ಉಗ್ರ ದಾಳಿ ಖಚಿತಪಡಿಸಿದ ಭಾರತೀಯ ಸೇನೆ, ಗ್ರೆನೇಡ್ ಆ್ಯಟಾಕ್‌ಗೆ ಐವರು ಯೋಧರು ಹುತಾತ್ಮ!

Published : Apr 20, 2023, 09:01 PM ISTUpdated : Apr 20, 2023, 09:05 PM IST
ಉಗ್ರ ದಾಳಿ ಖಚಿತಪಡಿಸಿದ ಭಾರತೀಯ ಸೇನೆ, ಗ್ರೆನೇಡ್ ಆ್ಯಟಾಕ್‌ಗೆ ಐವರು ಯೋಧರು ಹುತಾತ್ಮ!

ಸಾರಾಂಶ

ಪೂಂಚ್ ಬಳಿಕ ಭಾರತೀಯ ಸೇನಾ ವಾಹನ ಹೊತ್ತಿ ಉರಿದ ಘಟನೆ ಹಿಂದೆ ಉಗ್ರರ ದಾಳಿ ಖಚಿತಗೊಂಡಿದೆ. ಭಾರತೀಯ ಸೇನಾ ವಾಹನದ ಮೇಲೆ ಉಗ್ರರ ಗ್ರೆನೇಡ್ ದಾಳಿ ನಡೆಸಿ ವಾಹನ ಸ್ಫೋಟಿಸಿದ್ದಾರೆ. ಈ ಘಟನೆಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ.  

ಪೂಂಚ್(ಏ.20): ಯೋಧರು ತೆರಳುತ್ತಿದ್ಧ ಸೇನಾ ವಾಹನ ಹೊತ್ತಿ ಉರಿದ ಘಟನೆ ಹಿಂದೆ ಉಗ್ರರ ಕೈವಾಡವಿರುವುದು ಸ್ಪಷ್ಟವಾಗಿದೆ. ಜಮ್ಮ ಮತ್ತುಕಾಶ್ಮೀರದ ಪೂಂಚ್ ಬಳಿ ಭಾರತೀಯ ಸೇನಾ ವಾಹನ ಹೊತ್ತಿ ಉರಿದಿತ್ತು. ಆರಂಭದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಅನ್ನೋ ಮಾಹತಿ ಹೊರಬಿದ್ದಿತ್ತು. ಆದರೆ ಇದು ಉಗ್ರರು ನಡೆಸಿದ ಗ್ರೆನೇಡ್ ದಾಳಿ ಅನ್ನೋದು ಬಹಿರಂಗವಾಗಿದೆ. ಯೋಧರು ಸಾಗುತ್ತಿದ್ದ ಸೇನಾ ವಾಹನದ ಮೇಲೆ ಗ್ರೆನೇಡ್ ದಾಳಿ ಮಾಡಿದ್ದಾರೆ. ಇದರಿಂದ ಸೇನಾ ವಾಹನ ಸ್ಫೋಟಗೊಂಡು ಹೊತ್ತಿ ಉರಿದಿದೆ. ಈ ಘಟನೆಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ.

ಬಿಜೆ ಸೆಕ್ಟರ್ ಬಳಿಯ ಭಟ್ಟಾ ದುರೈ ಕಾಡಿನ ಬಳಿ ಸೇನಾ ವಾಹನದ ಮೇಲೆ ಅಡಗಿ ಕುಳಿತ ಉಗ್ರರು ಗ್ರೆನೇಡ್ ದಾಳಿ ಮಾಡಿದ್ದಾರೆ. ತೀವ್ರ ಮಳೆಯಾಗುತ್ತಿರುವ ಕಾರಣ ಸೇನಾ ವಾಹನ ನಿಧಾನವಾಗಿ ಸಾಗುತ್ತಿತ್ತು. ಇಷ್ಟೇ ಅಲ್ಲ, ಮಳೆಯಿಂದಾಗಿ ದಾರಿ ಕೂಡ ಅಸ್ಪಷ್ಟವಾಗಿತ್ತು. ಇದೆ ಸಂದರ್ಭ ಬಳಿಸಿಕೊಂಡ ಉಗ್ರರು, ವಾಹನದ ಮೇಲೆ ಗ್ರೆನೇಡ್ ದಾಳಿ ಮಾಡಿದ್ದಾರೆ. ಉಗ್ರ ವಿರೋಧ ದಳದ ಐವರು ಯೋಧರು ಹುತಾತ್ಮರಾಗಿರುವುದಾಗಿ ಭಾರತೀಯ ಸೇನೆ ಖಚಿತಪಡಿಸಿದೆ.

ಜಮ್ಮುವಿನಲ್ಲಿ 2 ಕಡೆ ಬಾಂಬ್‌ ಸ್ಫೋಟ: ಕನಿಷ್ಠ 6 ಜನರಿಗೆ ಗಾಯ

ಸ್ಥಳಕ್ಕೆ ಧಾವಿಸಿರುವ ಸೇನಾಧಿಕಾರಿಗಳು ಘಟನೆ ಕುರಿತು ತನಿಖೆ ನಡೆಸುತ್ತಿದ್ದಾರೆ. ಇತ್ತ ಭಾರತೀಯ ಸೇನೆ ಸಂಪೂರ್ಣ ಪ್ರದೇಶ ಸುತ್ತುವರಿದೆ ಕಾರ್ಯಾಚರಣೆ ಆರಂಭಿಸಿದೆ. ತೀವ್ರ ಮಳೆಯಾಗುತ್ತಿರುವ ಕಾರಣ ಕಾರ್ಯಾಚರಣೆಗೂ ಅಡ್ಡಿಯಾಗಿದೆ. ಕಾರ್ಯಾಚರಣೆಗೆ ಡ್ರೋನ್ ಬಳಸಿಕೊಳ್ಳಲಾಗಿದೆ. ಸುತ್ತಲೂ ಕಾಡಿನ ಪ್ರದೇಶವಾಗಿರುವ ಕಾರಣ ಉಗ್ರರು ಸುಲಭವಾಗಿ ಸೇನಾ ವಾಹನ ಟಾರ್ಗೆಟ್ ಮಾಡಿದ್ದಾರೆ. ಬಳಿಕ ಅಷ್ಟೇ ಸುಲಭವಾಗಿ ಪರಾರಿಯಾಗಿರುವ ಸಾಧ್ಯತೆ ಇದೆ.

 ಈ ಘಟನೆ ಕುರಿತು ಆರ್ಮಿ ಸ್ಟಾಫ್ ಜನರಲ್ ಮನೋಜ್ ಪಾಂಡೆ, ಕೇಂದ್ರ ರಕ್ಷಣಾ ಸಚಿವ ಮನೋಜ್ ಪಾಂಡೆಗೆ ಮಾಹಿತಿ ನೀಡಿದ್ದಾರೆ.ಘಟನೆಗೆ ಜಮ್ಮ ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಕೆ ಸಿನ್ಹ ಆಘಾತ ವ್ಯಕ್ತಪಡಿಸಿದ್ದಾರೆ. ದೇಶಕ್ಕಾಗಿ ಹುತಾತ್ಮರಾಗಿರುವ ಯೋಧರು ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ದೇಶ ನಿಮ್ಮ ಸೇವೆಯನ್ನು ಸದಾ ಸ್ಮರಿಸಲಿದೆ ಎಂದಿದ್ದಾರೆ.

 

ಕೆಣಕಿದರೆ ಪಾಕ್‌ ಮೇಲೆ ಭಾರತದ ಮಿಲಿಟರಿ ದಾಳಿ ಸಂಭವ: ಅಮೆರಿಕ

ಇತ್ತೀಚೆಗೆ 25ರಿಂದ 30 ಮಂದಿ ಉಗ್ರರು ಭಾರತದ ಗಡಿಯೊಳಗೆ ನುಸುಳಲು ಪಾಕಿಸ್ತಾನ ಗಡಿ ಪ್ರದೇಶದಲ್ಲಿರುವ ಲಾಂಚ್‌ಪ್ಯಾಡ್‌ಗಳಲ್ಲಿ ಕಾಯುತ್ತಿದ್ದಾರೆ ಎಂದು ಗುಪ್ತಚರ ವರದಿಯೊಂದು ಎಚ್ಚರಿಕೆ ನೀಡಿತ್ತು. ಇದರ ಬೆನ್ನಲ್ಲೇ ಭೀಕರ ದಾಳಿ ನಡೆದಿದೆ. ಜೈಷ್‌ ಎ ಮೊಹಮ್ಮದ್‌ ಅಥವಾ ಲಷ್ಕರ್‌-ಎ-ತೊಯ್ಬಾ ಸಂಘಟನೆಗೆ ಸೇರಿದ ಉಗ್ರರು ಭಾರತಕ್ಕೆ ನುಗ್ಗಲು ಲಾಂಚ್‌ಪ್ಯಾಡ್‌ಗಳಲ್ಲಿ ರಜೌರಿ ವಲಯದ ಬಳಿ ಕಾಯುತ್ತಿದ್ದಾರೆ. ಅಲ್ಲದೇ ಇವರು ಕಾಶ್ಮೀರದಲ್ಲಿ ಅಶಾಂತಿ ವಾತಾವರಣ ಸೃಷ್ಟಿಸುವ ಸಲುವಾಗಿ ನಾಗರಿಕರ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ವರದಿ ಹೇಳಿದೆ. ಇದಕ್ಕೂ ಮೊದಲು ಕಾಶ್ಮೀರದ ರಜೌರಿ ವಲಯದಲ್ಲಿ ಉಗ್ರರು ನಡೆಸಿದ ಗುಂಡು ಹಾಗೂ ಬಾಂಬ್‌ ದಾಳಿಯಲ್ಲಿ 6 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಯೋಧ್ಯೆಯ ರಾಮಲಲ್ಲಾ ಪ್ರತ್ಯಕ್ಷನಾಗಿ ಆಶೀರ್ವದಿಸಿದರೆ ಹೇಗಿರತ್ತೆ? ರೋಮಾಂಚಕಾರಿ ವಿಡಿಯೋ ವೈರಲ್​
ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana