ಗಣರಾಜ್ಯ ದಿನಕ್ಕೂ ಮುನ್ನ ದೆಹಲಿಯಲ್ಲಿ ಉಗ್ರ ಖೆಡ್ಡಾಕ್ಕೆ: 11 ಉಗ್ರ ಕೃತ್ಯಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಮಟ್ಟೂ

Published : Jan 05, 2024, 08:43 AM ISTUpdated : Jan 23, 2024, 12:12 PM IST
ಗಣರಾಜ್ಯ ದಿನಕ್ಕೂ ಮುನ್ನ ದೆಹಲಿಯಲ್ಲಿ ಉಗ್ರ ಖೆಡ್ಡಾಕ್ಕೆ: 11 ಉಗ್ರ ಕೃತ್ಯಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಮಟ್ಟೂ

ಸಾರಾಂಶ

ಮಟ್ಟೂ ಸುಮಾರು 11 ಉಗ್ರ ಕೃತ್ಯಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು, ಈತನ ತಲೆಗೆ 10 ಲಕ್ಷ ರೂ. ಬಹುಮಾನವಿತ್ತು. ಕೇಂದ್ರೀಯ ತನಿಖಾ ಸಂಸ್ಥೆಗಳು ಮತ್ತು ದೆಹಲಿ ಪೊಲೀಸ್‌ ಇಲಾಖೆಯ ವಿಶೇಷ ತನಿಖಾ ದಳ ಈ ಕಾರ್ಯಾಚರಣೆ ನಡೆಸಿದ್ದು, ಬಂಧಿತ ಮಟ್ಟೂನಿಂದ ಒಂದು ಪಿಸ್ತೂಲ್‌, 6 ಜೀವಂತ ಗುಂಡುಗಳು ಮತ್ತು ಒಂದು ಕದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ನವದೆಹಲಿ (ಜನವರಿ 5, 2024): ದೆಹಲಿಯಲ್ಲಿ ಗಣರಾಜ್ಯೋತ್ಸವಕ್ಕೂ ಮುನ್ನ ಭರ್ಜರಿ ಉಗ್ರ ಬೇಟೆ ನಡೆದಿದೆ. ಬಹುದಿನಗಳಿಂದ ಭದ್ರತಾ ಪಡೆಗಳು ಹುಡುಕುತ್ತಿದ್ದ ಹಿಜ್ಬುಲ್‌ ಮುಜಾಹಿದೀನ್‌ ಸಂಘಟನೆಯ ಕಾಶ್ಮೀರ ಮೂಲದ ಉಗ್ರ ಜಾವೇದ್‌ ಅಹ್ಮದ್‌ ಮಟ್ಟೂನನ್ನು ಗುರುವಾರ ಬಂಧಿಸಲಾಗಿದೆ.

ಮಟ್ಟೂ ಸುಮಾರು 11 ಉಗ್ರ ಕೃತ್ಯಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು, ಈತನ ತಲೆಗೆ 10 ಲಕ್ಷ ರೂ. ಬಹುಮಾನವಿತ್ತು. ಕೇಂದ್ರೀಯ ತನಿಖಾ ಸಂಸ್ಥೆಗಳು ಮತ್ತು ದೆಹಲಿ ಪೊಲೀಸ್‌ ಇಲಾಖೆಯ ವಿಶೇಷ ತನಿಖಾ ದಳ ಈ ಕಾರ್ಯಾಚರಣೆ ನಡೆಸಿದ್ದು, ಬಂಧಿತ ಮಟ್ಟೂನಿಂದ ಒಂದು ಪಿಸ್ತೂಲ್‌, 6 ಜೀವಂತ ಗುಂಡುಗಳು ಮತ್ತು ಒಂದು ಕದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನು ಓದಿ: ಸಲ್ಮಾನ್‌ ಖಾನ್‌ ಕೊಲ್ಲೋದಾಗಿ ಬೆದರಿಕೆ ಹಾಕಿದ್ದ ಕುಖ್ಯಾತ ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್‌ಗೆ ಉಗ್ರಗಾಮಿ ಪಟ್ಟ

ಈತ ದೆಹಲಿಗೆ ಆಗಮಿಸುವ ಬಗ್ಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದುಕೊಂಡಿದ್ದ ದೆಹಲಿ ಪೊಲೀಸರು ಈತನನ್ನು ಬಂಧಿಸಲು ಜಾಲ ಹೆಣೆದಿದ್ದರು. ಈತ ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್‌ ನಿವಾಸಿಯಾಗಿದ್ದು, ಜಮ್ಮು-ಕಾಶ್ಮೀರದಲ್ಲಿ ಹಲವು ಉಗ್ರ ಕೃತ್ಯಗಳನ್ನು ನಡೆಸಿದ್ದ. 

ಹಲವು ಬಾರಿ ಅಕ್ರಮವಾಗಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ. ಈತ ಕಾಶ್ಮೀರದಲ್ಲಿ ಉಗ್ರ ಕೃತ್ಯ ಕೈಗೊಳ್ಳಲು ಶಸ್ತ್ರಾಸ್ತ್ರ ಸಾಗಣೆಗೆ ಸಂಚು ರೂಪಿಸಿದ್ದ. ಪಾಕಿಸ್ತಾನದಲ್ಲಿರುವ ಸಂಘಟನೆಯ ಮತ್ತೊಬ್ಬ ಉಗ್ರನನ್ನು ಈತ ಸಂಪರ್ಕಿಸಿದ್ದ. ಈತನ ಸುಳಿವು ನೀಡಿದವರಿಗೆ ಪೊಲೀಸ್‌ ಇಲಾಖೆ ಬಹುಮಾನ ಘೋಷಿಸಿತ್ತು.

ಇದನ್ನೂ ಓದಿ: ಭಾರತದ ಮೇಲೆ ಆರ್ಥಿಕ ದಾಳಿ ನಡೆಸಿ, ಷೇರು ಖರೀದಿ ನಿಲ್ಲಿಸಿ: ಖಲಿಸ್ತಾನಿ ಉಗ್ರ ಪನ್ನು ಕರೆ

ಕಳೆದ ವರ್ಷ ಸ್ವಾತಂತ್ರ್ಯೋತ್ಸವದ ಸಮಯದಲ್ಲಿ ಈತನ ಸೋದರ ಸೋಪೋರ್‌ನ ಮನೆ ಮೇಲೆ ತ್ರಿವರ್ಣ ಧ್ವಜ ಹಾರಿಸಿ ಗಮನ ಸೆಳೆದಿದ್ದ.

ಇದನ್ನು ಓದಿ: ಪಾಕ್‌ನಲ್ಲಿ ಕಂದಹಾರ್‌ ವಿಮಾನ ಹೈಜಾಕ್‌ ರೂವಾರಿ, ಉಗ್ರ ಮಸೂದ್ ಅಜರ್ ಹತ್ಯೆ: ದಟ್ಟ ವದಂತಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಯುನೆಸ್ಕೋ ಪರಂಪರೆ ಪಟ್ಟಿಗೆ ದೀಪಾವಳಿ ಸೇರ್ಪಡೆ!
ಗೃಹ ಸಚಿವ ಅಮಿತ್‌ ಶಾ - ರಾಹುಲ್ ಗಾಂಧಿ ಮತಚೋರಿ ಸಮರ