
ಕೊಚ್ಚಿ(ಮೇ.25): ಹಲಸಿನ ಕಾಯಿ ತಲೆಯ ಮೇಲೆ ಬಿದ್ದು ಗಾಯಗೊಂಡು ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆ ಸೇರಿದ್ದ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ಪರೀಕ್ಷೆಗೊಳಪಡಿಸಿದ ಬಳಿಕ ಗೊತ್ತಾದ ಅಪರೂಪದ ಪ್ರಕರಣವೊಂದು ಕೇರಳದಲ್ಲಿ ನಡೆದಿದೆ. ಆದರೆ ಈ ವ್ಯಕ್ತಿಗೆ ಕೊರೋನಾ ಹೇಗೆ ಬಂತು ಎನ್ನುವುದು ಯಕ್ಷ ಪ್ರಶ್ನೆಯಾಗಿದೆ.
ಕೇರಳ ಕಾಸರಗೋಡಿನ ಬೆಲೂರು ಗ್ರಾಮದ ಆಟೋ ಚಾಲಕರೊಬ್ಬರು ಶನಿವಾರ ಹಲಸಿನಕಾಯಿ ಕೀಳಲು ಹೋಗಿ, ಹಲಸಿನಕಾಯಿ ತಲೆಯ ಮೇಲೆ ಬಿದ್ದು ತೀವ್ರಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತರಲಾಯಿತು. ಶಸ್ತ್ರಚಿಕಿತ್ಸೆ ಮಾಡುವುದು ಅನಿವಾರ್ಯವೂ ಆಗಿತ್ತು. ಶಸ್ತ್ರಚಿಕಿತ್ಸೆಗೂ ಮೊದಲು ಈ ವ್ಯಕ್ತಿಯನ್ನು ಕೋವಿಡ್ 19 ಟೆಸ್ಟ್‌ಗೆ ಒಳಪಡಿಸಲಾಯಿತು. ಫಲಿತಾಂಶ ಬಂದಾಗ ಅವರಿಗೂ ಕೊರೋನಾ ಇರುವುದು ದೃಢಪಟ್ಟಿದೆ ಎಂದು ಕಣ್ಣೂರಿನ ಪರಿಯಾರಾಮ್ ವೆದ್ಯಕೀಯ ಕಾಲೇಜಿನ ವೈದ್ಯ ಡಾ
ಕೆ. ಸುದೀಪ್. ಇದೀಗ ಈ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ನೋಡಿದಾಗ ಇವರು ಇತ್ತೀಚೆಗೆ ಜಿಲ್ಲಾಸ್ಪತ್ರೆಗೆ ವ್ಯಕ್ತಿಯೊಬ್ಬರನ್ನು ಆಟೋದಲ್ಲಿ ಕರೆದುಕೊಂಡು ಹೋಗಿದ್ದು, ಆಗ ಸೋಂಕು ತಗಲಿರಬಹುದೆಂದು ಹೇಳಲಾಗುತ್ತಿದೆ. ಪೊಲೀಸರು ವ್ಯಕ್ತಿಯ ಸೋಂಕಿನ ಮೂಲ ಪತ್ತೆ ಮಾಡುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ