ದೇಶದ ನಿರುದ್ಯೋಗ ಪ್ರಮಾಣ 6 ವರ್ಷಗಳ ಕನಿಷ್ಠಕ್ಕೆ: ಸಮೀಕ್ಷೆ

Published : Oct 10, 2023, 11:17 AM IST
ದೇಶದ ನಿರುದ್ಯೋಗ ಪ್ರಮಾಣ 6 ವರ್ಷಗಳ ಕನಿಷ್ಠಕ್ಕೆ: ಸಮೀಕ್ಷೆ

ಸಾರಾಂಶ

2022ರ ಜುಲೈನಿಂದ 2023ರ ಜೂನ್‌ವರೆಗಿನ ಅವಧಿಯಲ್ಲಿ ಭಾರತದಲ್ಲಿನ ನಿರುದ್ಯೋಗ ಪ್ರಮಾಣ 6 ವರ್ಷಗಳ ಕನಿಷ್ಠಕ್ಕೆ ಇಳಿಕೆಯಾಗಿದೆ ಎಂದು ರಾಷ್ಟ್ರೀಯ ಮಾದರಿ ಸಮೀಕ್ಷೆಯ ಸಂಸ್ಥೆಯ ವರದಿಯಿಂದ ತಿಳಿದು ಬಂದಿದೆ.

ನವದೆಹಲಿ: 2022ರ ಜುಲೈನಿಂದ 2023ರ ಜೂನ್‌ವರೆಗಿನ ಅವಧಿಯಲ್ಲಿ ಭಾರತದಲ್ಲಿನ ನಿರುದ್ಯೋಗ ಪ್ರಮಾಣ 6 ವರ್ಷಗಳ ಕನಿಷ್ಠಕ್ಕೆ ಇಳಿಕೆಯಾಗಿದೆ ಎಂದು ರಾಷ್ಟ್ರೀಯ ಮಾದರಿ ಸಮೀಕ್ಷೆಯ ಸಂಸ್ಥೆಯ ವರದಿಯಿಂದ ತಿಳಿದು ಬಂದಿದೆ.

ಸೋಮವಾರ ಬಿಡುಗಡೆಯಾಗಿರುವ ‘ಪೀರಿಯಾಡಿಕ್‌ ಲೇಬರ್‌ ಫೋರ್ಸ್‌ ಸಮೀಕ್ಷೆಯ ವಾರ್ಷಿಕ ವರದಿ 2022-23’(Periodic Labor Force Survey Annual Report 2022-23') ಯ ಪ್ರಕಾರ, ಭಾರತದಲ್ಲಿ 15 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿನ ಸಾಮಾನ್ಯ ಸ್ಥಿತಿಯ ನಿರುದ್ಯೋಗದ ಪ್ರಮಾಣ 2022-23ರಲ್ಲಿ ಶೇ.4.1ರಿಂದ ಶೇ.3.2ಕ್ಕೆ ಇಳಿಕೆಯಾಗಿದೆ. ಈ ನಿರುದ್ಯೋಗ ಪ್ರಮಾಣವು (unemployment rate) 2020-21ರಲ್ಲಿ ಶೇ.4.2, 2019-20ರಲ್ಲಿ ಶೇ.4.8, 2018-19ರಲ್ಲಿ ಶೇ.5.8ರಷ್ಟಿತ್ತು ಎಂದು ವರದಿ ತಿಳಿಸಿದೆ.

ನಾಯಿಗೆ ಗುಂಡಿಕ್ಕಿ ಮನೆಗೆ ಬೆಂಕಿ ಹಚ್ಚಿ ಕ್ರೌರ್ಯ ತೋರಿದ ಹಮಾಸ್ ಉಗ್ರರು: ವೀಡಿಯೋ

2017-18ರಲ್ಲಿ ಗ್ರಾಮೀಣ ಪ್ರದೇಶದಲ್ಲಿ ಶೇ.5.3ರಷ್ಟಿದ್ದ ಸಾಮಾನ್ಯ ಸ್ಥಿತಿಯ ನಿರುದ್ಯೋಗವು (unemployment rate in rural areas) 200-23ರಲ್ಲಿ ಶೇ.2.4ಕ್ಕೆ ಇಳಿಕೆಯಾಗಿದೆ. ನಗರ ಪ್ರದೇಶದಲ್ಲಿನ ನಿರುದ್ಯೋಗವು ಸಹ ಶೇ.7.7ರಿಂದ ಶೇ.5.4ಕ್ಕೆ ಇಳಿಕೆಯಾಗಿದೆ. ಪುರುಷರಲ್ಲಿನ ಈ ನಿರುದ್ಯೋಗ ಪ್ರಮಾಣ ಶೇ.6.1ರಿಂದ ಶೇ.3.3ಕ್ಕೆ ಹಾಗೂ ಮಹಿಳೆಯರಲ್ಲಿನ ನಿರುದ್ಯೋಗ ಪ್ರಮಾಣ ಶೇ.5.6ರಿಂದ ಶೇ.2.9ಕ್ಕೆ ಇಳಿಕೆಯಾಗಿದೆ ಎಂದು ಸಮೀಕ್ಷಾ ವರದಿ ತಿಳಿಸಿದೆ.

ಈ ಯುದ್ಧವನ್ನು ನಾವು ಆರಂಭಿಸಿಲ್ಲ, ಆದರೆ ಮುಗಿಸುವುದು ಮಾತ್ರ ನಾವೇ: ಇಸ್ರೇಲ್ ಅಧ್ಯಕ್ಷ ಬೆಂಜಮಿನ್‌

ಸಮೀಕ್ಷೆ ನಡೆಸುವ ಮುಂಚಿನ 365 ದಿನಗಳ ಕಾಲದಲ್ಲಿ ವ್ಯಕ್ತಿಯೊಬ್ಬರು ಹೊಂದಿರುವ ನಿರುದ್ಯೋಗದ ದಿನಗಳನ್ನು ಆಧರಿಸಿ ಈ ಸಮೀಕ್ಷೆಯನ್ನು ನಡೆಸಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ
ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು