
ನವದೆಹಲಿ(ಮೇ.01): ದೇಶದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ. ಕೊರೋನಾ ವಾರಿಯರ್ಸ್ ವಿರುದ್ಧ ಆಸ್ಪತ್ರೆ, ಪೊಲೀಸ್, ಸರ್ಕಾರ ಅವಿರತ ಹೋರಾಟ ಮಾಡುತ್ತಿದೆ. ಇದೀಗ ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಕೊರೋನಾ ವಾರಿಯರ್ಸ್ ಕೇಂದ್ರದ ಮೇಲೆ ಭಾರತೀಯ ಸೇನೆ ಹೆಲಿಕಾಪ್ಟರ್ ಮೂಲಕ ಹೂ ಮಳೆ ಸುರಿಸಿ ಗೌರವಿಸಲಲಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.
ಹೋಂ ಕ್ವಾರೆಂಟೈನ್ ಜವಾಬ್ದಾರಿ ತೆಗೆದುಕೊಳ್ಳಲಿದೆಯಾ ಸೇನೆ..? ..
ಆಯಾ ಸೇನಾ ನೆಲೆಗಳಲ್ಲಿರುವ ಹೆಲಿಕಾಪ್ಟರ್ ಮೂಲಕ ಪ್ರತಿ ಜಿಲ್ಲೆಗಳಲ್ಲಿನ ಕೊರೋನಾ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಗಳ ಮೇಲೆ ಹಾಗೂ ಚಿಕಿತ್ಸೆ ನೀಡುತ್ತಿರುವ ಸಿಬ್ಬಂದಿಗಳ ಮೇಲೆ ಭಾರತೀಯ ಸೇನೆ ಆಗಸದಿಂದ ಹೂಮಳೆ ಸುರಿಸಲಿದೆ. ಮೇ.03ರ ಭಾನುವಾರ ಸಂಪೂರ್ಣ ಭಾರತದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹೂಮಳೆ ಸುರಿಸಲಿದೆ ಎಂದು ಬಿಪಿನ್ ರಾವತ್ ಹೇಳಿದ್ದಾರೆ.
ಜಮ್ಮು-ಕಾಶ್ಮೀರಕ್ಕೇ ಪ್ರತ್ಯೇಕ ಸೇನಾ ಕಮಾಂಡ್!
ಮೇ 3ರಂದು ಪೊಲೀಸರಿಗೂ ಸೇನೆ ಗೌರವ ಸಲ್ಲಿಸಲಿದೆ ಎಂದು ಬಿಪಿನ್ ರಾವತ್ ಹೇಳಿದ್ದಾರೆ. ಭಾರತೀಯ ಸೇನೆಯಲ್ಲಿ 14 ಕೊರೋನಾ ಕೇಸ್ ಪತ್ತೆಯಾಗಿತ್ತು. ಇದರಲ್ಲಿ 5 ಮಂದಿ ಸಂಪೂರ್ಣ ಗುಣಮುಖರಾಗಿ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಭಾರತೀಯ ಸೇನೆ ಹಲವು ಮುಂಜಾಗ್ರತ ಕ್ರಮ ಕೈಗೊಂಡಿದೆ. ಇಷ್ಟೇ ಅಲ್ಲ ಕೊರೋನಾ ವೈರಸ್ ಎದುರಿಸಲು ಸಿದ್ದವಾಗಿದೆ ಎಂದು ಆರ್ಮಿ ಜನರಲ್ ಚೀಫ್ ಮನೋಜ್ ಎಂ ನರವಾನೆ ಹೇಳಿದ್ದಾರೆ.
ಭಾರತದಲ್ಲಿ ಒಟ್ಟು 35365 ಕೊರೋನಾ ಕೇಸ್ ಪತ್ತೆಯಾಗಿದೆ. ಇದರಲ್ಲಿ 9064 ಮಂದಿ ಗುಣಮುಖರಾಗಿದ್ದಾರೆ. ಆದರೆ 1152 ಮಂದಿ ಕೊರೋನಾ ವೈರಸ್‌ಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1755 ಹೊಸ ಕೊರೋನಾ ಕೇಸ್ ಪತ್ತೆಯಾಗಿದೆ. ಅಲ್ಲದೆ 77 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ