
ನವದೆಹಲಿ (ಡಿ.21): ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಸೇನಾ ಟ್ರಕ್ ಮೇಲೆ ಉಗ್ರರು ಹೊಂಚು ಹಾಕಿ ಹೇಡಿತನದ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದರೆ, ಮೂವರು ಯೋಧರು ಗಾಯಗೊಂಡಿದ್ದಾರೆ. ಈ ಪ್ರದೇಶದಲ್ಲಿ ಎನ್‌ಕೌಂಟರ್ ಮುಂದುವರಿದಿದ್ದು, ಒಂದು ತಿಂಗಳ ಒಳಗಾಗಿ ಎರಡನೇ ಬಾರಿ ಈ ಪ್ರದೇಶದಲ್ಲಿ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ' ರಜೌರಿ ಸೆಕ್ಟರ್‌ನ ಥಾನಮಂಡಿಯ ದೇರಾ ಕಿ ಗಲಿಯಲ್ಲಿ 2 ವಾಹನಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. 3 ಸೈನಿಕರು ಗುಂಡಿನ ಗಾಯಗಳಿಗೆ ಬಲಿಯಾದರು. ಇನ್ನೂ 3 ಮಂದಿ ಗಾಯಗೊಂಡಿದ್ದಾರೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ' ಎಂದು ಪಿಟಿಐ ಟ್ವೀಟ್ ಮಾಡಿದೆ. ಎಲ್ಲಾ ಸೈನಿಕರು 48 ರಾಷ್ಟ್ರೀಯ ರೈಫಲ್ಸ್‌ಗೆ ಸೇರಿದವರಾಗಿದ್ದಾರೆ. ನವೆಂಬರ್ 22 ರಂದು ಇದೇ ಪ್ರದೇಶದಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಕ್ಯಾಪ್ಟನ್ ಎಂಪಿ ಪ್ರಾಂಜಲ್ ಸೇರಿದಂತೆ ಐವರು ಸೈನಿಕರು ಸಾವು ಕಂಡಿದ್ದರು. ಅದಕ್ಕೂ ಮುನ್ನ ಮೇ 5 ರಂದು ಇದೇ ಪ್ರದೇಶದಲ್ಲಿ ನಡೆದ ದಾಳಿಯಲ್ಲಿ ಐದು ಸೈನಿಕರು ಸಾವಿಗೀಡಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ