ಜೈಲಿನಲ್ಲಿ ವಿಶೇಷ ಸೌಲಭ್ಯ ಕೋರಿದ ಗಾಲಿ ಜನಾರ್ದನ ರೆಡ್ಡಿ ಅರ್ಜಿ ತಿರಸ್ಕಾರ

Published : May 16, 2025, 11:08 AM IST
ಜೈಲಿನಲ್ಲಿ ವಿಶೇಷ ಸೌಲಭ್ಯ ಕೋರಿದ ಗಾಲಿ ಜನಾರ್ದನ ರೆಡ್ಡಿ ಅರ್ಜಿ ತಿರಸ್ಕಾರ

ಸಾರಾಂಶ

ಓಬಳಾಪುರಂ ಮೈನಿಂಗ್ ಕಂಪನಿಯ (ಒಎಂಸಿ) ಅಕ್ರಮ ಕಬ್ಬಿಣದ ಅದಿರು ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಜೈಲಿನಲ್ಲಿ ವಿಶೇಷ ಸೌಲಭ್ಯಗಳನ್ನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇಲ್ಲಿನ ಸಿಬಿಐ ನ್ಯಾಯಾಲಯ ತಿರಸ್ಕರಿಸಿದೆ. 

ಹೈದರಾಬಾದ್ (ಮೇ.16): ಓಬಳಾಪುರಂ ಮೈನಿಂಗ್ ಕಂಪನಿಯ (ಒಎಂಸಿ) ಅಕ್ರಮ ಕಬ್ಬಿಣದ ಅದಿರು ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಜೈಲಿನಲ್ಲಿ ವಿಶೇಷ ಸೌಲಭ್ಯಗಳನ್ನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇಲ್ಲಿನ ಸಿಬಿಐ ನ್ಯಾಯಾಲಯ ತಿರಸ್ಕರಿಸಿದೆ. 

ಪ್ರಸ್ತುತ ತೆಲಂಗಾಣದ ಚಂಚಲಗುಡ ಜೈಲಿನಲ್ಲಿರುವ ರೆಡ್ಡಿ, ತಾವು ಮಾಜಿ ಸಚಿವರು ಮತ್ತು ತೆರಿಗೆ ಪಾವತಿದಾರರಾಗಿರುವುದರಿಂದ ಜೈಲರ್‌ಗಳ ಕಾಯ್ದೆಯಡಿಯಲ್ಲಿ ಜೈಲಿನಲ್ಲಿ ‘ಎ’ ದರ್ಜೆಯ ಸೌಲಭ್ಯಗಳನ್ನು ನೀಡುವಂತೆ ಕೋರಿದ್ದರು.  

ಇದನ್ನೂ ಓದಿ:  ಜನಾರ್ದನ ರೆಡ್ಡಿ ಬಂಧನ ಆಯ್ತು, ಲೂಟಿ ಮಾಡಿದ ಕೋಟ್ಯಂತರ ಹಣ ಯಾರು ವಸೂಲಿ ಮಾಡಬೇಕು? : ಉಗ್ರಪ್ಪ

ಆದರೆ ಕೋರ್ಟ್ ಅವರ ಅರ್ಜಿಯ ವಿಚಾರಣೆ ನಡೆಸಲು ನಿರಾಕರಿಸಿದ್ದು, ಹೈಕೋರ್ಟ್‌ಗೆ ತೆರಳಲು ಸೂಚಿಸಿದೆ ಎಂದು ಕಾನೂನು ಮೂಲಗಳು ತಿಳಿಸಿವೆ.ಎ ದರ್ಜೆಯಲ್ಲಿ ಪ್ರತ್ಯೇಕ ಕೋಣೆ, ಹಾಸಿಗೆ, ದಿಂಬು, ದಿನಪತ್ರಿಕೆ, ರೇಡಿಯೋ, ಪ್ರತ್ಯೇಕ ಊಟದ ಸ್ಥಳ, ಮನರಂಜನಾ ಸೌಕರ್ಯಗಳು ಲಭ್ಯವಿರುತ್ತದೆ. ಸುಮಾರು 14 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ಮೇ 6ರಂದು ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯವು ಜನಾರ್ದನ ರೆಡ್ಡಿ ಮತ್ತು ಇತರ ಮೂವರನ್ನು ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ದೋಷಿಗಳೆಂದು ತೀರ್ಪು ನೀಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್