
ಇಸ್ರೇಲ್ (ಜೂ.14): 'ಇಸ್ರೇಲಿ ವಾಯುಪಡೆಯ ಯುದ್ಧ ವಿಮಾನಗಳು ಶೀಘ್ರದಲ್ಲೇ ಟೆಹ್ರಾನ್‌ನ ಆಕಾಶದಲ್ಲಿ ಕಾಣಿಸಿಕೊಳ್ಳಲಿವೆ' ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಶನಿವಾರ ಇರಾನ್‌ಗೆ ಎಚ್ಚರಿಕೆ ನೀಡಿದ್ದಾರೆ.
ಇಸ್ರೇಲ್ ಮೇಲೆ ಇರಾನ್ ನೂರಾರು ಕ್ಷಿಪಣಿ ದಾಳಿ ಬಳಿಕ ಇಂದು ವೀಡಿಯೊ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ನೆತನ್ಯಾಹು ಅಯತೊಲ್ಲಾ ಆಡಳಿತದ ಪ್ರತಿಯೊಂದು ಅಡಗುತಾಣ ಮತ್ತು ಗುರಿಯ ಮೇಲೆ ಇಸ್ರೇಲ್ ದಾಳಿ ಮಾಡಲಿದೆ ಎಂದು ಅವರು ಇರಾನ್‌ಗೆ ಬೆದರಿಕೆ ಹಾಕಿದ್ದಾರೆ.
ಇರಾನ್‌ನ ಪರಮಾಣು ಕಾರ್ಯಕ್ರಮಕ್ಕೆ ಭಾರೀ ಹಾನಿ:
ಇಸ್ರೇಲ್ ವೈಮಾನಿಕ ದಾಳಿಯಿಂದ ಇರಾನ್‌ನ ಪರಮಾಣು ಕಾರ್ಯಕ್ರಮಕ್ಕೆ ಗಂಭೀರ ಹಾನಿಯನ್ನುಂಟುಮಾಡಿದೆ. ಇರಾನ್‌ನ ಅಧಿಕಾರಿಗಳು ಏನೇ ಹೇಳಿಕೊಂಡರೂ, ಅವರ ಪರಮಾಣು ಕಾರ್ಯಕ್ರಮವು ಭಾರೀ ನಷ್ಟವನ್ನು ಅನುಭವಿಸಿದೆ ಎಂದು ನೆತನ್ಯಾಹು ದೃಢಪಡಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಇರಾನ್‌ನ ಪರಮಾಣು ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿರುವ ಹಿರಿಯ ವಿಜ್ಞಾನಿಗಳ ತಂಡವನ್ನು ಗುರಿಯಾಗಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಇಸ್ರೇಲ್‌ನ ವಾಯುದಾಳಿಗಳು ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಹಲವು ವರ್ಷಗಳ ಹಿಂದಕ್ಕೆ ತಳ್ಳಿವೆ ಎಂದಿರುವ ನೆತನ್ಯಾಹು, ಈ ದಾಳಿಗಳು ಇರಾನ್‌ನ ಪರಮಾಣು ಯೋಜನೆಗಳಿಗೆ ದೊಡ್ಡ ಆಘಾತವನ್ನುಂಟುಮಾಡಿವೆ ಎಂದಿದ್ದಾರೆ. ಪ್ರಸ್ತುತ ಈ ಬೆಳವಣಿಗೆ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಇರಾನ್‌ನಿಂದ ಈ ವಿಷಯಕ್ಕೆ ಸಂಬಂಧಿಸಿದಂತೆ ಇನ್ನೂ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ