ಕಳೆದ ಜುಲೈ- ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತ ಆರ್ಥಿಕ ಪ್ರಗತಿ ದರ ಶೇ.7.6ರಷ್ಟು ದಾಖಲಾಗಿದೆ. ಈ ಮೂಲಕ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳವಣಿಗೆ ಕಾಣುತ್ತಿರುವ ಆರ್ಥಿಕತೆ ಎಂಬ ಹಿರಿಮೆಯನ್ನು ತನ್ನಲ್ಲೇ ಉಳಿಸಿಕೊಂಡಿದೆ.
ನವದೆಹಲಿ: ಕಳೆದ ಜುಲೈ- ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತ ಆರ್ಥಿಕ ಪ್ರಗತಿ ದರ ಶೇ.7.6ರಷ್ಟು ದಾಖಲಾಗಿದೆ. ಈ ಮೂಲಕ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳವಣಿಗೆ ಕಾಣುತ್ತಿರುವ ಆರ್ಥಿಕತೆ ಎಂಬ ಹಿರಿಮೆಯನ್ನು ತನ್ನಲ್ಲೇ ಉಳಿಸಿಕೊಂಡಿದೆ.
ರಾಷ್ಟ್ರೀಯ ಸಾಂಖಿಕ ಇಲಾಖೆ ಗುರುವಾರ ಬಿಡುಗಡೆ ಮಾಡಿರುವ ವರದಿ ಅನ್ವಯ, ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಪ್ರಗತಿ ದರ ಶೇ.7.6ರಷ್ಟು ದಾಖಲಾಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಆರ್ಥಿಕ ಪ್ರಗತಿ ದರ ಶೇ.6.2ರಷ್ಟು ದಾಖಲಾಗಿತ್ತು. ಇನ್ನು ಏಪ್ರಿಲ್- ಸೆಪ್ಟೆಂಬರ್ ಅವಧಿಯ ಜಿಡಿಪಿ ಪ್ರಗತಿ ದರ ಶೇ.7.7ರಷ್ಟು ದಾಖಲಾಗಿದೆ. ಕಳೆದ ವರ್ಷದ ಮೊದಲ 9 ತಿಂಗಳ ಅವಧಿಯಲ್ಲಿ ಈ ಪ್ರಮಾಣ ಶೇ.9.5ರಷ್ಟು ದಾಖಲಾಗಿತ್ತು.
ಮೊದಲ ಬಾರಿಗೆ $4 ಟ್ರಿಲಿಯನ್ ಗಡಿ ದಾಟಿದ ಭಾರತದ ಆರ್ಥಿಕತೆ!
ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಶೇ.7.8ರ ದರದಲ್ಲಿ ಪ್ರಗತಿ ಕಂಡಿತ್ತು. ಆದರೆ ಈ ತ್ರೈಮಾಸಿಕದಲ್ಲಿ ಕೃಷಿ ವಲಯ ಶೇ.1.2, ಉತ್ಪಾದಕ ವಲಯ ಶೇ.13.9ರಷ್ಟು ಪ್ರಗತಿ ಕಂಡಿದೆ. ಇದು ಕಳೆದ ತ್ರೈಮಾಸಿಕಕ್ಕೆ ಕಡಿಮೆಯಾಗಿದೆ. ಹೀಗಾಗಿ ಕಳೆದ ತ್ರೈಮಾಸಿಕಕ್ಕಿಂತ ಕಮ್ಮಿ ದರದಲ್ಲಿ ಈ ಸಲ ಪ್ರಗತಿ ದಾಖಲಾಗಿದೆ.
ಈ ವರ್ಷ ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಚೀನಾದ ಜಿಡಿಪಿ ಬೆಳವಣಿಗೆಯು ಶೇಕಡಾ 4.9 ರಷ್ಟಿತ್ತು. ಹೀಗಾಗಿ ಭಾರತ ಚೀನಾವನ್ನೂ ಹಿಂದಿಕ್ಕಿದಂತಾಗಿದೆ.
ಮೋದಿ ಗ್ಯಾರೆಂಟಿ ನಿಜವಾಗೋಕೆ ಇನ್ನೆಷ್ಟು ದಿನ ಬಾಕಿ..? ಭಾರತದ ಈ ಮಹಾಸಾಧನೆ ಹಿಂದಿರೋ ಅಸಲಿ ಕಥೆ ಏನು?