ಜಮ್ಮು ಕಾಶ್ಮೀರಲ್ಲಿ 3 ಭಯೋತ್ಪಾದಕರ ಹತ್ಯೆ ಮಾಡಿದ ಭಾರತೀಯ ಸೇನೆ!

By Santosh Naik  |  First Published Jun 26, 2024, 8:11 PM IST

ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಬುಧವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ. ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ.
 


ನವದೆಹಲಿ (ಜೂ.26): ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಮೂಲಗಳ ಪ್ರಕಾರ, ಈ ಪ್ರದೇಶದಲ್ಲಿ ಒಟ್ಟು ನಾಲ್ವರು ಭಯೋತ್ಪಾದಕರು ಅಡಗಿದ್ದು, ಮೂವರ ಹುಟ್ಟಡಗಿಸಲಾಗಿದೆ. ಜೂನ್ 11 ಮತ್ತು 12 ರಂದು ಗುಡ್ಡಗಾಡು ಜಿಲ್ಲೆಯಲ್ಲಿ ನಡೆದ ಅವಳಿ ಭಯೋತ್ಪಾದಕ ದಾಳಿಯ ನಂತರ ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜೊತೆಗೆ ಪೊಲೀಸರ ತೀವ್ರ ಶೋಧ ಮತ್ತು ಕಾರ್ಡನ್ ಕಾರ್ಯಾಚರಣೆಯ ನಡುವೆ ಬೆಳಿಗ್ಗೆ 9.50 ರ ಸುಮಾರಿಗೆ ಗಂಡೋ ಪ್ರದೇಶದ ಬಜಾದ್ ಗ್ರಾಮದಲ್ಲಿ ಗುಂಡಿನ ಚಕಮಕಿ ಪ್ರಾರಂಭವಾಯಿತು ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಜೂನ್ 11 ರಂದು, ಚತ್ತರಗಲ್ಲದ ಜಂಟಿ ಚೆಕ್ ಪೋಸ್ಟ್ ಮೇಲೆ ಭಯೋತ್ಪಾದಕರು ದಾಳಿ ಮಾಡಿದಾಗ ಆರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರೆ, ಮರುದಿನ ಗಂಡೋ ಪ್ರದೇಶದ ಕೋಟಾ ಮೇಲ್ಭಾಗದಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಒಬ್ಬ ಪೊಲೀಸ್ ಗಾಯಗೊಂಡರು.

ನನಗೆ ಪೆಟ್ಟಾಗಿದೆ, ಪ್ಲೀಸ್ ಗಾಬರಿ ಆಗಬೇಡಿ; ಮಗನ ಕೊನೆಯ ಮಾತು ನೆನೆದು ಭಾವುಕರಾದ ತಂದೆ

ಅವಳಿ ದಾಳಿಯ ನಂತರ, ಭದ್ರತಾ ಪಡೆಗಳು ತಮ್ಮ ಭಯೋತ್ಪಾದನಾ-ವಿರೋಧಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದವು ಮತ್ತು ಜಿಲ್ಲೆಯಲ್ಲಿ ನುಸುಳಿ ಮತ್ತು ಕಾರ್ಯಾಚರಣೆ ನಡೆಸಿದ ನಾಲ್ವರು ಪಾಕಿಸ್ತಾನಿ ಭಯೋತ್ಪಾದಕರ ಸುಳಿವು ನೀಡಿದವರಿಗೆ ತಲಾ 5 ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಣೆ ಮಾಡಲಾಗಿತ್ತು. ಭದ್ರತಾ ಪಡೆಗಳ ಸಹಾಯದಿಂದ ಪೊಲೀಸರು ಸಿನೂ ಪಂಚಾಯತ್ ಗ್ರಾಮದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಆದರೆ ಅಡಗಿಕೊಂಡಿದ್ದ ಭಯೋತ್ಪಾದಕರಿಂದ ಭಾರೀ ಗುಂಡಿನ ದಾಳಿಗೆ ಒಳಗಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ. ಕೊನೆಯ ವರದಿಗಳು ಬಂದಾಗಲೂ ಗುಂಡಿನ ಚಕಮಕಿ ನಡೆಯುತ್ತಿತ್ತು ಎಂದು ತಿಳಿಸಲಾಗಿದೆ.

Tap to resize

Latest Videos

ವಿಶ್ವದ ಅತೀ ಎತ್ತರದ ರೈಲ್ವೆ ಬ್ರಿಡ್ಜ್‌ನಲ್ಲಿ ಭಾರತೀಯ ರೈಲ್ವೆಯ ಯಶಸ್ವಿ ಟ್ರಯಲ್ ರನ್ : ಮೋಹಕ ವೀಡಿಯೋ ವೈರಲ್

click me!