
ಶ್ರೀನಗರ: ಜಮ್ಮು ಕಾಶ್ಮೀರ ಹುತಾತ್ಮ ದಿನಾಚರಣೆಯಲ್ಲಿ ಪಾಲ್ಗೊಳ್ಳುವುದಕ್ಕೆ ಅನುಮತಿ ಸಿಗದ್ದಕ್ಕೆ ಜಮ್ಮು-ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಮತ್ತು ಸಚಿವ ಸಂಪುಟದ ಸದಸ್ಯರು, ಹುತಾತ್ಮರ ಸಮಾಧಿ ಸ್ಥಳದ ಗೇಟ್ ಹಾರಿದ ಘಟನೆ ನಡೆದಿದೆ.
ಜು.13ರಂದು ಪ್ರತಿ ವರ್ಷ ಕಾಶ್ಮೀರದಲ್ಲಿ ಹುತಾತ್ಮರ ದಿನ ಎಂದು ಆಚರಿಸಿತ್ತಾರೆ. 1931ರ ಜುಲೈ 13ರಂದು ಮಹಾರಾಜ ಹರಿ ಸಿಂಗ್ ಅವರ ಡೋಗ್ರಾ ಪಡೆಗಳು ಅಂದು 22 ಕಾಶ್ಮೀರಿ ಪ್ರತಿಭಟನಾಕಾರರನ್ನು ಕೊಂದಿದ್ದವು. ಇದರ ಸ್ಮರಣಾರ್ಥ ಆಚರಣೆ ನಡೆಯುತ್ತದೆ. ಲೆಫ್ಟಿನೆಂಟ್ ಗವರ್ನರ್ ನೇತೃತ್ವದ ಆಡಳಿತವು 2020ರ ರಜಾದಿನಗಳ ಪಟ್ಟಿಯಿಂದ ಈ ದಿನ ಕೈ ಬಿಟ್ಟಿತ್ತು. ಅಲ್ಲದೇ ಲೆ। ಗವರ್ನರ್ ಮನೋಜ್ ಸಿನ್ಹಾ ಹುತಾತ್ಮ ದಿನ ಆಚರಿಸದಂತೆ ನಿರ್ಬಂಧ ವಿಧಿಸಿದ್ದರು. ಆಡಳಿತರೂಢ ನ್ಯಾಷನಲ್ ಕಾನ್ಫೆರೆನ್ಸ್‌ನ ಪ್ರಮುಖ ನಾಯಕರನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು.
ಅದಾದ 1 ದಿನದ ಬಳಿಕ ಸಿಎಂ ಒಮರ್, ನೌಹಟ್ಟಾದಲ್ಲಿರುವ ಹುತಾತ್ಮರ ಸಮಾಧಿ ಸ್ಥಳಕ್ಕೆ ಪುಷ್ಪ ನಮನ ಸಲ್ಲಿಸಲು ಬಂದಿದ್ದಾರೆ. ಪೊಲೀಸರು ಅನುಮತಿ ನೀಡದೆ ತಡೆಯಲು ಪ್ರಯತ್ನಿಸಿದ್ದಕ್ಕೆ ಗೇಟ್ ಹಾರಿದ್ದಾರೆ. ಈ ವಿಡಿಯೋ ಭಾರೀ ವೈರಲ್ ಆಗಿದ್ದಾರೆ. ಅಲ್ಲದೆ, ಅವರು ಗವರ್ನರ್ ವಿಧಿಸಿದ ಕಟ್ಟಳೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶೆಲ್ ದಾಳಿಯಿಂದ ಸಂಪೂರ್ಣವಾಗಿ ಮನೆಯನ್ನು ಕಳೆದುಕೊಂಡವರಿಗೆ ಕೇಂದ್ರ ಸರ್ಕಾರ 2 ಲಕ್ಷ ರೂಪಾಯಿ ಪರಿಹಾರ
ಪಹಲ್ಗಾಮ್ ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ಮೊದಲ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಪಾಕ್ ಶೆಲ್ ದಾಳಿಯಿಂದ ಸಂಪೂರ್ಣವಾಗಿ ಮನೆಯನ್ನು ಕಳೆದುಕೊಂಡವರಿಗೆ ಕೇಂದ್ರ ಸರ್ಕಾರ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಹೇಳಿದ್ದಾರೆ. ಮನೆಗಳಿಗೆ ಹಾನಿಯಾದವರಿಗೆ 1 ಲಕ್ಷ ರೂ.ಗಳನ್ನು ನೀಡುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.
ಇದಕ್ಕೂ ಮೊದಲು, ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಬಲಿಯಾದವರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗಗಳನ್ನು ಘೋಷಿಸಿದರು ಮತ್ತು ಸಂತ್ರಸ್ತ ಕುಟುಂಬಗಳ ಪುನರ್ವಸತಿ ತಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಹೇಳಿದರು.
ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ಪ್ರತೀಕಾರವಾಗಿ ಭಾರತವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಒಂಬತ್ತು ಭಯೋತ್ಪಾದಕ ಮೂಲಸೌಕರ್ಯಗಳನ್ನು ನಾಶಮಾಡಲು 'ಆಪರೇಷನ್ ಸಿಂಧೂರ್' ಅನ್ನು ಪ್ರಾರಂಭಿಸಿದ ಸ್ವಲ್ಪ ಸಮಯದ ನಂತರ ಗಡಿಯಾಚೆಗಿನ ಫಿರಂಗಿ ಮತ್ತು ಮೋರ್ಟಾರ್ ಶೆಲ್ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದರು ಮತ್ತು 28 ಜನರು ಗಾಯಗೊಂಡಿದ್ದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ