ರಾಜಸ್ಥಾನದಲ್ಲಿ ಶಾಲಾ ಕಟ್ಟಡ ಕುಸಿತ: ಸಾವು, 40 ಮಕ್ಕಳು ಅವಶೇಷಗಳಡಿ ಸಿಲುಕಿರುವ ಶಂಕೆ

Published : Jul 25, 2025, 10:09 AM ISTUpdated : Jul 25, 2025, 03:20 PM IST
Jhalawar school collapse kills 3 children

ಸಾರಾಂಶ

ರಾಜಸ್ಥಾನದ ಝಲಾವರ್‌ನಲ್ಲಿ ಶಾಲಾ ಕಟ್ಟಡ ಕುಸಿತದಿಂದ ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ.  40ಕ್ಕೂ ಹೆಚ್ಚು ಮಕ್ಕಳು ಅವಶೇಷಗಳಡಿ ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ನವದೆಹಲಿ: ರಾಜಸ್ಥಾನದ ಝಲಾವರ್ ಜಿಲ್ಲೆಯಲ್ಲಿ (Rajasthan School Building Collapses in Jhalawar) ಭೀಕರ ಘಟನೆ ನಡೆದಿದೆ. ಶುಕ್ರವಾರ ಪಿಪ್ಲೋಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಕನಿಷ್ಠ  7 ಮಕ್ಕಳು ದುರ್ಮರಣಕ್ಕೊಳಗಾಗಿ,  ಇಬ್ಬರು ಮಕ್ಕಳು ಗಂಭೀರವಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

ಮನೋಹರ್ ಥಾಣೆಯ ಪಿಪ್ಲೋಡಿ ಸರ್ಕಾರಿ ಶಾಲೆಯಲ್ಲಿ ಈ ಘಟನೆ ಬೆಳಿಗ್ಗೆ 8.30 ರ ಸುಮಾರಿಗೆ ಈ ಭೀಕರ ಘಟನೆ ನಡೆದಿದೆ.ಒಂದೇ ಅಂತಸ್ತಿನ ಕಟ್ಟಡದ ಮೇಲ್ಛಾವಣಿ ಕುಸಿದಾಗ ಶಿಕ್ಷಕರು ಮತ್ತು ಸಿಬ್ಬಂದಿ ಸದಸ್ಯರಲ್ಲದೆ ಸುಮಾರು 60 ಮಕ್ಕಳು ಆವರಣದಲ್ಲಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಟ್ಟಡವು ಶಿಥಿಲಾವಸ್ಥೆಯಲ್ಲಿದ್ದು, ಈ ಸಂಬಂಧ ಈ ಹಿಂದೆ ಹಲವಾರು ದೂರುಗಳು ಬಂದಿದ್ದವು. ಶಾಲೆಯು 8 ನೇ ತರಗತಿಯವರೆಗೆ ಇಲ್ಲಿ ಶಿಕ್ಷಣ ನೀಡುತ್ತದೆ. ಮೃತಪಟ್ಟ ಎಲ್ಲಾ ಮಕ್ಕಳು ಎಂಟರಿಂದ 11 ವರ್ಷ ವಯಸ್ಸಿನವರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಛಾವಣಿ ಇದ್ದಕ್ಕಿದ್ದಂತೆ ಕುಸಿದು ಈ ದುರಂತ ನಡೆದಿದೆ.ಸ್ಥಳದಲ್ಲಿ ಸಿಕ್ಕಿಬಿದ್ದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿಯನ್ನು ರಕ್ಷಿಸಲು ಸ್ಥಳೀಯ ನಿವಾಸಿಗಳು ಧಾವಿಸುತ್ತಿರುವ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಘಟನೆ ದುರಂತ ಮತ್ತು ತೀವ್ರ ದುಃಖಕರ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿ ಖೇದ ವ್ಯಕ್ತಪಡಿಸಿದ್ದಾರೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳೊಂದಿಗೆ ನಾವಿದ್ದೇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಅಧಿಕಾರಿಗಳು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತಿದ್ದಾರೆ ಎಂದು ಪೋಸ್ಟ್‌ನಲ್ಲಿ ತಿಳಿಸಲಾಗಿದೆ.

ಅವಶೇಷಗಳಡಿ ಸಿಲುಕಿರುವ ಮಕ್ಕಳನ್ನು ಸುರಕ್ಷಿತವಾಗಿ ಹೊರತೆಗೆಯುವ ಕಾರ್ಯದಲ್ಲಿ 4 ಜೆಸಿಬಿಗಳನನು ಬಳಸಲಾಗಿದೆ, ಗಾಯಾಳು ಮಕ್ಕಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಗೆ ಸಂಬಂಧಿಸಿ ಮುಂದಿನ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ತುರ್ತಾಗಿ ಸಭೆ ನಡೆಸಿದೆ. 

ಹತ್ತು ಮಕ್ಕಳನ್ನು ಝಾಲಾವರ್‌ಗೆ ಕಳುಹಿಸಲಾಗಿದೆ, ಅದರಲ್ಲಿ ಮೂರರಿಂದ ನಾಲ್ವರು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ಝಾಲಾವರ್ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India News Live: ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ಬರ್ಬರ ಹ*ತ್ಯೆ
ಕ್ರೀಡಾ ಕ್ಷೇತ್ರದಲ್ಲಿದ್ದ ಪಕ್ಷಪಾತಕ್ಕೆ ಹಿಂದೆಯೇ ಕಡಿವಾಣ : ಪ್ರಧಾನಿ ನರೇಂದ್ರ ಮೋದಿ