 50 ಸಾವಿರ ಯೋಧರನ್ನು ಯುದ್ಧ ಸನ್ನದ್ಧ ಸ್ಥಿತಿಯಲ್ಲಿರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ