
ಲೇಹ್ (ಆಗಸ್ಟ್ 19): ಕಾರ್ಗಿಲ್‌ನಲ್ಲಿ ಶುಕ್ರವಾರ ಸಂಜೆ ಭೀಕರ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮೂರು ಮಂದಿ ಬಲಿಯಾಗಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಗಿಲ್ ಜಿಲ್ಲೆಯ ದ್ರಾಸ್‌ನಲ್ಲಿರುವ (Drass) ಕಬಾಡಿ ನಲ್ಲಾ ಪ್ರದೇಶದಲ್ಲಿರುವ ಗುಜರಿ ಅಂಗಡಿಯಲ್ಲಿ ಶಂಕಾಸ್ಪದ ವಸ್ತುವೊಂದು ಸ್ಫೋಟಗೊಂಡ ಕಾರಣ ದುರಂತ ಸಂಭವಿಸಿದೆ ಎಂದು ವರದಿ ತಿಳಿಸಿದೆ.
ಗುಜರಿ ಅಂಗಡಿಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡಿದ್ದು, ಈ ಸಂಬಂಧ ತನಿಖೆ ಮುಂದುವರೆದಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಕಾರ್ಗಿಲ್ ಡೆಪ್ಯುಟಿ ಕಮಿಷನರ್ ಶ್ರೀಕಾಂತ್ ಬಾಳಾಸಾಹೇಬ್ ಸುಸೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
13 ದಿನ ಬಳಿಕ ಮತ್ತೆ ಮಣಿಪುರದಲ್ಲಿ ಹಿಂಸೆ: ಕೈ ಕಾಲು ಕತ್ತರಿಸಿ ಮೂವರು ಯುವಕರ ಭೀಕರ ಕೊಲೆ
ಮೃತರಲ್ಲಿ ಸ್ಥಳೀಯರಲ್ಲದವರೂ ಸೇರಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದ್ರಾಸ್ ಪೊಲೀಸ್ ಠಾಣೆಯಲ್ಲಿ ಕಾನೂನಿನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಮುಂದಿನ ತನಿಖೆ ಪ್ರಗತಿಯಲ್ಲಿದೆ.ಮೃತರ ಕುಟುಂಬಗಳಿಗೆ ರೆಡ್‌ಕ್ರಾಸ್ ನಿಧಿಯ ಅಡಿಯಲ್ಲಿ ಪರಿಹಾರವನ್ನು ಘೋಷಿಸಲಾಗಿದೆ.
ಬೆಂಗಳೂರು ನಿಲ್ದಾಣದಲ್ಲಿದ್ದ ಮುಂಬೈ ಉದ್ಯಾನ್ ಎಕ್ಸ್ ಪ್ರೆಸ್ ರೈಲಿಗೆ ಬೆಂಕಿ, ಹೊತ್ತಿ ಉರಿದ ಎ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ