‘ದೇಶದ ನ್ಯಾಯಾಂಗ ಅಪಾಯದಲ್ಲಿದೆ. ವಿಶೇಷವಾಗಿ ರಾಜಕಾರಣಿಗಳ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸ್ಥಾಪಿತ ಹಿತಾಸಕ್ತಿಗಳು ಕೋರ್ಟ್‌ಗಳಿಗೆ ಮಸಿ ಬಳಿಯಲು ಯತ್ನಿಸುತ್ತಿವೆ’ ಎಂದು ದೇಶದ ಖ್ಯಾತ 600 ವಕೀಲರು ಒಂದಾಗಿ ಭಾರತದ ಮುಖ್ಯ ನ್ಯಾಯಾಧೀಶರಿಗೆ ಬರೆದ ಪತ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ.
ನವದೆಹಲಿ (ಮಾ.29): ‘ದೇಶದ ನ್ಯಾಯಾಂಗ ಅಪಾಯದಲ್ಲಿದೆ. ವಿಶೇಷವಾಗಿ ರಾಜಕಾರಣಿಗಳ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸ್ಥಾಪಿತ ಹಿತಾಸಕ್ತಿಗಳು ಕೋರ್ಟ್‌ಗಳಿಗೆ ಮಸಿ ಬಳಿಯಲು ಯತ್ನಿಸುತ್ತಿವೆ’ ಎಂದು ದೇಶದ ಖ್ಯಾತ 600 ವಕೀಲರು ಒಂದಾಗಿ ಭಾರತದ ಮುಖ್ಯ ನ್ಯಾಯಾಧೀಶರಿಗೆ ಬರೆದ ಪತ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ. ‘ಇತರರ ಬಗ್ಗೆ ಬೊಬ್ಬೆ ಹೊಡೆಯುವುದು ಮತ್ತು ಬೆದರಿಸುವುದೇ ಹಳೆಯ ಕಾಂಗ್ರೆಸ್ ಸಂಸ್ಕೃತಿ, ಇಂಥವರನ್ನು 140 ಕೋಟಿ ಭಾರತೀಯರು ತಿರಸ್ಕರಿಸುವುದು ನಿಸ್ಸಂಶಯ’ ಎಂದು ಅವರು ಕಿಡಿಕಾರಿದ್ದಾರೆ.
ಈ ಮೂಲಕ ನ್ಯಾಯಾಂಗದ ಮೇಲೆ ವಿಪಕ್ಷಗಳು ಒತ್ತಡ ಹೇರಲು ಯತ್ನಿಸುತ್ತಿವೆ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಗುರುವಾರ ಸಂಜೆ ಟ್ವೀಟ್ ಮಾಡಿರುವ ಮೋದಿ, ‘ಇತರರ ಬಗ್ಗೆ ಬೊಬ್ಬೆ ಹೊಡೆಯುವುದು ಮತ್ತು ಬೆದರಿಸುವುದೇ ಹಳೆಯ ಕಾಂಗ್ರೆಸ್ ಸಂಸ್ಕೃತಿ, 5 ದಶಕಗಳ ಹಿಂದೆಯೇ ಅವರು ‘ಬದ್ಧ ನ್ಯಾಯಾಂಗ’ ಕ್ಕಾಗಿ ಕರೆ ನೀಡಿದ್ದರು. ಅರ್ಥಾತ್ ಅವರು (ಕಾಂಗ್ರೆಸ್) ನಾಚಿಕೆ ಬಿಟ್ಟು ತಮ್ಮ ಸ್ವಾರ್ಥಕ್ಕಾಗಿ ಇತರರಿಂದ ವಿಧೇಯತೆ ಬಯಸುತ್ತಾರೆ. ಆದರೆ ರಾಷ್ಟ್ರಹಿತಕ್ಕೆ ಮಾತ್ರ ಬದ್ಧರಾಗಿರುವುದಿಲ್ಲ. 140 ಕೋಟಿ ಭಾರತೀಯರು ಅವರನ್ನು ತಿರಸ್ಕರಿಸುವುದರಲ್ಲಿ ಆಶ್ಚರ್ಯವಿಲ್ಲ’ ಎಂದಿದ್ದಾರೆ.
ಸಂತ್ರಸ್ತೆ ರೂಪಾ ಶಕ್ತಿ ಸ್ವರೂಪಿ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಟಿಎಂಸಿ ಗೂಂಡಾಗಳಿಂದ ಲೈಂಗಿಕ ಕಿರುಕುಳಕ್ಕೆ ತುತ್ತಾಗಿದ್ದ ರೂಪಾ ಪತ್ರಾಗೆ ಬಿಜೆಪಿ ಬಾಸಿರ್‌ಹಾತ್ ಲೋಕಸಭೆ ಕ್ಷೇತ್ರದ ಚುನಾವಣಾ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರೂಪಾ ಜತೆ ಮಂಗಳವಾರ ದೂರವಾಣಿ ಕರೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ರೂಪಾ ಅವರನ್ನು ಶಕ್ತಿ ಸ್ವರೂಪಿಣಿ ಎಂದು ಬಣ್ಣಿಸಿದ್ದಾರೆ. ಟಿಎಂಸಿ ನಾಯಕ ಶಜಹಾನ್ ಮತ್ತು ಆತನ ಬೆಂಬಲಿಗರ ಭೂಕಬಳಿಕೆ ಮತ್ತು ಲೈಂಗಿಕ ಕಿರುಕುಳ ಕುರಿತು ಸಿಡಿದೆದ್ದಿದ್ದ ರೂಪಾ ಪತ್ರಾ, ಸಂದೇಶ್‌ಖಾಲಿಯಲ್ಲಿ ದೊಡ್ಡ ಆಂದೋಲನ ರೂಪಿಸಿದ್ದರು. ಈ ಹೋರಾಟ ತೀವ್ರ ಸ್ವರೂಪ ಪಡೆದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು.
ಮತ್ತೊಮ್ಮೆ ಮೋದಿ ಸರ್ಕಾರ: ರಾಮಮಂದಿರ, ಸಿಎಎಯಿಂದ ಬಿಜೆಪಿಗೆ ಲಾಭ: ಸಮೀಕ್ಷೆ!
ಜೊತೆಗೆ ಶಜಹಾನ್ ಬಂಧನಕ್ಕೆ ಕಾರಣವಾಗಿತ್ತು. ಅದರ ಬೆನ್ನಲ್ಲೇ ಸಂದೇಶ್‌ಖಾಲಿ ಒಳಗೊಂಡ ಬಸಿರ್‌ಹಾತ್ ಪ್ರದೇಶದ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ಬಿಜೆಪಿ ಇತ್ತೀಚೆಗೆ ರೂಪಾಗೆ ನೀಡಿ ಅಚ್ಚರಿ ಮೂಡಿಸಿತ್ತು. ಅದರ ನಡುವೆಯೇ ಮಂಗಳವಾರ ರೂಪಾಗೆ ಕರೆ ಮಾಡಿದ್ದ ಪ್ರಧಾನಿ ಮೋದಿ, ಕ್ಷೇತ್ರದಲ್ಲಿ ಚುನಾವಣೆಯ ಸಿದ್ಧತೆ ಮತ್ತು ಜನರ ಮೂಡ್ ಕುರಿತು ರೂಪಾರನ್ನು ಪ್ರಶ್ನಿಸಿದರು. ಅಲ್ಲದೆ, ‘ನೀವು ಸಂದೇಶ್‌ಖಾಲಿಯಲ್ಲಿ ಯದ್ಧವನ್ನೇ ಮಾಡಿದ್ದೀರಿ, ನೀವು ಶಕ್ತಿ ಸ್ವರೂಪಿಣಿ’ ಎಂದು ಬಣ್ಣಿಸಿದರು. ‘ತೃಣಮೂಲ ಕಾಂಗ್ರೆಸ್ ಸರ್ಕಾರ ಏನು ಅನ್ಯಾಯಗಳನ್ನು ಮಾಡಿದೆ ಜನರಿಗೆ ತಿಳಿಸಿ’ ಎಂದೂ ರೂಪಾಗೆ ಸೂಚಿಸಿದರು.