Karnataka Hijab row ಹಿಜಾಬ್ ವಿವಾದ ಕಿಚ್ಚಿಗೆ ತುಪ್ಪ ಸುರಿದ ಪಾಕಿಸ್ತಾನ ಮೂಲದ ಮಲಾಲಾ!

Published : Feb 09, 2022, 04:03 AM IST
Karnataka Hijab row ಹಿಜಾಬ್ ವಿವಾದ ಕಿಚ್ಚಿಗೆ ತುಪ್ಪ ಸುರಿದ ಪಾಕಿಸ್ತಾನ ಮೂಲದ ಮಲಾಲಾ!

ಸಾರಾಂಶ

ಹಿಜಾಬ್‌ ಕಾರಣಕ್ಕೆ ಮಕ್ಕಳಿಗೆ ಶಾಲೆ ಪ್ರವೇಷ ನಿಷೇಧ ಅತ್ಯಂತ ಭೀಕರ ನಮ್ಮ ಮೇಲೆ ಶಿಕ್ಷಣ- ಹಿಜಾಬ್‌ ನಡುವಿನ ಆಯ್ಕೆ ಹೇರಲಾಗುತ್ತಿದೆ ಭಾರತದಲ್ಲಿದೆ ಮುಸ್ಲಿಂ ಮಹಿಳೆಯರನ್ನು ಅಲ್ಪವಾಗಿ ಕಾಣುವ ನೀತಿ

ನವದೆಹಲಿ(ಫೆ.09): ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಭುಗಿಲೆದ್ದ ಹಿಜಾಬ್‌ ವಿವಾದಕ್ಕೆ(Karnatak Hijab Row) ಇದೀಗ ನೊಬೆಲ್‌ ಶಾಂತಿ ಪುರಸ್ಕೃತೆ, ಮಕ್ಕಳ ಶಿಕ್ಷಣ ಪರ ಹೋರಾಟಗಾರ್ತಿ, ಪಾಕಿಸ್ತಾನ(Pakistan) ಮೂಲದ ಯೂಸುಫ್‌ ಝೈ ಮಲಾಲಾ(Malala Yousafzai) ಮಧ್ಯಪ್ರವೇಶ ಮಾಡಿದ್ದಾರೆ. ಈ ಕುರಿತು ಮಂಗಳವಾರ ಟ್ವೀಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಮಲಾಲಾ, ‘ಕಾಲೇಜುಗಳು ನಮಗೆ ಶಿಕ್ಷಣ ಮತ್ತು ಹಿಜಾಬ್‌ ನಡುವಿನ ಆಯ್ಕೆಯನ್ನು ಹೇರುತ್ತಿವೆ. ಹೆಣ್ಣು ಮಕ್ಕಳನ್ನು ಅವರ ಹಿಜಾಬ್‌ ಕಾರಣಕ್ಕಾಗಿ ಶಾಲೆಗೆ ಪ್ರವೇಶ ನೀಡದೇ ಇರುವುದು ಅತ್ಯಂತ ಭೀಕರ. ಕಡಿಮೆ ಅಥವಾ ಹೆಚ್ಚು ಬಟ್ಟೆಧರಿಸುವುದಕ್ಕಾಗಿ ಮಹಿಳೆಯರನ್ನು ಟೀಕಿಸುವ ಸಂಪ್ರದಾಯ ಮುಂದುವರೆದಿದೆ. ಮುಸ್ಲಿಂ ಮಹಿಳೆಯರನ್ನು ಅಲ್ಪವಾಗಿ ಕಾಣುವ ನೀತಿಯನ್ನು ಭಾರತೀಯ(India) ನಾಯಕರು ನಿಲ್ಲಿಸಬೇಕು’ ಎಂದು ಹೇಳಿದ್ದಾರೆ.

3 ದಿನ ಹೈಸ್ಕೂಲ್‌, ಕಾಲೇಜು, ವಿವಿಗಳಿಗೆ ರಜೆ
ಕರಾವಳಿಯಲ್ಲಿ ಹೊತ್ತಿಕೊಂಡ ಹಿಜಾಬ್‌-ಕೇಸರಿ ಶಾಲು ವಿವಾದದ ಕಿಡಿ ರಾಜ್ಯಾದ್ಯಂತ ಶಾಲಾ, ಕಾಲೇಜುಗಳಿಗೆ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತ ರಾಜ್ಯ ಸರ್ಕಾರ 1ರಿಂದ 8ನೇ ತರಗತಿಗಳನ್ನು ಹೊರತುಪಡಿಸಿ ರಾಜ್ಯದ ಎಲ್ಲಾ ಪ್ರೌಢಶಾಲೆ, ಪಿಯು ಕಾಲೇಜು, ಎಲ್ಲಾ ವಿಶ್ವವಿದ್ಯಾಲಯಗಳು, ಅವುಗಳ ಸಂಯೋಜಿತ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್‌ ಕಾಲೇಜುಗಳಿಗೆ ಬುಧವಾರದಿಂದ 3 ದಿನ ರಜೆ ಘೋಷಿಸಿ ಆದೇಶಿಸಿದೆ.

News Hour ಹೈ ಕೋರ್ಟ್‌ನಲ್ಲಿ ಹಿಜಾಬ್ ಕಿಚ್ಚಿನ ವಾದ ಪ್ರತಿವಾದ ಹೇಗಿತ್ತು

ಅದರಂತೆ ಫೆ.9ರ ಬುಧವಾರದಿಂದ ಫೆ.11ರ ಶುಕ್ರವಾರದ ವರೆಗೆ ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ 9ನೇ ತರಗತಿ ಮತ್ತು ಅದರ ಮೇಲ್ಮಟ್ಟದ ಎಲ್ಲಾ ತರಗತಿ ವಿದ್ಯಾರ್ಥಿಗಳಿಗೂ ಭೌತಿಕ ತರಗತಿ ಚಟುವಟಿಕೆಗಳು ಬಂದ್‌ ಆಗಲಿವೆ. ಉಳಿದಂತೆ 1ರಿಂದ 8ನೇ ತರಗತಿ ವಿದ್ಯಾರ್ಥಿಗಳು ಹಾಗೂ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸೇರಿದಂತೆ ಅದರ ಸಂಯೋಜಿತ ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ನಸಿಂರ್‍ಗ್‌ ಕಾಲೇಜುಗಳು ಮಾತ್ರ ಯಥಾವತ್ತಾಗಿ ನಡೆಯಲಿವೆ. ಕೋವಿಡ್‌ ಪರಿಸ್ಥಿತಿ ನಿರ್ವಹಣೆಗೆ ಸಮಸ್ಯೆಯಾಗಲಿದೆ ಎಂಬ ಕಾರಣಕ್ಕೆ ವೈದ್ಯಕೀಯ ಕಾಲೇಜುಗಳನ್ನು ಬಂದ್‌ ಮಾಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರವಷ್ಟೇ ಲಾಠಿಚಾಜ್‌ರ್‍ಗೆ ಕಾರಣವಾಗಿದ್ದ ಹಿಜಾಬ್‌ ಕೇಸರಿ ಶಾಲು ವಿವಾದ ಮಂಗಳವಾರ ಶಿವಮೊಗ್ಗ ಜಿಲ್ಲೆಯ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳ ನಡುವೆ ಗದ್ದಲ, ಮಾರಾಮಾರಿ, ಕೇಸರಿ ಧ್ವಜ ಹಾರಿಸಿದ ಪ್ರಕರಣ ಅಂತಾರಾಷ್ಟ್ರೀಯ ಮಟ್ಟದಲ್ಲೂ ಭಾರಿ ಸುದ್ದಿಯಾಗಿತ್ತು. ಇದರಿಂದ ಮಂಗಳವಾರ ದೆಹಲಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಚ್ಚೆತ್ತು ಪರಿಸ್ಥಿತಿ ನಿಭಾಯಿಸಲು ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಎಲ್ಲಾ ಪ್ರೌಢ ಶಾಲೆ, ಪಿಯು, ಪದವಿ ಸೇರಿದಂತೆ ಇತರೆ ಉನ್ನತ ಶಿಕ್ಷಣ ಕಾಲೇಜುಗಳನ್ನು ಬಂದ್‌ ಮಾಡಲು ಸಂಬಂಧಿಸಿದ ಇಲಾಖೆಗಳಿಗೆ ಆದೇಶಿಸಿರುವುದಾಗಿ ಘೋಷಿಸಿದರು.

Hijab Row: ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳಿಗೆ ಸಿಎಂ ಮನವಿ

ಇದರ ಬೆನ್ನಲ್ಲೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆಯಿಂದ ಶಾಲಾ-ಕಾಲೇಜುಗಳಲ್ಲಿ ಬಿಗುವಿನ ವಾತಾವರಣ ಇರುವ ಕಾರಣ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಮದ ಮುಂಜಾಗ್ರತಾ ಕ್ರಮವಾಗಿ ಮೂರು ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಮಾಡಿವೆ. ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಸರ್ಕಾರಿ, ಅನುದಾನಿತ, ಅನುದಾನರ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ. 1ರಿಂದ 8ನೇ ತರಗತಿಗಳು ಯಥಾಸ್ಥಿತಿಯಲ್ಲಿ ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ತನ್ನ ಆದೇಶದಲ್ಲಿ ತಿಳಿಸಿದೆ.

ಅದೇ ರೀತಿ ಉನ್ನತ ಶಿಕ್ಷಣ ಇಲಾಖೆಯು ತನ್ನ ವ್ಯಾಪ್ತಿಗೊಳಪಡುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಕಾಲೇಜುಗಳು, ಡಿಪ್ಲೋಮಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿದೆ. ಸರ್ಕಾರದ ಆದೇಶದ ಬೆನ್ನಲ್ಲೇ, ಬೆಂಗಳೂರು ವಿವಿ, ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೇರಿದಂತೆ ಬಹುತೇಕ ವಿವಿಗಳು ತಮ್ಮ ವ್ಯಾಪ್ತಿಯ ಕಾಲೇಜುಗಳಿಗೆ ಮೂರು ದಿನ ರಜೆ ಘೋಷಿಸಿ ಸುತ್ತೋಲೆ ಹೊರಡಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಾರಿ ಸದ್ದು ಮಾಡ್ತಿದೆ ಪುಟಿನ್​ ತಂದ ಸೂಟ್​ಕೇಟ್: ಅದರ ಹಿಂದಿದೆ ಊಹೆಗೆ ನಿಲುಕದ ವಿಚಿತ್ರ ಸ್ಟೋರಿ! ಏನಿದೆ ಅದರಲ್ಲಿ?
Indigo Crisis: ಮಗಳಿಗೆ ರಕ್ತ ಸೋರ್ತಿದೆ, ಸ್ಯಾನಿಟರಿ ಪ್ಯಾಡ್​ ಕೊಡಿ: ಬೆಂಗಳೂರು ಏರ್​ಪೋರ್ಟ್​ನಲ್ಲಿ ತಂದೆಯ ಕಣ್ಣೀರು