ಫೇಸ್‌ಬುಕ್‌ ಸೇರಿದಂತೆ 89 ಆ್ಯಪ್‌ ಡಿಲೀಟ್‌ಗೆ ಸೇನಾ ಸಿಬ್ಬಂದಿಗೆ ಸೂಚನೆ

By Kannadaprabha News  |  First Published Jul 9, 2020, 10:09 AM IST

ಸೂಕ್ಷ್ಮ ಮಾಹಿತಿಗಳು ಸೋರಿಕೆ ಆಗುವುದನ್ನು ತಡೆಯುವ ಉದ್ದೇಶದಿಂದ ಭಾರತೀಯ ಸೇನೆಯಲ್ಲಿ ಕೆಲಸ ಮಾಡುತ್ತಿರುವ ಸೈನಿಕರಿಗೆ ಹಾಗೂ ಅಧಿಕಾರಿಗಳಿಗೆ ಫೇಸ್‌ಬುಕ್ ಸೇರಿದಂತೆ 89 ಆ್ಯಪ್‌ ಡಿಲೀಟ್ ಮಾಡಲು ಸೂಚಿಸಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.


ನವದೆಹಲಿ(ಜು.09): ಕೇಂದ್ರ ಸರ್ಕಾರ ಚೀನಾದ 59 ಆ್ಯಪ್‌ಗಳನ್ನು ನಿಷೇಧಿಸಿದ ಬೆನ್ನಲ್ಲೇ, ಸೇನೆಯ ಯೋಧರು ಮತ್ತು ಅಧಿಕಾರಿಗಳಿಗೆ ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌ ಸೇರಿದಂತೆ 89 ಮೊಬೈಲ್‌ ಆ್ಯಪ್‌ಗಳನ್ನು ಜು.15ರ ಒಳಗಾಗಿ ಡಿಲೀಟ್‌ ಮಾಡುವಂತೆ ಸೂಚನೆ ನೀಡಲಾಗಿದೆ. 

ಸೂಕ್ಷ್ಮ ಮಾಹಿತಿಗಳು ಸೋರಿಕೆ ಆಗುವುದನ್ನು ತಡೆಯುವ ಉದ್ದೇಶದಿಂದ ಈ ಕ್ರಮವನ್ನು ಜಾರಿಗೊಳಿಸಲಾಗಿದ್ದು, ಆದೇಶವನ್ನು ಪಾಲಿಸದಿದ್ದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪಾಕಿಸ್ತಾನ ಮತ್ತು ಚೀನಾ ಗುಪ್ತಚರ ಸಂಸ್ಥೆಗಳು ಆನ್‌ಲೈನ್‌ನಲ್ಲಿ ಸೇನಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಮಾಹಿತಿ ಕದಿಯಲು ಯತ್ನಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Latest Videos

undefined

ಫೇಸ್‌ಬುಕ್‌ನಲ್ಲಿ ಪೋರ್ನ್‌ ವಿಡಿಯೋ ಪೋಸ್ಟ್ ಮಾಡಿದ BJP ಮುಖಂಡ

ಗಲ್ವಾನ್ ಕಣಿವೆ ಘರ್ಷಣೆ ಬಳಿಕ ಚೀನಾಗೆ ಪಾಠ ಕಲಿಸಲು ಕೇಂದ್ರ ಸರ್ಕಾರ ಟಿಕ್‌ಟಾಕ್ ಸೇರಿದಂತೆ 59 ಆ್ಯಪ್‌ಗಳ ಮೇಲೆ ನಿಷೇಧ ಹೇರಲಾಗಿತ್ತು. ಆಂತರಿಗ ಭದ್ರತೆ ಹಾಗೂ ಸಾರ್ವಭೌಮತೆಯ ಕಾರಣ ನೀಡಿ ಚೀನಿ ಆ್ಯಪ್‌ಗಳನ್ನು ಬ್ಯಾನ್ ಮಾಡಲಾಗಿತ್ತು.

ಉಗ್ರರಿಂದ ಬಿಜೆಪಿ ನಾಯಕ, ತಂದೆ, ಸೋದರ ಹತ್ಯೆ

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ನಾಯಕ ಶೇಖ್‌ ವಾಸಿಂ, ಅವರ ತಂದೆ ಹಾಗೂ ಸೋದರನನ್ನು ಭಯೋತ್ಪಾದಕರು ಬುಧವಾರ ಹತ್ಯೆಗೈದಿದ್ದಾರೆ. ಬಿಜೆಪಿ ಬಂಡಿಪೋರಾ ಜಿಲ್ಲಾ ಘಟಕದ ಅಧ್ಯಕ್ಷರಾಗಿರುವ ವಾಸಿಂಗ್‌ ಅವರು ತಮ್ಮ ಅಂಗಡಿಯಲ್ಲಿ ಕುಳಿತಿದ್ದಾಗ ಉಗ್ರರು ದಾಳಿ ನಡೆಸಿ ಕೊಂದಿದ್ದಾರೆ. 

ವಾಸಿಂ ಅವರಿಗೆ ಪೊಲೀಸ್‌ ಭದ್ರತೆ ಒದಗಿಸಲಾಗಿತ್ತಾದರೂ, ಘಟನೆ ವೇಳೆ ಪೊಲೀಸರು ಸ್ಥಳದಲ್ಲಿರಲಿಲ್ಲ ಎಂದು ಹೇಳಲಾಗಿದೆ. ಬಂಡಿಪೋರಾ ಪೊಲೀಸ್‌ ಠಾಣೆ ಸಮೀಪವೇ ಬುಧವಾರ ರಾತ್ರಿ 9 ಗಂಟೆಗೆ ಈ ಘಟನೆ ನಡೆದಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮಮಾಧವ್‌ ಅವರು ಘಟನೆ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
 

click me!