
ದೆಹಲಿ: ಇಂಡಿಗೋ ವಿಮಾನವೊಂದು ಎಂಜಿನ್ ದೋಷದಿಂದಾಗಿ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಶಾಖಪಟ್ಟಣದಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ.
ಇಂದು ಬೆಳಗ್ಗೆ 10:39ಕ್ಕೆ ಪೈಲಟ್, ವಿಮಾನವನ್ನು ದೆಹಲಿಯ ಐಜಿಐ ಏರ್‌ಪೋರ್ಟ್‌ನ ರನ್‌ವೇ 28ರಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದಾರೆ. ವಿಮಾನದಲ್ಲಿ ಒಟ್ಟು 161 ಪ್ರಯಾಣಿಕರಿದ್ದರು. ಲ್ಯಾಂಡಿಂಗ್‌ಗೆ ಕೆಲವೇ ಕ್ಷಣಗಳ ಮೊದಲು ವಿಮಾನದಲ್ಲಿ ತಾಂತ್ರಿಕ ದೋಷ ಇರುವುದು ಪತ್ತೆಯಾಗಿದೆ.
ಇಂಡಿಗೋ 6E579 ವಿಮಾನದಲ್ಲಿ ಈ ಸಮಸ್ಯೆ ಕಾಣಿಸಿಕೊಂಡಿದೆ. ತಾಂತ್ರಿಕ ದೋಷ ಪತ್ತೆಯಾದ ತಕ್ಷಣ, ಪೈಲಟ್ ಲ್ಯಾಂಡಿಂಗ್‌ಗೆ ಮೊದಲ ಆದ್ಯತೆ ನೀಡಿ, ಅಪಾಯವನ್ನು ತಪ್ಪಿಸಿದ್ದಾರೆ. ಇದು ಬೋಯಿಂಗ್ 737 ಮಾದರಿಯ ವಿಮಾನವಾಗಿದ್ದು, ಕಳೆದ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದೆ. ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ