ಹಿಜ್ಬುಲ್ಲಾ ಉಗ್ರ ಸಂಘಟನೆಯ ಮುಂದಿನ ಮುಖ್ಯಸ್ಥ ಎಂದೇ ಬಿಂಬಿತನಾಗಿದ್ದ ಧರ್ಮಗುರು ಹಾಶಿಮ್ ಸಫೈದ್ದೀನ್ ಕೂಡಾ ಬೈರೂತ್‌ನ ಹೊರಭಾಗದಲ್ಲಿ ನಡೆದ ವಾಯುದಾಳಿಯಲ್ಲಿ ಹತ್ಯೆಯಾಗಿದ್ದಾನೆ ಎಂದು ಇಸ್ರೇಲ್ ಸೇನೆ ಮಂಗಳವಾರ ಖಚಿತಪಡಿಸಿದೆ.
ಬೈರೂತ್: ಹಿಜ್ಬುಲ್ಲಾ ಉಗ್ರ ಸಂಘಟನೆಯ ಮುಂದಿನ ಮುಖ್ಯಸ್ಥ ಎಂದೇ ಬಿಂಬಿತನಾಗಿದ್ದ ಧರ್ಮಗುರು ಹಾಶಿಮ್ ಸಫೈದ್ದೀನ್ ಕೂಡಾ ಬೈರೂತ್‌ನ ಹೊರಭಾಗದಲ್ಲಿ ನಡೆದ ವಾಯುದಾಳಿಯಲ್ಲಿ ಹತ್ಯೆಯಾಗಿದ್ದಾನೆ ಎಂದು ಇಸ್ರೇಲ್ ಸೇನೆ ಮಂಗಳವಾರ ಖಚಿತಪಡಿಸಿದೆ.
ಆದರೆ ಹಿಜ್ಬುಲ್ಲಾ ಇನ್ನೂ ಈ ಸುದ್ದಿಯನ್ನು ಖಚಿತಪಡಿಸಿಲ್ಲ. ಅಕ್ಟೋಬರ್ ಆರಂಭದಲ್ಲಿ ನಡೆಸಿದ ದಾಳಿಯಲ್ಲಿ ಸಫೈದ್ದೀನ್ ಸೇರಿದಂತೆ 25 ಹಿಜ್ಬುಲ್ಲಾ ನಾಯಕರು ಹತರಾಗಿರುವುದಾಗಿ ಇಸ್ರೇಲ್ ಹೇಳಿದೆ. ಸೆ.27ರಂದು ದಕ್ಷಿಣ ಬೈರೂತ್ ಮೇಲೆ ವಾಯುದಾಳಿ ನಡೆಸಿದ್ದ ಇಸ್ರೇಲಿ ಸೇನೆ, ಹಿಜ್ಬುಲ್ಲಾ ಮುಖ್ಯಸ್ಥನಾಗಿದ್ದ ಹಸನ್ ನಸ್ರಲ್ಲಾನನ್ನು ಬಲಿ ಪಡೆದಿತ್ತು. ಇದೀಗ ಆತನ ನಂತರ ಸಂಘಟನೆಯ ಮುಖ್ಯಸ್ಥನಾಗಲಿದ್ದ ಸಫೈದ್ದೀನ್ ಕೂಡ ಸಾವಿಗೀಡಾಗಿರುವುದಾಗಿ ತಿಳಿಸಿದೆ.
ಹಿಜ್ಬುಲ್ಲಾ ಉಗ್ರರಿಗೆ ಸೇರಿದ 4200 ಕೋಟಿ ನಗದು, ಬಂಗಾರ ಪತ್ತೆ!