
ನವದೆಹಲಿ(ಏ.04): ರಾಮ ನವಮಿ ಆಚರಣೆ ವೇಳೆ ಪಶ್ಚಿಮ ಬಂಗಾಳ, ಬಿಹಾರದ ಹಲವೆಡೆ ರಾಮ ನವಮಿ ಆಚರಣೆ ವೇಳೆ ಹಿಂಸಾಚರ ನಡೆದಿದೆ. ಮುಸ್ಲಿಂ ಏರಿಯಾಗಳಲ್ಲಿ ಶೋಭಯಾತ್ರೆ ತೆರಳುವ ವೇಳೆ ಶೋಭಯಾತ್ರೆ ಮೇಲೆ ಕಲ್ಲು ತೂರಾಟ ನಡೆದಿದೆ. ಇಟ್ಟಿಗೆಗಳನ್ನು ಎಸೆದಿದ್ದಾರೆ. ಇದರ ಪರಿಣಾಮ ಗಲಭೆ ಎದ್ದಿದೆ. ಈ ಕುರಿತು ಕೇಂದ್ರ ಸರ್ಕಾರ ಆಯಾ ರಾಜ್ಯಗಳಿಂದ ವರದಿ ಕೇಳಿದೆ. ಈ ಕುರಿತು ತನಿಖೆ ನಡೆಯುತ್ತಿದೆ. ಇದರ ನಡುವೆ ಅಂತಾರಾಷ್ಟ್ರೀಯ ಇಸ್ಲಾಮಿಕ್ ದೇಶಗಳ ಒಕ್ಕೂಟ ಸಂಘಟನೆಯಾಗಿರುವ ಇಸ್ಲಾಮಿಕ್ ಸಹಕಾರ ಸಂಘಟನೆ ಇದೀಗ ಭಾರತದ ಆಂತರಿಕ ವಿಚಾರದಲ್ಲಿ ಮೂಗು ತೂರಿಸಿದೆ. ಭಾರತದಲ್ಲಿ ಹಿಂದೂಗಳು ಮುಸ್ಲಿಮರ ವಿರುದ್ದ ದೌರ್ಜನ್ಯ ನಡೆಸುುತ್ತಿದ್ದಾರೆ. ರಾಮ ನವಮಿ ಹೆಸರಿನಲ್ಲಿ ಮುಸ್ಲಿಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಭಾರತಕ್ಕೆ ನೋಟಿಸ್ ನೀಡಿದೆ. ಈ ನೋಟಿಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ರಾಮ ನವಮಿ ಆಚರಣೆ, ಮೆರವಣಿಗೆ ವೇಳೆ ಮುಸ್ಲಿಮರ ಮೇಲೆ ಹಲ್ಲೆ ನಡೆಸಲಾಗಿದೆ. ಮಸೀದಿಗಳ ಮೇಲೆ ದಾಳಿ ನಡೆಸಲಾಗಿದೆ. ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ. ಹಲವು ರಾಜ್ಯಗಳಲ್ಲಿ ರಾಮ ನವಮಿ ಮೆರವಣಿಗೆ ಮೇಲೆ ಹಿಂಸಾಚರ ನಡೆದಿದೆ. ಮುಸ್ಲಿಮರನ್ನು ಟಾರ್ಗೆಟ್ ಮಾಡಲಾಗಿದೆ. ಇದರ ಪರಿಣಾಮ ಭಾರತದಲ್ಲಿ ಪದೇ ಪದೇ ಈ ರೀತಿಯ ಘಟನೆಗಳು ಮರುಕಳಿಸುತ್ತಿದೆ ಎಂದು ಅಂತಾರಾಷ್ಟ್ರೀಯ ಇಸ್ಲಾಮಿಕ್ ಸಹಕಾರ ಸಂಘಟನೆ ನೋಟಿಸ್ ನೀಡಿದೆ.
ಪಶ್ಚಿಮ ಬಂಗಾಳದಲ್ಲಿ ಮತ್ತೆ ಹಿಂಸಾಚಾರ, ಬಿಜೆಪಿ ಶೋಭ ಯಾತ್ರೆ ಮೇಲೆ ಕಲ್ಲು ತೂರಾಟ!
ಮುಸ್ಲಿಮರು ಭಯದಲ್ಲಿ ದಿನದೂಡುವ ವಾತಾವರಣ ನಿರ್ಮಾಣ ಮಾಡಲಾಗಿದೆ. ಮುಸ್ಲಿಮರ ಮೇಲೆ ದಾಳಿ ನಡೆಸಿರುವ ಹಿಂದೂಗಳ ವಿರುದ್ಧ ಭಾರತ ಕಠಿಣ ಕ್ರಮ ಕೈಗೊಳ್ಳಬೇಕು. ಈ ಮೂಲಕ ಭಾರತದಲ್ಲಿರುವ ಎಲ್ಲಾ ಮುಸ್ಲಿಮರಿಗೆ ಸುರಕ್ಷತೆ ಒದಗಿಸಬೇಕು. ಇದು ಭಾರತದ ಸರ್ಕಾರದ ಜವಾಬ್ದಾರಿಯಾಗಿದೆ ಎಂದಿದೆ. ಭಾರತದ ಆಂತರಿಕ ವಿಚಾರದಲ್ಲಿ ಮೂಗು ತೂರಿಸಿರು ಇಸ್ಲಾಮಿಕ್ ಸಹಕಾರ ಸಂಘಟನೆ ವಿರುದ್ಧ ಆಕ್ರೋಶಗಳು ಕೇಳಿಬರುತ್ತಿದೆ.
ರಾಮ ನವಮಿ ಆಚರಣೆಯಿಂದ ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಭಾರಿ ಹಿಂಸಾಚರ ಭುಗಿಲೆದ್ದಿತ್ತು. 2 ರಾಜ್ಯಗಳಲ್ಲೂ ದುಷ್ಕರ್ಮಿಗಳು ರಾಮನವಮಿ ಮೆರವಣಿಗೆ ಮೇಲೆ ಕಲ್ಲುತೂರಾಟ ನಡೆಸಿರುವ ಘಟನೆಗಳು ವರದಿಯಾಗಿವೆ. ಬಂಗಾಳದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ರಾಮನವಮಿ ಮೆರವಣಿಗೆ ಮೇಲೆ ಉದ್ರಿಕ್ತರು ಕಲ್ಲು ತೂರಿದ್ದಾರೆ. ಬಿಹಾರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದ್ದು, ಹಿಂಸಾಚಾರದಲ್ಲಿ ಓರ್ವ ಸಾವಿಗೀಡಾಗಿದ್ದಾನೆ.
ಬಂಗಾಳದಲ್ಲಿ ಭಾನುವಾರ ಬಿಜೆಪಿ ಹಮ್ಮಿಕೊಂಡಿದ್ದ ರಾಮನವಮಿ ಮೆರವಣಿಗೆ ಸಮಯದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಈ ಮೆರವಣಿಗೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಸಹ ಭಾಗಿಯಾಗಿದ್ದರು. ಮೆರವಣಿಗೆ ಹೂಗ್ಲಿ ರಿಶ್ರಾ ಪ್ರದೇಶದಲ್ಲಿ ಸಾಗುತ್ತಿದ್ದ ಸಮಯದಲ್ಲಿ ಉದ್ರಿಕ್ತರ ಗುಂಪು ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದೆ. ಇದರಿಂದ ತಪ್ಪಿಸಿಕೊಳ್ಳಲು ಜನ ದಿಕ್ಕಾಪಾಲಾಗಿ ಓಡಿದ್ದಾರೆ. ಈ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ಶಾಸಕ ಬಿಮನ್ ಘೋಷ್ ಕಲ್ಲೇಟಿನಿಂದ ಗಾಯಗೊಂಡಿದ್ದರು.
ಬಂಗಾಳದಲ್ಲಿ ಮತ್ತೆ ಹಿಂಸಾಚಾರ: 45 ಮಂದಿ ಬಂಧನ, ನಿಷೇಧಾಜ್ಞೆ ಜಾರಿ; ಘಟನೆಗೆ ಬಿಜೆಪಿ ಕಾರಣ ಎಂದ ದೀದಿ
ಈ ನಡುವೆ ಬಿಹಾರದಲ್ಲೂ ಹಿಂಸಾಚಾರ ಮುಂದುವರೆದಿದ್ದು, ಅಂಗಡಿ, ಮಾರುಕಟ್ಟೆಗಳನ್ನು ಭಾನುವಾರವೂ ಮುಚ್ಚಲಾಗಿತ್ತು. ಬಿಹಾರದ ಘಟನೆಗೆ ಕೋಮು ಸಂಘರ್ಷ ಕಾರಣ ಎಂದು ಹೇಳಲಾಗುತ್ತಿದ್ದು, ಈವರೆಗೆ ಸುಮಾರು 112 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಸಾರಾಂನಲ್ಲಿ ಉದ್ರಿಕ್ತರು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಈ ದುರ್ಘಟನೆಯಲ್ಲಿ 6ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ