Bengaluru ರಸ್ತೆಗೆ ಕ್ರಿಕೆಟಿಗ ವಿರಾಟ್‌ ಕೊಹ್ಲಿ ಹೆಸರು ನಾಮಕರಣ: ಎಲ್ಲಿದೆ ಗೊತ್ತಾ ಈ ರಸ್ತೆ?

By Sathish Kumar KH  |  First Published Nov 11, 2023, 4:34 PM IST

ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ವಿಲ್ಸನ್‌ ಗಾರ್ಡನ್‌ನ ಒಂದು ರಸ್ತೆಗೆ ಭಾರತೀಯ ಕ್ರಿಕೆಟಿಗ ಮತ್ತು ಆರ್‌ಸಿಬಿ ಪ್ಲೇಯರ್‌ ವಿರಾಟ್‌ ಕೊಹ್ಲಿ ಹೆಸರನ್ನು ನಾಮಕರಣ ಮಾಡುವಂತೆ ಸಿದ್ಧತೆ ಮಾಡಲಾಗುತ್ತಿದೆ.


ಬೆಂಗಳೂರು (ನ.11): ಅಂತಾರಾಷ್ಟ್ರೀಯ ಕ್ರಿಕೆಟಿಗ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡದ ಆಟಗಾರ ವಿರಾಟ್‌ ಕೊಹ್ಲಿ ಅವರ ಹೆಸರನ್ನು ಬೆಂಗಳೂರಿನ ಒಂದು ರಸ್ತೆಗೆ ನಾಮಕರಣ ಮಾಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಪತ್ರ ಬರೆಯಲಾಗಿತ್ತು. ಆದರೆ, ಈ ಬಗ್ಗೆ ಬಿಬಿಎಂಪಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ   ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀಮತಿ ಭಾಗ್ಯವತಿ ಅಮರೇಶ್ ದೂರು ನೀಡಿದ್ದಾರೆ.

ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಮತ್ತು ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ರಸ್ತೆ ನಾಮಕರಣಕ್ಕೆ ಕ್ರಮ ಕೈಗೊಳ್ಳದ ಬಿಬಿಎಂಪಿ ನಡೆ ವಿರುದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ದೂರು ನೀಡಿದ್ದಾರೆ. ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ರಸ್ತೆ ನಾಮಕರಣ ಹಾಗೂ ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ರಸ್ತೆ ನಾಮಕರಣ ಮಾಡಲು ಬಿಬಿಎಂಪಿ ಅಧಿಕಾರಿಗಳು ವಿನಾಕಾರಣ ಮೀನ ಮೇಷ ಏಣಿಸುತ್ತಿದೆ. ಅಧಿಕಾರಿಗಳಿಗೆ ಚಾಟಿ ಬೀಸುವಂತೆ ಆಗ್ರಹಿಸಿದ್ದಾರೆ. 

Latest Videos

undefined

ಈ ವರ್ಷದಲ್ಲಿಯೇ ಬೆಂಗಳೂರಿನಲ್ಲಿ ಬಾಡಿಗೆ ದರ ಶೇ. 30ರಷ್ಟು ಹೆಚ್ಚಳ, ವೈಟ್‌ಫೀಲ್ಡ್‌ ನಂ.1

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಭಾಗ್ಯವತಿ ಅಮರೇಶ್ ಅವರು, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಹೊಂಬೇಗೌಡ ನಗರ ವಾರ್ಡ್-145ರಲ್ಲಿ ಬಿಟಿಎಸ್ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ರಸ್ತೆ ನಾಮಕರಣ ಮಾಡಬೇಕು. ಜೊತೆಗೆ, ಇದೇ ವಾರ್ಡ್‌ನ 8ನೇ ಮುಖ್ಯರಸ್ತೆಗೆ  ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಹೆಸರು ನಾಮಕರಣ ಮಾಡಬೇಕು. ಈ ಬಗ್ಗೆ ನಿರ್ಣಯ ಕೈಗೊಂಡು ಅನುಮತಿ ನೀಡುವಂತೆ ಬಿಬಿಎಂಪಿ ಆಡಳಿತಾಧಿಕಾರಿಗೆ 2022ರ ಅ.22ರಂದು ಮನವಿ ಸಲ್ಲಿಸಲಾಗಿತ್ತು. ಈವರೆಗೆ ಒಂದು ವರ್ಷ ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ರಸ್ತೆಗೆ ನಾವು ನಮ್ಮ ಕುಟುಂಬದ ಅಥವಾ ಪ್ರಸಿದ್ಧಿಯಲ್ಲದ ವ್ಯಕ್ತಿಗಳ ಹೆಸರನ್ನು ನಾಮಕರಣ ಮಾಡಬೇಕು ಎಂದು ಮನವಿ ಸಲ್ಲಿಸಿಲ್ಲ. ದೇಶದ ಇಬ್ಬರು ಮಹಾನ್ ಚೇತನರ ಹೆಸರನ್ನು ಅಜರಾಮರವಾಗಿಸುವ ನಿಟ್ಟಿನಲ್ಲಿ ಈ ಮನವಿಯನ್ನು ಪಾಲಿಕೆಗೆ ಸಲ್ಲಿಕೆ ಮಾಡಲಾಗಿದೆ. ಮುಖ್ಯವಾಗಿ ಡಾ. ಪುನೀತ್ ರಾಜ್‌ಕುಮಾರ್ ಅವರು ರಾಷ್ಟ್ರ ಕಂಡ ಅತ್ತುತ್ಯಮ ನಟರಾಗಿದ್ದಾರೆ. ಜೊತೆಗೆ ವಿರಾಟ್ ಕೊಹ್ಲಿ ಅವರು ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದೇಶ ಗೌರವವನ್ನು ಎತ್ತಿ ಹಿಡಿದ ಉತ್ತಮ ಕ್ರೀಡಾಪಟು ಆಗಿದ್ದಾರೆ. ಜೊತೆಗೆ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದಲ್ಲಿ ಹಲವು ವರ್ಷಗಳಿಂದ ಐಪಿಎಲ್‌ನಲ್ಲಿ ಆಟವಾಡುತ್ತಿದ್ದಾರೆ. ಈ ಮೂಲಕ ಬೆಂಗಳೂರಿಗೆ ಕ್ರಿಕೆಟಿಗ ವಿರಾಟ್‌ ಕೊಹ್ಲಿ ಅವರ ಕೊಡುಗೆಯೂ ಇದೆ. 

ದೀಪಾವಳಿಗೆ 24x7 ಕಣ್ಣಿನ ಚಿಕಿತ್ಸೆ, ಸಹಾಯವಾಣಿ ಆರಂಭಿಸಿದ ಮಿಂಟೋ ಆಸ್ಪತ್ರೆ: ಈಗ್ಲೇ ನೋಟ್‌ ಮಾಡ್ಕೊಳಿ!

ಇನ್ನು ಈ ಇಬ್ಬರು ಸಾಧಕರ ಹೆಸರುಗಳನ್ನು ರಸ್ತೆಗೆ ನಾಮಕರಣ ಮಾಡುವುದರಿಂದ ಅವರ ಸಾಧನೆ ಹಾಘೂ ಆದರ್ಶಗಳು ಇಂದಿನ ಯುವ ಸಮೂಹಕ್ಕೆ ಮಾದರಿಯಾಗಲಿದೆ. ಜೊತೆಗೆ, ಅವರ ಸಾಧನೆಗಳು ಚಿರಸ್ಥಾಯಿ ಉಳಿಯಲಿ ಎಂಬುದು ನಮ್ಮ ಉದ್ದೇಶವೂ ಆಗಿದೆ. ಕಳೆದ 1 ವರ್ಷದಿಂದ ನಾವು ಕೊಟ್ಟ ಮನವಿಯನ್ನು ಪಾಲಿಕೆಯಲ್ಲಿ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಶೋಚನೀಯ ಸಂಗತಿಯಾಗಿದೆ. ಅದ್ದರಿಂದ ಉಪಮುಖ್ಯಮಂತ್ರಿಗಳು ಡಿ.ಕೆ.ಶಿವಕುಮಾರ್ ಈ ಬಗ್ಗೆ ಕ್ರಮವಹಿಸುವಂತೆ  ಮನವಿ ಮಾಡಲಾಗಿದೆ ಎಂದು ಹೇಳಿದರು.

click me!