Breaking: ಏರ್‌ಪೋರ್ಸ್‌ ಬೆಂಗಾವಲು ಪಡೆ ಮೇಲೆ ಪೂಂಚ್‌ನಲ್ಲಿ ಭಯೋತ್ಪಾದಕ ದಾಳಿ, ಹಲವು ಸೈನಿಕರಿಗೆ ಗಾಯ!

By Santosh NaikFirst Published May 4, 2024, 7:54 PM IST
Highlights


ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ವಾಯುಪಡೆಯ ಬೆಂಗಾವಲು ಪಡೆಯ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಹಲವು ಯೋಧರು ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
 

ನವದೆಹಲಿ  (ಮೇ.4): ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ವಾಯುಪಡೆಯ ವಾಹನಗಳ ಬೆಂಗಾವಲು ಪಡೆಯ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಈ ದಾಳಿಯಲ್ಲಿ ಹಲವು ಯೋಧರು ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದೆ. ರಾಷ್ಟ್ರೀಯ ರೈಫಲ್ಸ್ ಘಟಕದ ಸ್ಥಳೀಯ ಘಟಕವು ದಾಳಿಯಾದ ಪ್ರದೇಶವನ್ನು ಸುತ್ತುವರೆದಿದೆ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಇನ್ನು ಏರ್‌ಪೋರ್ಸ್‌ ಬೆಂಗಾವಲು ಪಡೆಯನ್ನು ಶಾಸಿತಾರ್ ಬಳಿಯ ವಾಯುನೆಲೆಯೊಳಗೆ ವಾಯುಪಡೆಯ ವಾಹನಗಳನ್ನು ಸುರಕ್ಷಿತವಾಗಿ ಸಾಗಿಸಲಾಗಿದೆ. ಸೈನಿಕರು ಗಾಯಗೊಂಡಿರುವ ವರದಿಗಳೂ ಬಂದಿವೆ.  ಸುರನಕೋಟೆಯ ಸನಾಯಿ ಗ್ರಾಮದಲ್ಲಿ ದಾಳಿ ನಡೆದಿದೆ. ವಿವರಗಳನ್ನು ಖಚಿತಪಡಿಸಿಕೊಳ್ಳಲು ಭಾರತೀಯ ಸೇನೆ ಮತ್ತು ಪೊಲೀಸರು ಇನ್ನಷ್ಟು ಪಡೆಗಳನ್ನು ದಾಳಿಯಾದ ಪ್ರದೇಶಕ್ಕೆ ಕಳುಹಿಸಿಕೊಟ್ಟಿದೆ. ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಪ್ರದೇಶದಲ್ಲಿ ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಸಿತಾರ್ ಬಳಿಯ ಸಾಮಾನ್ಯ ಪ್ರದೇಶದಲ್ಲಿನ ವಾಯುನೆಲೆಯೊಳಗೆ ವಾಹನಗಳನ್ನು ಇರಿಸಲಾಗಿದೆ ಎಂದು ತಿಳಿದುಬಂದಿದೆ.

ಐವರು ಯೋಧರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟು ಎರಡು ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.

(ಸುದ್ದಿ ಅಪ್‌ಡೇಟ್‌ ಆಗುತ್ತಿದೆ)

click me!