ಆರ್ಟಿಕಲ್ 370 ರದ್ದಾಗಿ ಎರಡು ವರ್ಷ, ಕಾಶ್ಮೀರ ಮಸೀದಿ ಬಳಿ ಸ್ಫೋಟ!

Published : Aug 05, 2021, 03:11 PM ISTUpdated : Aug 05, 2021, 03:13 PM IST
ಆರ್ಟಿಕಲ್ 370 ರದ್ದಾಗಿ ಎರಡು ವರ್ಷ, ಕಾಶ್ಮೀರ ಮಸೀದಿ ಬಳಿ ಸ್ಫೋಟ!

ಸಾರಾಂಶ

* ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಫೋಟ * ಆರ್ಟಿಕಲ್ 370 ರದ್ದಾಗಿ ಎರಡು ವರ್ಷ ಪೂರೈಸುತ್ತಿರುವ ಮಧ್ಯೆ ಆಘಾತಕಾರಿ ಸುದ್ದಿ

ಶ್ರೀನಗರ(ಆ.05): ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದಿಂದ ಆಘಾತಕಾರಿ ಸುದ್ದಿ ವರದಿಯಾಗಿದೆ. ಶ್ರೀನಗರದ ಜನಬಿಡದಿ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ. ಆದರೆ ಘಟನೆಯಲ್ಲಿ ಯಾವುದೇ ಸಾವುನೋವು ವರದಿಯಾಗಿಲ್ಲ. ಇನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಒದಗಿಸುತ್ತಿದ್ದ ಸಂವಿಧಾನದ 370 ನೇ ವಿಧಿ ರದ್ದುಗೊಳಿಸಿ 2 ವರ್ಷಗಳ ಪೂರ್ಣಗೊಂಡ ದಿನವೇ ಈ ಸ್ಫೋಟ ಸಂಭವಿಸಿದೆ ಎಂಬುವುದು ಉಲ್ಲೇಖನೀಯ.

ಜಾಮಿಯಾ ಮಸೀದಿ ಬಳಿ ಸ್ಫೋಟ 

ವಾಸ್ತವವಾಗಿ, ಈ ಸ್ಫೋಟವು ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ನೌಹಟ್ಟಾ ಪ್ರದೇಶದ ಜಾಮಿಯಾ ಮಸೀದಿ ಬಳಿ ಸಂಭವಿಸಿದೆ. ಸ್ಫೋಟದ ನಂತರ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇದಕ್ಕೆ ಪ್ರತಿಯಾಗಿ ಭದ್ರತಾ ಸಿಬ್ಬಂದಿ ಗುಂಡುಗಳನ್ನು ಹಾರಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಸ್ಫೋಟದ ಹಿಂದೆ ಯಾರು ಇದ್ದಾರೆ ಎಂಬುದನ್ನು ಪತ್ತೆ ಮಾಡುವುದಾಗಿ ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಪೋಟದಿಂದ ಮೃತಪಟ್ಟಿದ್ದ 19 ವರ್ಷದ ಹುಡುಗಿ 

ಕೆಲ ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸ್ಫೋಟ ಸಂಭವಿಸಿತ್ತು. ಈ ಸ್ಪೋಟದಲ್ಲಿ 19 ವರ್ಷದ ಹುಡುಗಿ ಸಾವನ್ನಪ್ಪಿದ್ದರೆಬಾಲಕಿಯ ತಾಯಿ ಗಂಭೀರವಾಗಿ ಗಾಯಗೊಂಡಿದ್ದರು. ತಾಯಿ ಮತ್ತು ಮಗಳು ತರಕಾರಿ ಖರೀದಿಗೆ ತೆರಳಿದ್ದ ವೇಳೆ ಈ ಸ್ಫೋಟ ಸಂಭವಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪೌರತ್ವ ಸಿಗುವ ಮುನ್ನವೇ ವೋಟರ್‌ ಲಿಸ್ಟ್‌ನಲ್ಲಿ ಹೆಸರು, ಸೋನಿಯಾ ಗಾಂಧಿಗೆ ನೋಟಿಸ್‌ ಕೊಟ್ಟ ದೆಹಲಿ ಕೋರ್ಟ್!
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ