ಬಿಹಾರದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ರಚನೆ, 9ನೇ ಬಾರಿಗೆ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ!

By Suvarna News  |  First Published Jan 28, 2024, 5:11 PM IST

ಆರ್‌ಜೆಡಿ ಹಾಗೂ ಕಾಂಗ್ರೆಸ್ ಜೊತೆ ಮೈತ್ರಿ ಮುರಿದು ಮತ್ತೆ ಬಿಜೆಪಿಗೆ ತೆಕ್ಕೆಗೆ ಮರಳಿದ ಬಿಹಾರದ ಜೆಡಿಯು ನಾಯಕ ನಿತೀಶ್ ಕುಮಾರ್ ಇದೀಗ ಹೊಸ ಸರ್ಕಾರ ರಚಿಸಿದ್ದಾರೆ. 9ನೇ ಬಾರಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.


ಪಾಟ್ನಾ(ಜ.28) ಕಳೆದ ಕೆಲ ದಿನಗಳಿಂದ ಬಿಹಾರದ ರಾಜಕೀಯದಲ್ಲಿ ಎದ್ದಿದ್ದ ಬಿರುಗಾಳಿಗೆ ಇದೀಗ ಸ್ಪಷ್ಟ ಉತ್ತರ ಸಿಕ್ಕಿದೆ. ಬಿಜೆಪಿ ತೊರೆದು ಆರ್‌ಜೆಡಿ ಹಾಗೂ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದ ನಿತೀಶ್ ಕುಮಾರ್ ಇದೀಗ ಮತ್ತೆ ಬಿಜೆಪಿ ನೇತೃತ್ವದ ಎನ್‌ಡಿಗೆ ಮೈತ್ರಿಗೆ ಮರಳಿದ್ದಾರೆ. ನಿನ್ನೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿತೀಶ್ ಕುಮಾರ್ ಇಂದು ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನತೀಶ್ ಕುಮಾರ್ ಇದೀಗ 9ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬಿಹಾರ ರಾಜ್ಯಪಾಲ ರಾಜೇಂದ್ರ ಅರ್ಲೆಕಾರ್ ನೂತನ ಮುಖ್ಯಮಂತ್ರಿ ನಿತೀಶ್ ಕುಮಾರ್‌ಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. 2020ರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಕೂಟದಲ್ಲಿದ್ದ ನಿತೀಶ್ ಕುಮಾರ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಬಳಿಕ ಎನ್‌ಡಿಎ ತೊರೆದು ಆರ್‌ಜೆಡಿ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದರು. ಇದೀಗ ಈ ಮೈತ್ರಿ ತೊರೆದು ಮತ್ತೆ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ. 

Tap to resize

Latest Videos

ಬಂಡಾಯದ ಬಾವುಟ ಬೀಸಿದ ದಂಡನಾಯಕರು! ಅಂತರ್ಯುದ್ಧಕ್ಕೆ ಛಿದ್ರವಾಗುತ್ತಾ ಘಟಬಂಧನ್..?

ನಿತೀಶ್ ಕುಮಾರ್ ಜೊತೆ ಉಪಮುಖ್ಯಮಂತ್ರಿಗಳಾಗಿ ಬಿಜೆಪಿಯ ವಿಜಯ್ ಸಿನ್ಹಾ ಹಾಗೂ ಸಮರ್ಥ ಚೌಧರಿ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರ ಜೊತೆಗೆ 8 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ.ಪಕ್ಷೇತರ ಅಭ್ಯರ್ಥಿ ಸುಮಿತ್ ಕುಮಾರ್ ಸಿಂಗ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಿಜೆಪಿಯಿಂದ ಪ್ರೇಮ್ ಕುಮಾರ್, ಜೆಡಿಯು ನಾಯಕ ವಿಜಯ್ ಕುಮಾರ್ ಚೌಧರಿ, ಬಿಜೇಂದ್ರ ಪ್ರಸಾದ್ ಯಾದವ್, ಶ್ರವಣ್ ಕುಮಾರ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಿಂದೂಸ್ಥಾನಿ ಅವಾಮ್ ಮೋರ್ಚಾ ನಾಯಕ ಸಂತೋಷ್ ಕುಮಾರ್ ಸಿಂಗ್ ಕೂಡ ಸಚಿವರಾಗಿ ಪಮಾಣವಚನ ಸ್ವೀಕರಿಸಿದ್ದಾರೆ. ಬಿಜೆಪಿಯಿಂದ ಇಬ್ಬರು ಉಪಮುಖ್ಯಮಂತ್ರಿ ಹಾಗೂ ಓರ್ವ ಸಚಿವ ಪ್ರಮಾಣವಚನ ಸ್ವೀಕರಿಸಿದ್ದಾರೆ. 

18 ತಿಂಗಳ ಹಿಂದೆ ಬಿಜೆಪಿ ಮೈತ್ರಿ ತೊರೆದು ಆರ್‌ಜೆಡಿ ಹಾಗೂ ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ರಚಿಸಿದ್ದ ನಿತೀಶ್ ಕುಮಾರ್, ಇಂಡಿಯಾ ಮೈತ್ರಿ ಒಕ್ಕೂಟಕ್ಕೆ ಅಡಿಪಾಯ ಹಾಕಿದ್ದರು. ವಿಪಕ್ಷಗಳನ್ನು ಒಟ್ಟು ಸೇರಿಸಿ ಇಂಡಿಯಾ ಒಕ್ಕೂಟ ರಚನೆ ಮಾಡಿದ ನಿತೀಶ್ ಕುಮಾರ್, ಬಿಹಾರದ ಪಾಟ್ನಾದಲ್ಲೇ ಮೊದಲ ಸಭೆ ಆಯೋಜಿಸಿದ್ದರು. 

ಭಾರತ ರತ್ನ ಘೋಷಿಸಿದ ಕೇಂದ್ರ ಸರ್ಕಾರ, ಬಿಹಾರ ಮಾಜಿ ಸಿಎಂ ಕರ್ಪೂರಿ ಠಾಕೂರ್‌ಗೆ ಮರಣೋತ್ತರ ಪ್ರಶಸ್ತಿ!

ಇಂಡಿಯಾ ಮೈತ್ರಿಯಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೆಚ್ಚಾದ್ದಂತೆ ನಿತೀಶ್ ಕುಮಾರ್ ದಿಢೀರ್ ಯೂ ಟರ್ನ್ ಪಡೆದಿದ್ದಾರೆ. ಇದೀಗ ಬಿಜೆಪಿ ಜೊತೆ ಸೇರಿ ಹೊಸ ಸರ್ಕಾರ ರಚಿಸಿದ್ದಾರೆ. 

click me!