
ನವದೆಹಲಿ/ನ್ಯೂಯಾರ್ಕ್ (ಮಾ.13) ಇರಾಕ್‌ನ ಬಸ್ರಾ ಬಳಿಯ ಸಮುದ್ರದಲ್ಲಿ ಅಮೆರಿಕ ಸ್ವಾಮ್ಯದ ‘ಸೇಫ್‌ಸೀ ವಿಷ್ಣು’ ಹೆಸರಿನ ತೈಲ ಟ್ಯಾಂಕರ್ ಮೇಲೆ ದಾಳಿ ನಡೆದಿದ್ದು, ಹಡಗಿನ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದು ‘ಆತ್ಮಾಹುತಿ ಬೋಟ್’ ದಾಳಿಯಾಗಿದೆ ಎಂದು ಅಮೆರಿಕ ಅಧಿಕಾರಿಗಳು ಹೇಳಿದ್ದಾರೆ.
ಇದೇ ವೇಳೆ, ಇರಾಕ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸಾವನ್ನು ದೃಢಪಡಿಸಿದ್ದು, ಹಡಗಿನಲ್ಲಿರುವ ಇತರ 15 ಭಾರತೀಯ ಸಿಬ್ಬಂದಿಯನ್ನು ಪರೀಕ್ಷಿಸಲಾಗಿದೆ ಎಂದು ತಿಳಿಸಿದೆ.
‘ಮಾರ್ಚ್ 11ರಂದು ಮಾರ್ಷಲ್ ದ್ವೀಪಗಳ ಧ್ವಜದ ಅಡಿ ಪ್ರಯಾಣಿಸುತ್ತಿದ್ದ ಅಮೆರಿಕ ಒಡೆತನದ ಕಚ್ಚಾ ತೈಲ ಟ್ಯಾಂಕರ್, ‘ಸೇಫ್‌ಸೀ ವಿಷ್ಣು’ ಮೇಲೆ ಇರಾಕ್‌ನ ಬಸ್ರಾ ಬಳಿ ದಾಳಿ ನಡೆಸಲಾಯಿತು. ಇದರಲ್ಲಿ ಒಬ್ಬ ಭಾರತೀಯ ಸಿಬ್ಬಂದಿ ಪ್ರಾಣ ಕಳೆದುಕೊಂಡರು. ಉಳಿದ 15 ಭಾರತೀಯ ಸಿಬ್ಬಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ’ ಎಂದು ಇರಾಕ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದೆ.
ಕಳೆದ ಕೆಲವು ದಿನಗಳಿಂದ ಪರ್ಷಿಯನ್ ಕೊಲ್ಲಿಯಲ್ಲಿರುವ ವಾಣಿಜ್ಯ ಹಡಗುಗಳ ಮೇಲೆ ಇರಾನಿನ ಸೇನೆ ದಾಳಿ ನಡೆಸುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ