Breaking: ಜಮ್ಮು ಕಾಶ್ಮೀರದಲ್ಲಿ 200 ಅಡಿ ಕಮರಿಗೆ ಬಿದ್ದ ಸೇನಾ ವಾಹನ, 11 ಸೇನಾ ಸಿಬ್ಬಂದಿ ಸಾವು!

Published : Jan 22, 2026, 03:42 PM IST
10 Army personnel killed after vehicle plunges into gorge in jammu and kashmir

ಸಾರಾಂಶ

Breaking: 11 Soldiers Dead as Army Vehicle Falls into Gorge in Jammu Kashmir ಒಟ್ಟು 21 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ ವಾಹನವು ಎತ್ತರದ ಪೋಸ್ಟ್‌ಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ, ರಸ್ತೆಯಿಂದ ಸ್ಕಿಡ್ ಆಗಿ ಕಮರಿಗೆ ಬಿದ್ದಿದೆ. 

ಶ್ರೀನಗರ (ಜ.22): ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸೇನಾ ವಾಹನವೊಂದು 200 ಅಡಿ ಆಳದ ಕಂದಕಕ್ಕೆ ಬಿದ್ದು 11 ಸೈನಿಕರು ಸಾವನ್ನಪ್ಪಿದ್ದಾರೆ. ಸೇನಾ ವಾಹನದಲ್ಲಿ 21 ಸೈನಿಕರು ಇದ್ದರು ಎಂದು ಸೇನಾ ಅಧಿಕಾರಿ ತಿಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಹನ್ನೊಂದು ಜನರನ್ನು ಉಧಮ್‌ಪುರ ಮಿಲಿಟರಿ ಆಸ್ಪತ್ರೆಗೆ ಏರ್‌ಲಿಫ್ಟ್ ಮಾಡಲಾಗಿದೆ. ಅಧಿಕಾರಿಯ ಪ್ರಕಾರ, ಭದೇರ್ವಾ-ಚಂಬಾ ಅಂತರರಾಜ್ಯ ರಸ್ತೆಯ ಖನ್ನಿ ಟಾಪ್‌ನಲ್ಲಿ ಅಪಘಾತ ಸಂಭವಿಸಿದೆ. ಸೈನಿಕರು ಎತ್ತರದ ಪ್ರದೇಶದಲ್ಲಿರುವ ಪೋಸ್ಟ್‌ಗೆ ತೆರಳುತ್ತಿದ್ದಾಗ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, "ಈ ದುರಂತದಿಂದ ನನಗೆ ದುಃಖವಾಗಿದೆ. ಈ ಸಮಯದಲ್ಲಿ, ಇಡೀ ರಾಷ್ಟ್ರವು ದುಃಖಿತ ಕುಟುಂಬಗಳೊಂದಿಗೆ ಒಗ್ಗಟ್ಟು ಮತ್ತು ಬೆಂಬಲದೊಂದಿಗೆ ನಿಂತಿದೆ" ಎಂದು ಹೇಳಿದರು. ಗಾಯಗೊಂಡ ಸೈನಿಕರನ್ನು ಆಸ್ಪತ್ರೆಗೆ ವಿಮಾನದ ಮೂಲಕ ಸಾಗಿಸಲಾಗಿದೆ. ಹಿರಿಯ ಅಧಿಕಾರಿಗಳಿಗೆ ಸಾಧ್ಯವಾದಷ್ಟು ಉತ್ತಮ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ. ಅವರ ಶೀಘ್ರ ಚೇತರಿಕೆಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, "ದೋಡಾದಿಂದ ಬಂದ ದುರಂತ ಸುದ್ದಿ ಕೇಳಿ ನನಗೆ ತುಂಬಾ ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ" ಎಂದು ಹೇಳಿದರು.

ಉಧಮ್‌ಪುರ ಮಿಲಿಟರಿ ಆಸ್ಪತ್ರೆಗೆ ರವಾನೆ

ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆರಂಭದಲ್ಲಿ ನಾಲ್ವರು ಸೈನಿಕರು ಸಾವನ್ನಪ್ಪಿದ್ದು, ಈಗ ಅವರ ಸಂಖ್ಯೆ 11 ಕ್ಕೆ ಏರಿದೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ವಿಶೇಷ ಚಿಕಿತ್ಸೆಗಾಗಿ ಉಧಮ್‌ಪುರದ ಮಿಲಿಟರಿ ಆಸ್ಪತ್ರೆಗೆ ಹೆಲಿಕಾಪ್ಟರ್ ಮೂಲಕ ಸಾಗಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. "ಜೀವ ಕಳೆದುಕೊಂಡ ಸೈನಿಕರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ, ತ್ವರಿತ ರಕ್ಷಣೆ ಮತ್ತು ಗಾಯಗೊಂಡವರನ್ನು ಸ್ಥಳಾಂತರಿಸುವ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ" ಎಂದು ಅವರ ಕಚೇರಿ ಟ್ವೀಟ್ ಮಾಡಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

BMTC ಬಸ್‌ ಟಿಕೆಟ್ ಹಣ ಆನ್‌ಲೈನ್ ಪಾವತಿ ವೇಳೆ ಎಡವಟ್ಟು: 6 ರೂ. ಬದಲು 60 ಸಾವಿರ ರೂ ಪೇ ಮಾಡಿದ ಪ್ರಯಾಣಿಕ
ಗಂಡನ ಮೇಲಿನ ಕೋಪಕ್ಕೆ 18 ತಿಂಗಳ ಮಗುವನ್ನೇ ಚಾಕುವಿನಿಂದ ಇರಿದು ಕೊಂದ ತಾಯಿ