ಭಾರತದ ಕಾನೂನಿಗೆ ಬದ್ಧವಾಗಿರಿ: ಬಿಬಿಸಿ ವಿಷಯ ಪ್ರಸ್ತಾಪಿಸಿದ ಬ್ರಿಟನ್‌ ಸಚಿವಗೆ ಜೈಶಂಕರ್‌ ನೀತಿ ಪಾಠ

Published : Mar 02, 2023, 08:36 AM ISTUpdated : Mar 02, 2023, 10:04 AM IST
ಭಾರತದ ಕಾನೂನಿಗೆ ಬದ್ಧವಾಗಿರಿ: ಬಿಬಿಸಿ ವಿಷಯ ಪ್ರಸ್ತಾಪಿಸಿದ ಬ್ರಿಟನ್‌ ಸಚಿವಗೆ  ಜೈಶಂಕರ್‌ ನೀತಿ ಪಾಠ

ಸಾರಾಂಶ

ತೆರಿಗೆ ನಿಯಮ ಉಲ್ಲಂಘಿಸಿದ ಕಾರಣಕ್ಕಾಗಿ ಇತ್ತೀಚೆಗೆ ದೆಹಲಿ ಮತ್ತು ಮುಂಬೈನ ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ ದಾಳಿಯನ್ನು ಪ್ರಸ್ತಾಪಿಸಿದ ಬ್ರಿಟನ್‌ನ ವಿದೇಶಾಂಗ ಸಚಿವ ಜೇಮ್ಸ್‌ ಕ್ಲೆವರ್ಲಿಗೆ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅತ್ಯಂತ ನಯವಾದ ಮಾತುಗಳಲ್ಲೇ ತಿರುಗೇಟು ನೀಡಿದ ಪ್ರಸಂಗ ನಡೆದಿದೆ.

ನವದೆಹಲಿ: ತೆರಿಗೆ ನಿಯಮ ಉಲ್ಲಂಘಿಸಿದ ಕಾರಣಕ್ಕಾಗಿ ಇತ್ತೀಚೆಗೆ ದೆಹಲಿ ಮತ್ತು ಮುಂಬೈನ ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ ದಾಳಿಯನ್ನು ಪ್ರಸ್ತಾಪಿಸಿದ ಬ್ರಿಟನ್‌ನ ವಿದೇಶಾಂಗ ಸಚಿವ ಜೇಮ್ಸ್‌ ಕ್ಲೆವರ್ಲಿಗೆ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅತ್ಯಂತ ನಯವಾದ ಮಾತುಗಳಲ್ಲೇ ತಿರುಗೇಟು ನೀಡಿದ ಪ್ರಸಂಗ ನಡೆದಿದೆ.

ದಿಲ್ಲಿಯಲ್ಲಿ ಜಿ-20 ವಿದೇಶಾಂಗ ಸಚಿವರ (Foreign Ministers) ಶೃಂಗ ಆರಂಭವಾಗಿದ್ದು, ಇದಕ್ಕಾಗಿ ಕ್ಲೆವರ್ಲಿ (James Cleverly) ದಿಲ್ಲಿಗೆ ಬಂದಿದ್ದಾರೆ. ಈ ವೇಳೆ ಜೈಶಂಕರ್‌ (Indian Foreign Minister) ಜೊತೆಗಿನ ತಮ್ಮ ಭೇಟಿಯ ವೇಳೆ ಬಿಬಿಸಿ ಮೇಲಿನ ದಾಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು ಎನ್ನಲಾಗಿದೆ. ಆದರೆ ಇದಕ್ಕೆ ಅತ್ಯಂತ ಸ್ಪಷ್ಟನುಡಿಗಳಲ್ಲಿ ಪ್ರತಿಕ್ರಿಯಿಸಿದ ಜೈಶಂಕರ್‌ (S.Jaishankar), ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಂಸ್ಥೆಗಳು ಇಲ್ಲಿನ ನೆಲದ ನಿಯಮ ಪಾಲನೆ ಮಾಡುವುದು ಕಡ್ಡಾಯ ಎಂದು ತಿಳಿಸಿದರು ಎನ್ನಲಾಗಿದೆ.

'1984ರಲ್ಲೂ ಗಲಭೆಯಾಗಿತ್ತು ಈ ಬಗ್ಗೆ ಬಿಬಿಸಿ ಸಾಕ್ಷ್ಯಚಿತ್ರ ಯಾಕೆ ಬಂದಿಲ್ಲ..?' ಜೈಶಂಕರ್‌ ಪ್ರಶ್ನೆ

2002ರ ಗುಜರಾತ್‌ ಗಲಭೆ ವೇಳೆ ಅಂದಿನ ಗುಜರಾತ್‌ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಪಾತ್ರದ ಕುರಿತು ಬೆಳಕು ಚೆಲ್ಲುವ ಎರಡು ಸಾಕ್ಷ್ಯಚಿತ್ರಗಳನ್ನು ಬಿಬಿಸಿ (BBC) ಪ್ರಸಾರ ಮಾಡಿತ್ತು. ಇದರ ಬೆನ್ನಲ್ಲೇ ಐಟಿ ದಾಳಿ ನಡೆದ ಕಾರಣ, ಇದು ಸೇಡಿನ ಕೆಲಸ ಎಂದು ವಿಪಕ್ಷಗಳು ಕಿಡಿಕಾರಿದ್ದವು.

ಬಿಬಿಸಿ ತೆರಿಗೆ ವಂಚನೆ ಪತ್ತೆ; ಲೆಕ್ಕಪತ್ರಗಳಲ್ಲಿ ಭಾರಿ ಲೋಪದೋಷ : ಐಟಿ ಇಲಾಖೆ

ತಿಂಗಳ ಹಿಂದೆ ಬಿಬಿಸಿ ಎರಡು ಸಂಚಿಕೆಯ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಿತ್ತು. ಆ ಗಲಭೆಗೆ ಹೇಗೆ ಸರ್ಕಾರ ಪ್ರಚೋದನೆ ನೀಡಿತ್ತು ಎಂದು ಸಾಕ್ಷ್ಯಚಿತ್ರದಲ್ಲಿತ್ತು.  ಈ ಸಾಕ್ಷ್ಯಚಿತ್ರಕ್ಕೆ ಸರ್ಕಾರ ನಿಷೇಧ ಹೇರಿತ್ತು. ಆದರೂ ವಿಪಕ್ಷಗಳು ಶಾಲಾ ಕಾಲೇಜುಗಳಲ್ಲಿ ಈ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದ್ದವು. ಇದಾದ ಬಳಿಕ ಬಿಬಿಸಿಯ ಕಚೇರಿ ಮೇಲೆ ಐಟಿ ಇಲಾಖೆ ದಾಳಿ ನಡೆಸಿತು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂದು ರಾತ್ರಿ 8ರ ಒಳಗೆ ಟಿಕೆಟ್ ಮೊತ್ತ ಮರುಪಾವತಿಸಿ : ಇಂಡಿಗೋಗೆ ಕೇಂದ್ರ ಗಡುವು
India Latest News Live: ಆಯೋಧ್ಯೆಯ ಬಾಬ್ರಿ ಮಸೀದಿಯನ್ನೇ ಹೋಲುವಂತಹ ಮಸೀದಿಗೆ ಶಂಕು ಸ್ಥಾಪನೆ