ಶಿವಾಜಿ ಅವಹೇಳನ: ಮಹಾ ರಾಜ್ಯಪಾಲರ ವಜಾಗೆ ಸಿಎಂ ಶಿಂಧೆ ಬಣ ಆಗ್ರಹ

Published : Nov 22, 2022, 10:04 AM ISTUpdated : Nov 22, 2022, 10:05 AM IST
ಶಿವಾಜಿ ಅವಹೇಳನ: ಮಹಾ ರಾಜ್ಯಪಾಲರ ವಜಾಗೆ ಸಿಎಂ ಶಿಂಧೆ ಬಣ ಆಗ್ರಹ

ಸಾರಾಂಶ

ಛತ್ರಪತಿ ಶಿವಾಜಿ ಅವರ ಕುರಿತಾಗಿ ಮಹಾರಾಷ್ಟ್ರ ರಾಜ್ಯಪಾಲರಾದ ಭಗತ್‌ ಸಿಂಗ್‌ ಕೋಶ್ಯಾರಿ ಇತ್ತೀಚಿಗೆ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಅವರನ್ನು ವಜಾ ಮಾಡಬೇಕು ಎಂದು ಮುಖ್ಯಮಂತ್ರಿ ಏಕನಾಥ ಶಿಂಧೆ ಬಣದ ಶಾಸಕ ಸಂಜಯ್‌ ಗಾಯಕ್ವಾಡ್‌ ಆಗ್ರಹಿಸಿದ್ದಾರೆ.

ಮುಂಬೈ: ಛತ್ರಪತಿ ಶಿವಾಜಿ ಅವರ ಕುರಿತಾಗಿ ಮಹಾರಾಷ್ಟ್ರ ರಾಜ್ಯಪಾಲರಾದ ಭಗತ್‌ ಸಿಂಗ್‌ ಕೋಶ್ಯಾರಿ ಇತ್ತೀಚಿಗೆ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಅವರನ್ನು ವಜಾ ಮಾಡಬೇಕು ಎಂದು ಮುಖ್ಯಮಂತ್ರಿ ಏಕನಾಥ ಶಿಂಧೆ ಬಣದ ಶಾಸಕ ಸಂಜಯ್‌ ಗಾಯಕ್ವಾಡ್‌ ಆಗ್ರಹಿಸಿದ್ದಾರೆ.

ಬುಲ್ದಾನ ವಿಧಾನಸಭಾ ಕ್ಷೇತ್ರದ (Buldana Assembly Constituency) ಶಾಸಕರಾಗಿರುವ ಸಂಜಯ್‌, ‘ಛತ್ರಪತಿ ಶಿವಾಜಿ (Chhatrapati Shivaji) ಎಂದಿಗೂ ಹಳತಾಗುವುದಿಲ್ಲ ಮತ್ತು ಅವರನ್ನು ಇತರರೊಂದಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ ಎಂಬುದನ್ನು ರಾಜ್ಯಪಾಲ ಕೋಶ್ಯಾರಿ ಅವರು ಅರ್ಥ ಮಾಡಿಕೊಳ್ಳಬೇಕು. ರಾಜ್ಯದ ಪ್ರಮುಖ ವ್ಯಕ್ತಿಗಳ ಇತಿಹಾಸ ಗೊತ್ತಿಲ್ಲದ ಈ ವ್ಯಕ್ತಿಯನ್ನು ರಾಜ್ಯದಿಂದ ಹೊರದೂಡಬೇಕು ಎಂದು ಕೇಂದ್ರದಲ್ಲಿರುವ ಬಿಜೆಪಿ ನಾಯಕರಿಗೆ ಮನವಿ ಮಾಡುತ್ತೇನೆ’ ಎಂದು ಹೇಳಿದ್ದಾರೆ.

‘ಛತ್ರಪತಿ ಶಿವಾಜಿ ಅವರನ್ನು ಐಕಾನ್‌ ಎಂದು ಮಹಾರಾಷ್ಟ್ರದ (Maharashtra) ಜನರು ಹೇಳುವುದನ್ನು ಇನ್ನಾದರೂ ಬಿಡಬೇಕು. ಅವರು ಹಳಬರಾಗಿದ್ದಾರೆ. ಶಿವಾಜಿ ಬದಲು ಅಂಬೇಡ್ಕರ್‌ ಅಥವಾ ನಿತಿನ್‌ ಗಡ್ಕರಿ (Nitin Gadkari) ಅವರ ಹೆಸರನ್ನು ಐಕಾನ್‌ ಹೇಳಬಹುದು’ ಎಂದು ಕೋಶ್ಯಾರಿ ಶನಿವಾರ ಹೇಳಿದ್ದರು.

ಛತ್ರಪತಿ ಶಿವಾಜಿ ಹಳೆಯ ಕಾಲದ ಐಕಾನ್‌: ಮಹಾ ರಾಜ್ಯಪಾಲ ಕೋಶ್ಯಾರಿ

ಮಹಾರಾಷ್ಟ್ರ ಗಡಿ ವಿವಾದದ ಕುರಿತು ರಾಜ್ಯದಲ್ಲೂ ತುರ್ತು ಸಭೆ
ಗಡಿ ವಿವಾದಕ್ಕೆ ಮತ್ತೆ ಮಹಾರಾಷ್ಟ್ರದ ಕಿಚ್ಚು: ನಿಗಾಕ್ಕೆ ಇಬ್ಬರು ಸಚಿವರ ನೇಮಕ!

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ