
ಬೆಂಗಳೂರು (ಡಿ.13): ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಭವಿಷ್ಯದ ಬಾಹ್ಯಾಕಾಶ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ರೂಪಿಸಿದ ಸಿಇ20 ಕ್ರಯೋಜನಿಕ್ ಎಂಜಿನ್(ಎವಿಎಂ-3 ರಾಕೆಟ್‌ನ ಎಂಜಿನ್)ನ ನಿರ್ಣಾಯಕ ಪರೀಕ್ಷೆ ಯಶಸ್ವಿಯಾಗಿದೆ. ಎಂಜಿನ್‌ಗೆ ಆಗಸದಲ್ಲೇ ಎಂಜಿನ್‌ಗೆ ಮರುಚಾಲನೆ ನೀಡುವ ವ್ಯವಸ್ಥೆಯೊಂದಿಗೆ ಈ ಪರೀಕ್ಷೆ ನಡೆದಿರುವ ಹಿನ್ನೆಲೆಯಲ್ಲಿ ಇಸ್ರೋವು ರಾಕೆಟ್ ತಂತ್ರಜ್ಞಾನ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಮೈಲುಗಲ್ಲು ಸಾಧಿಸಿದಂತಾಗಿದೆ.
ತಮಿಳುನಾಡಿನ ಮಹೇಂದ್ರಗಿರಿಯಲ್ಲಿರುವ ಇಸ್ರೋ ಪ್ರೊಪಲ್ಷನ್ ಕಾಂಪ್ಲೆಕ್ಸ್‌ನಲ್ಲಿ ನ.29ರಂದು ಸಿಇ20 ಕ್ರೋಯಜನಿಕ್ ಎಂಜಿನ್‌ನ ಸಮುದ್ರಮಟ್ಟದ ಹಾಟ್ ಟೆಸ್ಟ್ ಅನ್ನು ಯಶಸ್ವಿಯಾಗಿ ನಡೆಸಲಾಯಿತು ಎಂದು ಇಸ್ರೋ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ದೇಶೀ ನಿರ್ಮಿತ ಈ ಸಿಇ20 ಕ್ರಯೋಜನಿಕ್ ಎಂಜಿನ್ ಅನ್ನು ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ ಅಭಿವೃದ್ಧಿಪಡಿಸಿದೆ. ಈ ಎಂಜಿನ್ ಉಡ್ಡಯನ ವಾಹನದ ಮೇಲಿನ ಹಂತಕ್ಕೆ ಶಕ್ತಿ ತುಂಬುತ್ತದೆ. ಕ್ರಯೋಜನಿಕ್ ಎಂಜಿನ್ ಅನ್ನು 19 ಟನ್‌ನಿಂದ 22 ಟನ್‌ವರೆಗಿನ ಥ್ರಸ್ಟ್‌ಲೆವಲ್‌ನಲ್ಲಿ ಕಾರ್ಯನಿರ್ವಹಿಸುವಂತೆ ರೂಪಿಸಲಾಗಿದೆ.
1991ರ ಪೂಜಾ ಸ್ಥಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ: ಮಂದಿರ, ಮಸೀದಿ ಸರ್ವೇಗೆ ಸುಪ್ರೀಂ ತಡೆ
ಇಸ್ರೋ ಪ್ರಕಾರ ಈ ಪರೀಕ್ಷೆಯು ಭವಿಷ್ಯದ ಬಾಹ್ಯಾಕಾಶ ಯೋಜನೆಗಳ ದೃಷ್ಟಿಯಲ್ಲಿ ಮಹತ್ವದ್ದಾಗಿದೆ. ಹಲವು ಉಪಗ್ರಹಗಳ ಉಡಾವಣೆಯಂಥ ಪರಿಸ್ಥಿತಿಗಳಲ್ಲಿ ರಾಕೆಟ್ ಎಂಜಿನ್‌ಗಳಿಗೆ ಪುನರ್ ಚಾಲನೆ ನೀಡುವ ತಂತ್ರಜ್ಞಾನ ಅಭಿವೃದ್ಧಿಗೆ ಈ ಪರೀಕ್ಷೆಯಿಂದ ಹೆಚ್ಚಿನ ಲಾಭವಾಗಲಿದೆ. ಆಗಸದಲ್ಲೇ ಎಂಜಿನ್‌ಗಳಿಗೆ ಮರು ಚಾಲನೆ ನೀಡುವುದು ಇಸ್ರೋದ ಕಾರ್ಯ ಯೋಜನೆಗಳ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಲು ನೆರವಾಗಲಿದೆ. ಈಗಾಗಲೇ ಇಸ್ರೋದ ಚಂದ್ರಯಾನ ಯೋಜನೆಗಳಿಗೆ ಈ ಎಂಜಿನ್ ಬಳಿಸದ ಎಲ್‌ವಿಎಂ3 ರಾಕೆಟ್‌ಗಳನ್ನೇ ಬಳಸಲಾಗಿದೆ. ಮುಂದಿನ ಮಾನವಸಹಿತ ಗಗನಯಾನ ಯೋಜನೆಗೂ ಇದೇ ಎಂಜಿನ್ ಬಳಕೆಯಾಗಲಿದೆ.
ವಿವಾಹಿತ ಮಹಿಳೆಯರ ವರದಕ್ಷಿಣೆ ಕಿರುಕುಳ ಪ್ರಕರಣಗಳ ದುರ್ಬಳಕೆ: ‘ವಿವಾಹಿತ ಮಹಿಳೆಯರು ಸ್ವಾರ್ಥಕ್ಕಾಗಿ ತಮ್ಮ ಪತಿ ಮತ್ತು ಅತ್ತೆ-ಮಾವಂದಿರಿಗೆ ಕಿರುಕುಳ ನೀಡಲು ವರದಕ್ಷಿಣೆ ಕಿರುಕುಳ ತಡೆ ಕಾಯ್ದೆಯಂಥ ಕಾನೂನುಗಳನ್ನು ವ್ಯಾಪಕವಾಗಿ ಬಳಸುತ್ತಿದ್ದಾರೆ. ನ್ಯಾಯಾಲಯಗಳು ಇಂಥ ಪ್ರಕರಣಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಇತ್ಯರ್ಥಪಡಿಸಬೇಕು’ ಎಂದು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. 34 ವರ್ಷದ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್, ತನ್ನ ವಿರುದ್ಧ ಪತ್ನಿಯು ಕಿರುಕುಳದ ಸುಳ್ಳು ಪ್ರಕರಣ ದಾಖಲಿಸಿದ್ದಳು ಎಂದು ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದರು. ಅದರ ನಡುವೆಯೇ ತೆಲಂಗಾಣದ ಪ್ರಕರಣವೊಂದರಲ್ಲಿ ಸುಪ್ರೀಂ ಕೋರ್ಟ್ ಈ ಕಳವಳ ವ್ಯಕ್ತಪಡಿಸಿದೆ.
ಶಾಂತಿಯುತ ಮೀಸಲಾತಿ ಹೋರಾಟ ರಣರಂಗವಾಗಿಸಿದ ಕಾಂಗ್ರೆಸ್ ಸರ್ಕಾರ: ಶಾಸಕ ಅರವಿಂದ ಬೆಲ್ಲದ
ಏನಿದು ಪ್ರಕರಣ?: ಪತ್ನಿಯು ತನ್ನ ಗಂಡ, ಆತನ ಪೋಷಕರು ಮತ್ತು ಇತರ ಕುಟುಂಬ ಸದಸ್ಯರ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿದ್ದಳು. ಇದನ್ನು ವಜಾಗೊಳಿಸಲು ತೆಲಂಗಾಣ ಹೈಕೋರ್ಟು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಪತಿಯ ಕಡೆಯವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇದರ ವಿಚಾರಣೆ ನಡೆಸಿದ ನ್ಯಾ। ಬಿ.ವಿ. ನಾಗರತ್ನ ನ್ಯಾ। ಎನ್. ಕೋಟೀಶ್ವರ ಸಿಂಗ್ ಅವರ ಪೀಠ, ತೆಲಂಗಾಣ ಹೈಕೋರ್ಟ್ ಆದೇಶವನ್ನು ರದ್ದು ಮಾಡಿದೆ ಹಾಗೂ ವರದಕ್ಷಿಣೆ ಕಿರುಕುಳ ಪ್ರಕರಣಗಳ ದುರ್ಬಳಕೆ ಬಗ್ಗೆ ಕಳವಳ ವ್ಯಕ್ತಪಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ