ಅಯೋಧ್ಯೆಯಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆಗೆ ಮೋದಿಗೆ ಆಹ್ವಾನ

Published : Jun 03, 2023, 06:23 AM IST
ಅಯೋಧ್ಯೆಯಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆಗೆ ಮೋದಿಗೆ ಆಹ್ವಾನ

ಸಾರಾಂಶ

ಮುಂದಿನ ವರ್ಷದ ಜನವರಿಯಲ್ಲಿ ಉದ್ಘಾಟನೆ ಆಗಲಿರುವ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮನ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡುವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಲಾಗುವುದು ಎಂದು ರಾಮ ಮಂದಿರ ಟ್ರಸ್ಟ್‌ ತಿಳಿಸಿದೆ.

ಅಯೋಧ್ಯೆ: ಮುಂದಿನ ವರ್ಷದ ಜನವರಿಯಲ್ಲಿ ಉದ್ಘಾಟನೆ ಆಗಲಿರುವ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮನ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡುವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಲಾಗುವುದು ಎಂದು ರಾಮ ಮಂದಿರ ಟ್ರಸ್ಟ್‌ ತಿಳಿಸಿದೆ. ಆದರೆ, ಮಂದಿರದಲ್ಲಿ ರಾಮನ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡುವ ಕಾರ್ಯಕ್ರಮದ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಡಿಸೆಂಬರ್‌ನಿಂದ ಜನವರಿ 26ರ ನಡುವಿನ ಅವಧಿಯಲ್ಲಿ ಪ್ರತಿಷ್ಠಾಪನೆ ಮಾಡಲು ಉದ್ದೇಶಿಸಲಾಗಿದ್ದು, ಮೋದಿ ಅವರಿಂದ ಅನುಕೂಲಕರ ದಿನಾಂಕ ಬಯಸಲಾಗಿದೆ.

ಈ ಬಗ್ಗೆ ಮಾತನಾಡಿದ ರಾಮ ಮಂದಿರ ಟ್ರಸ್ಟ್‌ (Ram Mandir Trust) ಕಾರ್ಯದರ್ಶಿ ಚಂಪತ್‌ ರಾಯ್‌ (Champat Roy), ಇತ್ತೀಚೆಗೆ ನಡೆದ ಸಮಿತಿ ಸದಸ್ಯರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಕ್ಟೋಬರ್‌ ವೇಳೆಗೆ ಮಂದಿರದ ನೆಲಮಹಡಿ ಸಂಪೂರ್ಣವಾಗಿ ಸಿದ್ಧವಾಗಲಿದೆ. ಡಿಸೆಂಬರ್‌ ವೇಳೆಗೆ ಭಕ್ತಾದಿಗಳಿಗೆ ಇಲ್ಲಿ ಪ್ರವೇಶಾವಕಾಶ ನೀಡಲಾಗುವುದು. ಇದೇ ಡಿಸೆಂಬರ್‌ನಿಂದ ಜ.26 2024ರ ಒಳಗೆ ಮೂರ್ತಿ ಪ್ರತಿಷ್ಠಾಪನೆಗೆ (Instalation) ಯಾವುದೇ ದಿನಾಂಕ ತಿಳಿಸುವಂತೆ ಪ್ರಧಾನಿಗೆ ಪತ್ರ ರವಾನಿಸಲಾಗುವುದು ಎಂದಿದ್ದಾರೆ. ರಾಮಮಂದಿರ ನಿರ್ಮಾಣ ಕಾಮಗಾರಿ ಭರದಿಂದ ಸಾಗಿದ್ದು, ಹಲವಾರು ಭಾಗಗಳ ನಿರ್ಮಾಣ ಪೂರ್ಣಗೊಂಡಿದೆ. 2020ರ ಆಗಸ್ಟ್‌ನಲ್ಲಿ ಮೋದಿ ಅವರು ಇದರ ಶಂಕುಸ್ಥಾಪನೆ ನೆರವೇರಿಸಿದ್ದರು.

Ram Sita Statue: ಗಂಡಕಿ ನದಿಯಿಂದ ತೆಗೆದ 40 ಟನ್‌ ತೂಕದ ಸಾಲಿಗ್ರಾಮ ಶಿಲೆ, 30ಕ್ಕೆ ಭಾರತ ಪ್ರವೇಶ!

ಮುಂದಿನ ವರ್ಷ ಜನವರಿಯಲ್ಲಿ ಅಯೋಧ್ಯೆ ರಾಮಮಂದಿರ ಭಕ್ತರಿಗೆ ತೆರೆಯಲಿದ್ದು ಈ ಹಿನ್ನೆಲೆಯಲ್ಲಿ ಅಯೋಧ್ಯೆ ನಗರದಲ್ಲಿ ವಿಮಾನ ನಿಲ್ದಾಣ (Airport), ರೈಲು ನಿಲ್ದಾಣಗಳ ವಿಸ್ತರಣೆ ಸೇರಿದಂತೆ ಮೂಲ ಸೌಕರ್ಯಗಳನ್ನು ತ್ವರಿತಗತಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ.

ಸಹದತ್‌ಗಂಜ್‌ ನಿಂದ ನಯಾ ಘಾಟ್‌ ವರೆಗಿನ 13 ಕಿ.ಮೀ ರಸ್ತೆಯ ಕಾರಿಡಾರ್‌ ‘ರಾಮ ಪಥ’ ಕಾಮಗಾರಿಯೂ ಪ್ರಗತಿಯಲ್ಲಿದ್ದು ಉಳಿದಂತೆ ‘ಭಕ್ತಿ ಪಥ’ (ಹನುಮಾನ್‌ ಗರ್ಹಿ ದೇವಾಲಯಕ್ಕೆ 14 ಮೀ. ಹಾದಿ) ಮತ್ತು ‘ರಾಮಜಾನಕಿ ಪಥ’ (ಶ್ರೀರಾಮ ಜನ್ಮಭೂಮಿಗೆ 30 ಮೀ. ಮಾರ್ಗ) ಕಾರಿಡಾರ್‌ ರೂಪುರೇಷೆಯು ಸಿದ್ಧವಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಪಥಗಳು ಭಕ್ತಾದಿಗಳ ಸಂಚಾರಕ್ಕೆ ಅನುಕೂಲವಾಗಲಿವೆ. ರಾಮಮಂದಿರ ತೆರೆಯುವ ಸಮಾರಂಭಕ್ಕೆ ಆಗಮಿಸುವಂತೆ ಜನರಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆಹ್ವಾನಿಸಿದ್ದಾರೆ. ಅಲ್ಲದೇ ಪ್ರಗತಿ ಕೆಲಸಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಸರ್ಕಾರದ ಪ್ರಕಟಣೆ ಹೇಳಿದೆ.

ಅಯೋಧ್ಯೆಯಲ್ಲಿ 25000 ಭಕ್ತರ ವಸತಿ ಸಾಮರ್ಥ್ಯದ ಯಾತ್ರಿ ಭವನ ನಿರ್ಮಾಣ: ಪೇಜಾವರ ಶ್ರೀ

ಇಲ್ಲಿದೆ ನೋಡಿ ಫಸ್ಟ್ ಲುಕ್

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರೂಪುಗೊಳ್ಳುತ್ತಿರುವ ರಾಮಮಂದಿರದ ತಾಜಾ ಚಿತ್ರವನ್ನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಂಚಿಕೊಂಡಿದ್ದಾರೆ. ಅದರಂತೆ ಗರ್ಭಗೃಹದ ಕಾಮಗಾರಿಯ ಝಲಕ್ ಕಾಣಬಹುದಾಗಿದ್ದು, ಬಿಳಿಯ ಅಮೃತಶಿಲೆಯ ಗೋಡೆಗಳ ತುಂಬಾ ಮನ ಸೆಳೆವ ಕಲಾರಚನೆಗಳನ್ನು ಕಾಣಬಹುದಾಗಿದೆ. ದೇವಾಲಯ ಈಗ ಭವ್ಯ ರೂಪ ಪಡೆಯುತ್ತಿದೆ.

ದೇವಾಲಯದ ಟ್ರಸ್ಟ್ ಸದಸ್ಯ ಮಹಂತ್ ಕಮಲ್ ನಯನ್ ದಾಸ್ ಅವರು ಮುಂದಿನ ವರ್ಷ (2024) ಜನವರಿ 14 ಮತ್ತು 15 ರಂದು ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಭಕ್ತರಿಗಾಗಿ ದೇವಾಲಯದ ದ್ವಾರಗಳನ್ನು ತೆರೆಯಲಾಗುವುದು ಎಂದು ತಿಳಿಸಿದ್ದಾರೆ. ಈ ಮಧ್ಯೆ ಅಯೋಧ್ಯೆಗೆ ಆಧ್ಯಾತ್ಮಿಕ ನಗರ ಎಂಬ ಗುರುತನ್ನು ನೀಡಲು ಸರ್ಕಾರ ಮುಂದಾಗಿದೆ. ದೇವಾಲಯದ ಪಟ್ಟಣದ ಪ್ರಮುಖ ಬೀದಿಗಳಿಗೆ ವಿನ್ಯಾಸಗಳು, ಕಲಾಕೃತಿಗಳು ಮತ್ತು ಪರಿಕಲ್ಪನೆಗಳನ್ನು ಒದಗಿಸಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಮತ್ತು ಇತರ ವ್ಯಕ್ತಿಗಳಿಗೆ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ (ADA) ಸ್ಪರ್ಧೆಯನ್ನು ಏರ್ಪಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!