
ಪುಣೆ: ಹಿಂದೂ ದೇವರುಗಳನ್ನು ಅವಹೇಳನ ಮಾಡಿದ ಕಾರಣಕ್ಕೆ ಪುಣೆಯ ಸಿಂಬಿಯಾಸಿಸ್ ಕಾಲೇಜು ಶಿಕ್ಷಕರೊಬ್ಬರನ್ನು ಗುರುವಾರ ಬಂಧಿಸಲಾಗಿದೆ ಹಾಗೂ ಅಮಾನತು ಮಾಡಲಾಗಿದೆ. ಅಶೋಕ್ ದೋಲೆ ಎಂಬ ಶಿಕ್ಷಕ ಪಾಠ ಮಾಡುವ ಸಮಯದಲ್ಲಿ, ಹಿಂದೂಗಳಲ್ಲಿ ಹೆಚ್ಚು ದೇವರು ಇರುವುದರಿಂದಲೇ ರಕ್ಷಣೆಗೆ ಯಾರನ್ನು ಕರೆಯಬೇಕೆಂದು ಗೊತ್ತಾಗದೇ ಸಾವಿಗೀಡಾಗುತ್ತಿದ್ದಾರೆ ಎಂದು ಹೇಳಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ಕಾಲೇಜಿನ ಎದುರು ಪ್ರತಿಭಟನೆಯನ್ನೂ ನಡೆಸಿತ್ತು. ಕಾಲೇಜು ಆಡಳಿತ ಮಂಡಳಿ ಅಶೋಕ್ ಅವರನ್ನು ಅಮಾನತು ಮಾಡಿದೆ. ಪೊಲೀಸರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಅಡಿ ಪ್ರಕರಣ ದಾಖಲಿಸಿದ್ದಾರೆ.
ಮುಂಬೈನಲ್ಲೂ ಉಡುಪಿ ರೀತಿ ಹಿಜಾಬ್ ವಿವಾದ, ಕಾಲೇಜಲ್ಲಿ ಬುರ್ಖಾಗೆ ಬ್ರೇಕ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ