
ಶ್ರೀನಗರ: 370ನೇ ವಿಧಿ ರದ್ದಾದ ಬಳಿಕ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಚುನಾವಣೆ ನಡೆಯುತ್ತಿದೆ. ಇಂದು ಮೊದಲ ಹಂತದಲ್ಲಿ 24 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 2014ರ ನಂತರ ಕಾಶ್ಮೀರದಲ್ಲಿ ನಡೆಯುತ್ತಿರುವ ಮೊದಲ ವಿಧಾನಸಭೆ ಚುನಾವಣೆ ಇದಾಗಿದೆ.
ಅನಂತನಾಗ್, ಪುಲ್ವಾಮಾ, ದೋಡಾ, ಕುಲ್ಗಾಮ್, ಶೋಪಿಯಾನ್, ರಾಂಬನ್ ಸೇರಿದಂತೆ ಒಟ್ಟು 24 ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನಡೆಯಲಿದೆ. ಒಟ್ಟು 219 ಅಭ್ಯರ್ಥಿಗಳು ಮೊದಲ ಹಂತದ ಚುನಾವಣೆಯಲ್ಲಿ ಕಣದಲ್ಲಿದ್ದಾರೆ. 23 ಲಕ್ಷ ಮಂದಿ ಮತದಾರರಿದ್ದು, ಅದರಲ್ಲಿ 5.66 ಲಕ್ಷ ಯುವ ಮತದಾರರಿದ್ದಾರೆ. ಚುನಾವಣಾ ಆಯೋಗ ಮತದಾನಕ್ಕಾಗಿ 125 ಮತಗಟ್ಟೆಗಳನ್ನು ಸ್ಥಾಪಿಸಿದೆ.
ಇದನ್ನೂ ಓದಿ:ಜಮ್ಮು ಕಾಶ್ಮೀರ ಚುನಾವಣೆ: ಸಂಸತ್ ಮೇಲಿನ ದಾಳಿಕೋರ ಅಫ್ಜಲ್ ಗುರು ಸೋದರನಿಂದ ನಾಮಪತ್ರ
ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಮೈತ್ರಿಯಾಗಿ ಸ್ಫರ್ಧೆ ಮಾಡುತ್ತಿದ್ದು, ಪಿಡಿಪಿ ಹಾಗೂ ಬಿಜೆಪಿ ಏಕಾಂಗಿಯಾಗಿ ಕಣಕ್ಕಿಳಿದಿವೆ. ಮುಂದೆ ಸೆ.25 ರಂದು 26 ಕ್ಷೇತ್ರಗಳಿಗೆ 2ನೇ ಹಂತದ ಚುನಾವಣೆ ಹಾಗೂ ಆ.1 ರಂದು 40 ಕ್ಷೇತ್ರಗಳಿಗೆ 3ನೇ ಹಂತದ ಚುನಾವಣೆ ನಡೆಯುವುದರೊಂದಿಗೆ ಮತದಾನ ಪ್ರಕ್ರಿಯೆ ಪೂರ್ಣಗೊಂಡು ಅ.8 ರಂದು ಮತಎಣಿಕೆ ಕಾರ್ಯ ನಡೆಯಲಿದೆ.
ರಾಜ್ಯದಲ್ಲಿ ಉಗ್ರರ ದಾಳಿ ಆತಂಕ ಇರುವ ಕಾರಣ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಇದನ್ನೂ ಓದಿ: ಜಮ್ಮು ಕಾಶ್ಮೀರ ಚುನಾವಣೆ: ಬಿಜ್ಬೆಹರದಿಂದ ಸ್ಪರ್ಧಿಸುತ್ತಿರುವ ಮೆಹಬೂಬಾ ಪುತ್ರಿ ಇಲ್ತಿಜಾ ಸುಂದರ ಫೋಟೋಗಳು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ