ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಹಠಾತ್ ಉಗ್ರರ ದಾಳಿ: ಮೂವರು ಸಿಆರ್‌ಪಿಎಫ್ ಸಿಬ್ಬಂದಿಗೆ ಗಾಯ

Published : Nov 11, 2026, 04:27 PM IST
kulgam crpf attack terrorists firing three jawans injured search operation jammu kashmir

ಸಾರಾಂಶ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಅಪರಿಚಿತ ಉಗ್ರರು ದಿಢೀರ್ ಗುಂಡಿನ ದಾಳಿ ನಡೆಸಿದ್ದು, ಮೂವರು ಸಿಆರ್‌ಪಿಎಫ್ ಯೋಧರು ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧರನ್ನು ಅನಂತ್‌ನಾಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ಅವರು ಅಪಾಯದಿಂದ ಪಾರಾಗಿದ್ದಾರೆ. ಉಗ್ರರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಶ್ರೀನಗರ: ಭಾರತದ ಶಿಖರ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿಗಳು ಮತ್ತೊಮ್ಮೆ ಕುಕೃತ್ಯವನ್ನು ಎಸಗಿದ್ದಾರೆ. ಕುಲ್ಗಾಮ್ ಜಿಲ್ಲೆಯ ನಾಕಾ ಪಾಯಿಂಟ್‌ನಲ್ಲಿ ಕರ್ತವ್ಯದಲ್ಲಿದ್ದ ಭದ್ರತಾ ಸಿಬ್ಬಂದಿಯ ಮೇಲೆ ಅಪರಿಚಿತ ಉಗ್ರರು ದಿಢೀರ್ ಗುಂಡಿನ ದಾಳಿ ನಡೆಸಿದ್ದು, ಪರಿಣಾಮವಾಗಿ ಮೂವರು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿ ಗಾಯಗೊಂಡಿದ್ದಾರೆ.

ಮಧ್ಯಾಹ್ನ ಸುಮಾರು 2:15 ರ ವೇಳೆಗೆ ಈ ಭೀಕರ ಕೃತ್ಯ ನಡೆದಿದೆ. ಮೋಟಾರ್ ಸೈಕಲ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ನಾಕಾದಲ್ಲಿ ನಿಯೋಜನೆಗೊಂಡಿದ್ದ ಭದ್ರತಾ ಸಿಬ್ಬಂದಿಯ ಮೇಲೆ ದಿಢೀರನೆ ಗುಂಡಿನ ಸುರಿಮಳೆ ಗೈದು ಸ್ಥಳದಿಂದ ಪರಾರಿಯಾಗಿದ್ದಾರೆ.

ಅನಂತ್‌ನಾಗ್ ಆಸ್ಪತ್ರೆಗೆ ರವಾನೆ, ಜವಾನರು ಅಪಾಯದಿಂದ ಪಾರು

ದಾಳಿಯಲ್ಲಿ ಗಾಯಗೊಂಡ ಸಿಆರ್‌ಪಿಎಫ್ ಸಿಬ್ಬಂದಿಯನ್ನು ತಕ್ಷಣವೇ ಚಿಕಿತ್ಸೆಗಾಗಿ ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗಾಯಾಳು ಸಿಬ್ಬಂದಿಯನ್ನು ರಾಕೇಶ್ ದಾಸ್, ಸಂತೋಷ್ ಚಂದ್ರು ಮತ್ತು ಸೋಮವೀರ್ ಸಿಂಗ್ ಎಂದು ಗುರುತಿಸಲಾಗಿದೆ.

ರಾಕೇಶ್ ದಾಸ್: ಇವರ ಎಡಗಾಲಿಗೆ ಗುಂಡು ತಗಲಿ ಗಾಯವಾಗಿದೆ.

ಸಂತೋಷ್ ಚಂದ್ರು: ಇವರ ಹೊಟ್ಟೆ ಹಾಗೂ ಬೆನ್ನುಮೂಳೆಯ ಭಾಗಕ್ಕೆ ಗಾಯಗಳಾಗಿವೆ.

ಸೋಮವೀರ್ ಸಿಂಗ್: ಇವರ ಎಡಗೈಗೆ ಗುಂಡೇಟು ಬಿದ್ದಿದೆ.

ಪ್ರಸ್ತುತ ಮೂವರೂ ಸಿಬ್ಬಂದಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರ ಮಾಹಿತಿ ಪ್ರಕಾರ ಮೂವರೂ ಜವಾನರು ಅಪಾಯದಿಂದ ಪಾರಾಗಿದ್ದಾರೆ ಎಂದು ಸಿಆರ್‌ಪಿಎಫ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಸ್ಥಳದಲ್ಲಿ ಬಿಗಿನೋಡಿನ ಶೋಧ ಕಾರ್ಯ

ಘಟನೆ ನಡೆದ ಬೆನ್ನಲ್ಲೇ ಇಡೀ ಕುಲ್ಗಾಮ್ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ದಾಳಿ ನಡೆಸಿ ಪರಾರಿಯಾದ ಉಗ್ರರಿಗಾಗಿ ತೀವ್ರ ಶೋಧ ಕಾರ್ಯಾಚರಣೆ (Search Operation) ಆರಂಭಿಸಲಾಗಿದೆ. ಪ್ರಮುಖ ಮಾರ್ಗಗಳಲ್ಲಿ ನಾಕಾ ಬಂದೋಬಸ್ತ್ ಹೆಚ್ಚಿಸಲಾಗಿದ್ದು, ವಾಹನಗಳ ತಪಾಸಣೆ ತೀವ್ರಗೊಳಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೋ, ಅಡುಗೆ ಮನೆ ಮಾಡಿಕೊಂಡಿದ್ದಾರೋ? 3AC ಕೋಚ್‌ನಲ್ಲಿ ಕುಟುಂಬದ ವಿಚಿತ್ರ ವರ್ತನೆ!
'ತಾತನ ಆಸ್ತಿ ತಂದೆಗೆ ಬಂದ ಬಳಿಕ ಮೊಮ್ಮನಿಗೆ ಜನ್ಮಸಿದ್ಧ ಹಕ್ಕು ಇರೋದಿಲ್ಲ'; ಸುಪ್ರೀಂ ಕೋರ್ಟ್ ಮಹತ್ವದ ಆದೇಶ