ಇಡೀ ಊರಿನ ಮುಂದೆಯೇ ಗಂಡ-ಹೆಂಡತಿ ಬಟ್ಟೆ ಬಿಚ್ಚಿ, ಗ್ರಾಮಸ್ಥರಿಂದ ನೀಚ ಕೆಲಸ; ಇವರಿಗೆ ಇದೇ ಶಿಕ್ಷೆ ಅಂದ್ರು!

Published : Sep 06, 2024, 04:45 PM IST
ಇಡೀ ಊರಿನ ಮುಂದೆಯೇ ಗಂಡ-ಹೆಂಡತಿ ಬಟ್ಟೆ ಬಿಚ್ಚಿ, ಗ್ರಾಮಸ್ಥರಿಂದ ನೀಚ ಕೆಲಸ; ಇವರಿಗೆ ಇದೇ ಶಿಕ್ಷೆ ಅಂದ್ರು!

ಸಾರಾಂಶ

ಬಿಹಾರದಲ್ಲಿ ಗ್ರಾಮಸ್ಥರು ದಂಪತಿಗೆ ಅಮಾನುಷ ಶಿಕ್ಷೆ ನೀಡಿದ್ದಾರೆ. ಮಹಿಳೆಯನ್ನು ಅರೆನಗ್ನಗೊಳಿಸಿ ಮೆರವಣಿಗೆ ಮಾಡಿದ ಘಟನೆ ವರದಿಯಾಗಿದೆ.

ಪಾಟನಾ: ಬಿಹಾರದ ಜುಮೈನಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಇಡೀ ಊರಿನ ಮುಂದೆಯೇ ಗಂಡ-ಹೆಂಡತಿಯ ಬಟ್ಟೆ ಬಿಚ್ಚಲಾಗಿದೆ. ದಂಪತಿಯನ್ನು ಅರೆನಗ್ನಗೊಳಿಸಿ ಇಡೀ ಗ್ರಾಮದ ತುಂಬೆಲ್ಲಾ ಮೆರವಣಿಗೆ ಮಾಡಿದ್ದಾರೆ. ದಂಪತಿಯ ಮುಖಕ್ಕೆ ಕಪ್ಪು ಮಸಿ ಬಳೆದು ಕೊರಳಿಗೆ ಬೂಟು-ಚಪ್ಪಲಿ ಹಾರ ಹಾಕಿ ಮತ್ತು ಕೂದಲನ್ನು ಸಹ ಕತ್ತರಿಸಲಾಗಿತ್ತು. ಇಂತಹವರಿಂದ ಸಮಾಜ ಹಾಳಾಗುತ್ತಿದ್ದು, ಇವರಿಗೆ ಇದೇ ಸರಿಯಾದ ಶಿಕ್ಷೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು 12 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಈ ಘಟನೆ ಝಾಝಾ ಕ್ಷೇತ್ರದ ತಾರಾಕುರಾ ಎಂಬ ಗ್ರಾಮದಲ್ಲಿ ನಡೆದಿದೆ. ವಿವಾಹಿತ ಮಹಿಳೆ ಅದೇ ಗ್ರಾಮದ ಯುವಕನನ್ನು ಪ್ರೀತಿಸಿ ಮೂರು ಮಕ್ಕಳನ್ನು ಬಿಟ್ಟು ಆತನ ಜೊತೆ  ಐದು ದಿನಗಳ ಹಿಂದೆ ಓಡಿ ಹೋಗಿದ್ದಳು. ಐದು ದಿನದ ನಂತರ ಮಹಿಳೆ ಹಿಂದಿರುಗಿ ಬಂದಾಗ ಗ್ರಾಮದಲ್ಲಿ ಪಂಚಾಯ್ತಿ ನಡೆಸಿ ಈ ಶಿಕ್ಷೆ ನೀಡಲಾಗಿದೆ.  ಮೊದಲು ಗ್ರಾಮಸ್ಥರು ಮನೆಯಲ್ಲಿದ್ದ ಗಂಡ-ಹೆಂಡತಿಯನ್ನು ಹೊರಗೆ ಎಳೆದುಕೊಂಡು ಬಂದು ಕೂದಲು ಕತ್ತರಿಸಿದ್ದಾರೆ. ನಂತರ ಇಬ್ಬರನ್ನು ಅರೆನಗ್ನಗೊಳಿಸಲಾಗಿದೆ. ಆ ಬಳಿಕ ಮುಖಕ್ಕೆ ಕಪ್ಪು ಮಸಿ ಬಳೆದು, ಬೂಟು-ಚಪ್ಪಲಿ ಹಾರ ಕೊರಳಿಗೆ ಹಾಕಿ ಊರು ತುಂಬೆಲ್ಲಾ ಮೆರವಣಿಗೆ ಮಾಡಿದ್ದಾರೆ. ಗ್ರಾಮದ ಕೆಲ ಯುವಕರು ಈ ಎಲ್ಲಾ ಘಟನೆಯನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದೀಗ ಈ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. 

ಪೊಲೀಸರು 12 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಘಟನೆ ಬಳಿಕ ಆರೋಪಿಗಳು ಗ್ರಾಮದಿಂದ ಪರಾರಿಯಾಗಿದ್ದು, ಅಕ್ಕಪಕ್ಕದ ಜಿಲ್ಲೆಯಲ್ಲಿ ಆಶ್ರಯಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿಗಳ ಬಂಧನಕ್ಕೆ ತಂಡವನ್ನು ರಚಿಸಲಾಗಿದ್ದು, ಶೀಘ್ರದಲ್ಲಿಯೇ ಎಲ್ಲರನ್ನೂ ಅರೆಸ್ಟ್ ಮಾಡಲಾಗುವುದು ಎಂದು ಪೊಲೀಸ್ ಹಿರಿಯ ಅಧಿಕಾರಿ ಸಂಜಯ್ ಸಿಂಗ್ ಮಾಹಿತಿ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್